ಸಂಪುಟ ಸಭೆಗೂ ಮುನ್ನ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಮಾಲೋಚನೆ
ಬೆಂಗಳೂರು, ಜೂ. 2: ರಾಜ್ಯದ ಜನತೆಯ ಬಹುನಿರೀಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ಮಹತ್ವದ ಸಚಿವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಹಿರಿಯ ಅಧಿಕಾರಿಗಳಾದ ರಜನೀಶ್ ಗೋಯೆಲ್, ಐಎನ್ ಎಸ್ ಪ್ರಸಾದ್, ಎಲ್.ಕೆ.ಅತೀಕ್ ಸೇರಿದಂತೆ ಇನ್ನಿತರರು ಹಾಜರಿದ್ದರು.
Next Story