ಜುಲೈ 1 ರಿಂದ BPL ಕಾರ್ಡ್ದಾರರಿಗೆ ಮಾಸಿಕ 10 ಕೆ.ಜಿ ಅಕ್ಕಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಅವರು ಇಂದು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
'ಜೂನ್ ತಿಂಗಳ ಪಡಿತರ ವಿತರಣೆ ಪ್ರಕ್ರಿಯೆ ಪ್ರಾರಂಭವಾಗಿರುವುದರಿಂದ ಹಾಗೂ ಆಹಾರ ಧಾನ್ಯ ಖರೀದಿಸಬೇಕಾಗಿರುವುದರಿಂದ ಜುಲೈ 1 ರಿಂದ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು. ಅಂತ್ಯೋದಯ ಕಾರ್ಡುದಾರರು ಹಾಗೂ ಬಿಪಿಎಲ್ ಕಾರ್ಡುದಾರರಿಗೆ ಈ ಯೋಜನೆ ಸೌಲಭ್ಯ ದೊರೆಯಲಿದೆ' ಎಂದರು.
Next Story