Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಾಮಗಾರಿಗಳ ಮೊತ್ತ ಬಿಡುಗಡೆಗೆ...

ಕಾಮಗಾರಿಗಳ ಮೊತ್ತ ಬಿಡುಗಡೆಗೆ ತಡೆಯೊಡ್ಡಬಾರದು: ಗುತ್ತಿಗೆದಾರರ ಸಂಘದಿಂದ ಪತ್ರ

ಜಿ.ಮಹಾಂತೇಶ್ಜಿ.ಮಹಾಂತೇಶ್2 Jun 2023 3:23 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಾಮಗಾರಿಗಳ ಮೊತ್ತ ಬಿಡುಗಡೆಗೆ ತಡೆಯೊಡ್ಡಬಾರದು: ಗುತ್ತಿಗೆದಾರರ ಸಂಘದಿಂದ ಪತ್ರ

ಬೆಂಗಳೂರು: ಹಿಂದಿನ ಬಿಜೆಪಿ ಸರಕಾರವು ಗುತ್ತಿಗೆದಾರರಿಂದ ಶೇ.40ರಷ್ಟು ಕಮಿಷನ್ ನೀಡಬೇಕು ಎಂದು ಬೇಡಿಕೆ ಇಟ್ಟಿದೆ ಎಂದು ಗುತ್ತಿಗೆದಾರರ ಸಂಘವು ಪ್ರಧಾನಿಗೆ ಬರೆದಿದ್ದ ಪತ್ರವನ್ನೇ ಮುಂದಿರಿಸಿಕೊಂಡು ಅಧಿಕಾರಕ್ಕೇರಿರುವ ಕಾಂಗ್ರೆಸ್ ಸರಕಾರಕ್ಕೆ ಮತ್ತೊಮ್ಮೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರು ಕಾಮಗಾರಿಗಳ ಮೊತ್ತ ಬಿಡುಗಡೆಗೆ ತಡೆಯೊಡ್ಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬರೆದಿರುವ ಪತ್ರವು ಬಹಿರಂಗವಾಗಿದೆ.

ಜಲಸಂಪನ್ಮೂಲ, ಲೋಕೋಪಯೋಗಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಸೇರಿದಂತೆ ವಿವಿಧ ಇಲಾಖೆ, ನಿಗಮ ಮತ್ತು ಮಂಡಳಿಗಳಲ್ಲಿ ನಿರ್ವಹಿಸಿರುವ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಡಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘವು ಮಾಡಿದ್ದ ಆರೋಪವು ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಜನಾಭಿಪ್ರಾಯ ರೂಪುಗೊಳ್ಳಲು ಕಾರಣವಾಗಿತ್ತು.

ಇದೇ ಆರೋಪವನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಹಿಂದಿನ ಸರಕಾರದಲ್ಲಿ ಕೈಗೊಂಡಿದ್ದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಬಾರದು ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿತ್ತು. ಆದರೀಗ ಆ ಸೂಚನೆಯನ್ನು ಹಿಂಪಡೆದುಕೊಳ್ಳಬೇಕು ಎಂದು ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿಗೆ 2023ರ ಮೇ 29ರಂದು ಪತ್ರ ಬರೆದಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಪತ್ರವು ‘the file.in’ಗೆ ಲಭ್ಯವಾಗಿದೆ.

ಪತ್ರದಲ್ಲೇನಿದೆ?: ನೀರಾವರಿ, ಲೋಕೋ ಪಯೋಗಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆ, ನಿಗಮ ಮತ್ತು ಮಂಡಳಿಗಳ ಕಾಮಗಾರಿಗಳನ್ನು ತಡೆಹಿಡಿಯುವಂತೆ ಸುತ್ತೋಲೆ ಹೊರಡಿಸಲಾಗಿರುತ್ತದೆ. ಪೂರ್ಣಗೊಂಡಿರುವ ಕಾಮಗಾರಿಗಳ ಬಾಕಿ ಮೊತ್ತವನ್ನೂ ಬಿಡುಗಡೆ ಮಾಡದಂತೆಯೂ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಇದರಿಂದ ಗುತ್ತಿಗೆದಾರರಿಗೆ ತೀವ್ರ ತೊಂದರೆಯಾಗುವುದರ ಜತೆಗೆ ಆರ್ಥಿಕ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಕಾಮಗಾರಿಗಳನ್ನು ನಿಲ್ಲಿಸಿದರೆ ಗುಣಮಟ್ಟ ಕಾಪಾಡಿಕೊಳ್ಳಲು ಅಸಾಧ್ಯವಾಗುತ್ತದೆ. ಅಲ್ಲದೇ ರಾಜ್ಯದ ಮೂಲ ಸೌಕರ್ಯಗಳ ನಿರ್ಮಾಣಕ್ಕೆ ಧಕ್ಕೆ ಉಂಟಾಗುತ್ತದೆ. ಕಾನೂನುಬದ್ಧವಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಮುಂದುವರಿಸಲು ಮತ್ತು ಪೂರ್ಣಗೊಂಡಿರುವ ಕಾಮಗಾರಿಗಳ ಮೊತ್ತವನ್ನು ಬಿಡುಗಡೆ ಮಾಡಲು ಯಾವುದೇ ತಡೆಯೊಡ್ಡಬಾರದು. ಆದ್ದರಿಂದ ಈ ಸಂಬಂಧ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಮನವಿ ಮಾಡಿಕೊಳ್ಳುತ್ತೇವೆ. ಈ ಸಂಬಂಧ ಸಂಬಂಧಪಟ್ಟ ಎಲ್ಲ ಇಲಾಖೆಗಳಿಗೆ ಸೂಚನೆ ನೀಡಬೇಕು ಎಂದು ಪತ್ರದಲ್ಲಿ ಗುತ್ತಿಗೆದಾರರ ಸಂಘವು ಕೋರಿದೆ.

ಕೋಲಾರ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದ ಮುನಿರತ್ನ ಅವರ ಹೆಸರನ್ನು ಮಾಧ್ಯಮಗಳ ಮುಂದೆ ಪ್ರಸ್ತಾಪಿಸಿದ್ದ ಸಂಘವು  ಗುತ್ತಿಗೆದಾರರ ಕೆಲಸ ಮಂಜೂರು ಆಗಬೇಕೆಂದರೆ ಲಂಚ ಕೊಡಬೇಕು, ಇಲ್ಲದಿದ್ದರೆ ಗುತ್ತಿಗೆ ರದ್ದು ಮಾಡಲಾಗುವುದು,ಹಣ ಕಲೆಕ್ಟ್ ಮಾಡಿ ತನ್ನಿ ಎಂದು ತೋಟಗಾರಿಕೆ ಸಚಿವ ಮುನಿರತ್ನ ನೇರವಾಗಿ ಬೆದರಿಕೆ ಹಾಕುತ್ತಾರೆ ಎಂದು ಕೆಂಪಣ್ಣ ದೂರಿದ್ದರು.

ಸರಕಾರದ ಸಚಿವರು, ಶಾಸಕರು ಲಂಚ, ಭ್ರಷ್ಟಾಚಾರದಲ್ಲಿ ನಂಬರ್ 1, 2 ಸ್ಥಾನದಲ್ಲಿದ್ದಾರೆ. ಗುತ್ತಿಗೆದಾರರಿಂದ ಕಾಮಗಾರಿ ಹಣದಲ್ಲಿ ಶೇಕಡಾ 40ರಷ್ಟು ಲಂಚ ಪಡೆಯುತ್ತಾರೆ. ಅವರಿಗೆ ಇಷ್ಟೊಂದು ಲಂಚ ಹೋದರೆ ಉಳಿದ ಹಣದಲ್ಲಿ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಲು ಹೇಗೆ ಸಾಧ್ಯ, ಗುತ್ತಿಗೆದಾರರು ಜನಪ್ರತಿನಿಧಿಗಳ ಕಿರುಕುಳದಿಂದ ನಲುಗಿ ಹೋಗುತ್ತಿದ್ದಾರೆ ಎಂದು ಕೆಂಪಣ್ಣ ಆರೋಪಿಸಿದ್ದರು.

ಒಂದು ವರ್ಷ 2 ತಿಂಗಳಿಂದ ಹೋರಾಟ ಮಾಡುತ್ತಿದ್ದೇವೆ. ಸಿಎಂ ಮಾತಿಗೂ ಬೆಲೆ ಇಲ್ಲದಂತಾಗಿದೆ. ಮಾನ, ಮರ್ಯಾದೆ ಇಲ್ಲದ ಜನ ಪ್ರತಿನಿಧಿಗಳು ಇವರು. ಇನ್ನೂ 22 ಸಾವಿರ ಕೋಟಿ ಬಿಲ್ ಪೆಂಡಿಂಗ್ ಇದೆ. ಕೆಲವರದು 3 ವರ್ಷಗಳಿಂದ ಬಾಕಿ ಇದೆ. ನನ್ನ ಜೀವನದಲ್ಲಿ ನೋಡಿದ ಅತ್ಯಂತ ಭ್ರಷ್ಟ ಸರಕಾರ ಇದಾಗಿದೆ. ಇದರಲ್ಲಿ ಬೊಮ್ಮಾಯಿ ಸೇರಿದಂತೆ ಎಲ್ಲರೂ ಇದ್ದಾರೆ. ಯಾರಿಗೂ ರ್ಯಾಂಕಿಂಗ್ ಕೊಡಲು ಆಗಲ್ಲ ಎಂದು ಆಪಾದಿಸಿದ್ದರು.

ವಿಪಕ್ಷ ನಾಯಕರಾಗಿದ್ದ  ಸಿದ್ದರಾಮಯ್ಯ ಅವರನ್ನೂ ಭೇಟಿ ಮಾಡಿದ್ದ ಗುತ್ತಿಗೆದಾರರ ಸಂಘದ ನಿಯೋಗ ಚರ್ಚೆ ನಡೆಸಿತ್ತು. ಇದನ್ನಾಧರಿಸಿ ಸಿದ್ದರಾಮಯ್ಯ ಅವರು ಸದನದಲ್ಲಿ ಪ್ರಸ್ತಾಪಿಸಿದ್ದನ್ನು ಸ್ಮರಿಸಬಹುದು.

ಇದಕ್ಕೂ ಮುನ್ನ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಂಪರ್ಕಿಸಿದ್ದ ಗುತ್ತಿಗೆದಾರರ ಸಂಘವು ಸುಧಾರಣೆಗಳಿಗೆ ಬೇಡಿಕೆ ಇಟ್ಟಿತ್ತು. ಇದನ್ನಾಧರಿಸಿ ಟೆಂಡರ್ಗಳ ಪರಿಶೀಲನೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.

ಹಾಗೆಯೇ ವಿವಿಧ ಇಲಾಖೆಗಳಲ್ಲಿ ಬಾಕಿ ಇದ್ದ ಬಿಲ್ಗಳನ್ನು ವಿಲೇವಾರಿ ಮಾಡಿತ್ತು.  ಗುತ್ತಿಗೆದಾರರ ಸಂಘವು ಬರೆದಿರುವ ಪತ್ರವನ್ನು ಕಾಂಗ್ರೆಸ್

ರಾಜಕೀಯಕ್ಕೆ ಬಳಸಿಕೊಂಡಿದೆ ಎಂದೂ ಅಂದಿನ ಸಚಿವ ಡಾ.ಕೆ.ಸುಧಾಕರ್ ಅವರು ಪ್ರತಿಕ್ರಿಯಿಸಿದ್ದರು. ಇದು ಕೇವಲ ರಾಜಕೀಯ ಪ್ರೇರಿತ ಯತ್ನ. ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ ಈ ವಿಚಾರವನ್ನು ಹೆಚ್ಚು ಸುದ್ದಿ ಮಾಡುತ್ತದೆ. ಈ ಮೂಲಕ ಬಿಜೆಪಿಯ ಬಗ್ಗೆ ಜನರಲ್ಲಿ ನಕಾರಾತ್ಮಕ ಭಾವನೆ ಉಂಟುಮಾಡಿ ಮತ ಕೇಳಲಾಗುತ್ತದೆ ಎಂದು ಹೇಳಿದ್ದನ್ನು ಸ್ಮರಿಸಬಹುದು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X