Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಾಬಾ ರಾಮ್‌ದೇವ್ ಮಾಲಕತ್ವದ...

ಬಾಬಾ ರಾಮ್‌ದೇವ್ ಮಾಲಕತ್ವದ ‘ರುಚಿಗೋಲ್ಡ್’ ಕಂಪೆನಿಯಿಂದ ಪರಿಸರ ಮಾಲಿನ್ಯ: ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ಆರೋಪ

► ‘ರುಚಿಗೋಲ್ಡ್’ಗೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ

2 Jun 2023 11:45 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಾಬಾ ರಾಮ್‌ದೇವ್ ಮಾಲಕತ್ವದ ‘ರುಚಿಗೋಲ್ಡ್’ ಕಂಪೆನಿಯಿಂದ ಪರಿಸರ ಮಾಲಿನ್ಯ: ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ಆರೋಪ
► ‘ರುಚಿಗೋಲ್ಡ್’ಗೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ

ಮಂಗಳೂರು, ಜೂ.2: ನಗರ ಹೊರವಲಯದ ಜೋಕಟ್ಟೆ ಸಮೀಪವಿರುವ ಬಾಬಾ ರಾಮ್‌ದೇವ್ ಮಾಲಕತ್ವದ ‘ರುಚಿಗೋಲ್ಡ್’ ಕಂಪೆನಿಯಿಂದ ಪರಿಸರ ಮಾಲಿನ್ಯವಾಗುತ್ತಿದೆ ಎಂದು ಜೋಕಟ್ಟೆ ನಾಗರಿಕ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ಈ ಕಂಪೆನಿಯು ಪಲ್ಗುಣಿ ನದಿಗೆ ನಿರಂತರವಾಗಿ ಕೈಗಾರಿಕಾ ತ್ಯಾಜ್ಯದ ವಿಷವನ್ನು ಹರಿಸುತ್ತಿದೆ. ಇದರಿಂದ ಪರಿಸರ ಮಾಲಿನ್ಯವಾಗುತ್ತಿದೆ. ಹಾಗಾಗಿ ತಕ್ಷಣ ‘ರುಚಿಗೋಲ್ಡ್’ಗೆ ಬೀಗ ಜಡಿಯಿರಿ. ಭ್ರಷ್ಟ ಪರಿಸರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಪಲ್ಗುಣಿ ನದಿ ಸಹಿತ ತುಳುನಾಡ ಪರಿಸರವನ್ನು ಉಳಿಸಬೇಕು ಎಂದು ಮುನೀರ್ ಕಾಟಿಪಳ್ಳ ಒತ್ತಾಯಿಸಿದ್ದಾರೆ.

ನಾಗರಿಕ ಹೋರಾಟ ಸಮಿತಿಯ ಸತತ ದೂರು, ಪ್ರತಿಭಟನೆಗಳಿಂದಾಗಿ ಪಲ್ಗುಣಿ ನದಿ ಹಾಗೂ ತೋಕೂರು ಹಳ್ಳಕ್ಕೆ ಎಂಆರ್‌ಪಿಎಲ್, ಎಸ್‌ಇಝೆಡ್, ಅದಾನಿ ವಿಲ್ಮರ್, ರುಚಿಗೋಲ್ಡ್ ಮತ್ತಿತರ ಹಲವು ಉದ್ಯಮಗಳು ಕೈಗಾರಿಕಾ ತ್ಯಾಜ್ಯವನ್ನು ನದಿಗೆ ಬಿಡುವ ವಿಷಯ ಹಸಿರು ಪೀಠದ ಮುಂದೆ ಬರುವಂತಾಯಿತು. ಅಲ್ಲದೆ ಜಿಲ್ಲಾಡಳಿತ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಉದ್ಯಮಗಳ ಮೇಲೆ ಕಟುವಾದ ಕ್ರಮಕ್ಕಾಗಿ ನೋಟೀಸುಗಳು ಬಂದಿವೆ.

ಆದರೂ ಈ ಕೈಗಾರಿಕೆಗಳ ಮೇಲೆ ಕಠಿಣ ಕ್ರಮಗಳು ಜರುಗಿಲ್ಲ. ಬಾಬಾ ರಾಮದೇವ್ ಮಾಲಕತ್ವದ ರುಚಿಗೋಲ್ಡ್ ಕಂಪೆನಿಯಂತೂ ದುರಹಂಕಾರದಿಂದ ನಡೆದುಕೊಳ್ಳುತ್ತಿದ್ದು, ತೋಕೂರು ಹಳ್ಳದ ಮೂಲಕ ನೇರವಾಗಿ ಪಲ್ಗುಣಿ ನದಿಗೆ ಮಾರಕ ಕೈಗಾರಿಕಾ ತ್ಯಾಜ್ಯವನ್ನು ಬಹಿರಂಗವಾಗಿ ಹರಿಸುತ್ತಿದೆ ಎಂದು ಆಪಾದಿಸಿದ್ದಾರೆ.

ಈಗಾಗಲೇ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ತ್ಯಾಜ್ಯವನ್ನು ದೊಡ್ಡ ಪ್ರಮಾಣದಲ್ಲಿ ತೋಕೂರು ಹಳ್ಳಕ್ಕೆ ಹರಿಸುತ್ತಿರುವುದನ್ನು ಗುರುತಿಸಿದ್ದಾರೆ. ಈ ಮಧ್ಯೆ ಶುಕ್ರವಾರ ತೋಕೋರು ಹಳ್ಳದಲ್ಲಿ ಶೇಖರಣೆಗೊಂಡಿರುವ ತ್ಯಾಜ್ಯವನ್ನು ಸಂಗ್ರಹಿಸಿ ಬೇರೆಡೆಗೆ ಸಾಗಿಸಲಾಗುತ್ತಿದೆ. ಆ ಮೂಲಕ ಹಸಿರು ಪೀಠ, ಪರಿಸರ ನಿಯಮ ಹಾಗೂ ಜನತೆಯ ಕಣ್ಣಿಗೆ ಮಣ್ಣೆರಚುವ ಕಾರ್ಯ ಮಾಡುತ್ತಿದ್ದಾರೆ. ಸ್ಥಳೀಯ ಶಾಸಕರ ಸಹಿತ ಜಿಲ್ಲೆಯ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು ತುಳುನಾಡಿನ ಭವಿಷ್ಯವನ್ನೇ ಮುಳುಗಿಸುತ್ತಿರುವ ಗಂಭೀರವಾದ ಕೈಗಾರಿಕಾ ಮಾಲಿನ್ಯದ ಕುರಿತು ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಆಪಾದಿಸಿದ್ದಾರೆ.

ಆದಾಗ್ಯೂ ರುಚಿ ಗೋಲ್ಡ್ (ತಾಳೆ ಎಣ್ಣೆ ಘಟಕ)ಗೆ ಬೀಗ ಜಡಿಯಲೇ ಬೇಕು. ತುಳುನಾಡಿನ ಯುವಜನರಿಗೆ ಉದ್ಯೋಗವನ್ನೂ ನಿರಾಕರಿಸಿ, ನೆಲ ಜಲವನ್ನೂ ನಾಶ ಪಡಿಸುವ ಇಂತಹ ಉದ್ಯಮಗಳಿಗೆ ಸರಿಯಾದ ಶಿಕ್ಷೆ ಆಗಲೇಬೇಕು ಎಂದು ಮುನೀರ್ ಕಾಟಿಪಳ್ಳ ಒತ್ತಾಯಿಸಿದ್ದಾರೆ.

ಈಗಾಗಲೇ ನಾವು ಸ್ಥಳ ತನಿಖೆ ನಡೆಸಿದ್ದೇವೆ. ಸೂಕ್ತ ದಾಖಲೆಗಳನ್ನೂ ಸಂಗ್ರಹಿಸಿದ್ದೇವೆ. ನೋಟಿಸ್ ಜಾರಿಯ ಪ್ರಕ್ರಿಯೆ ನಡೆಯುತ್ತಿದೆ ಎಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಂಗಳೂರು ವಲಯ ಅಧಿಕಾರಿ ವಿಜಯಾ ಹೆಗಡೆ ಪ್ರತಿಕ್ರಿಯಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X