ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಜೂ.1: ರಾಜ್ಯ ಸರಕಾರವು ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ವೈಟ್‍ಫೀಲ್ಡ್ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಧರ್ಮೇಂದ್ರ ಕುಮಾರ್ ಮೀನಾ ಅವರನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ನಿರ್ದೇಶಕ ಹಾಗೂ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಎಸ್.ಗಿರೀಶ್ ಅವರನ್ನು ವೈಟ್‍ಫೀಲ್ಡ್ ವಿಭಾಗದ ಉಪ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
Next Story