15 ಲಕ್ಷ ರೂ. ಕೊಡುತ್ತೇವೆ ಎಂದು ಮೋದಿ ಹೇಳಿದ್ದ ಬಗ್ಗೆ ಸಾಕ್ಷಿ ಕೊಟ್ಟರೆ ರಾಜಕೀಯದಿಂದ ನಿವೃತ್ತಿ: ಎ.ನಾರಾಯಣಸ್ವಾಮಿ
ಮತದಾರರನ್ನು ಭಿಕ್ಷುಕರ ಸಾಲಿನಲ್ಲಿ ನಿಲ್ಲಿಸಲು ಕಾಂಗ್ರೆಸ್ ಷಡ್ಯಂತ್ರ ಮಾಡುತ್ತಿದೆ ಎಂದ ಕೇಂದ್ರ ಸಚಿವ

ಮತದಾರರನ್ನು ಭಿಕ್ಷುಕರ ಸಾಲಿನಲ್ಲಿ ನಿಲ್ಲಿಸಲು ಕಾಂಗ್ರೆಸ್ ಷಡ್ಯಂತ್ರ ಮಾಡುತ್ತಿದೆ ಎಂದ ಕೇಂದ್ರ ಸಚಿವ
ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಎಲ್ಲಾದರೂ ಹೇಳಿದ್ದ ಬಗ್ಗೆ ಸಾಕ್ಷಿ ಕೊಟ್ಟರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಜ್ಯದಲ್ಲಿ ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಗ್ಯಾರೆಂಟಿ ಬಗ್ಗೆ ಮಾತನಾಡಿದ್ದಕ್ಕೆ ಸಾಕ್ಷಿ ಇದೆ. ಮನೆ ಮನೆಗೆ ಸಹಿ ಮಾಡಿ ಗ್ಯಾರೆಂಟಿ ಕೊಟ್ಟಿದ್ದಾರೆ. ಈ ಬಗ್ಗೆ ಜನ ಕೇಳುತ್ತಿದ್ದಾರೆ' ಎಂದು ತಿರುಗೇಟು ನೀಡಿದರು.
''ದೇಶದ ಮತದಾರರನ್ನು ಭಿಕ್ಷುಕರ ಸಾಲಿನಲ್ಲಿ ನಿಲ್ಲಿಸುವ ಷಡ್ಯಂತ್ರವನ್ನು ಕಾಂಗ್ರೆಸ್ ಮಾಡುತ್ತಿದೆ. ಈ ಚುನಾವಣೆಯನ್ನು ಸಿದ್ದಾಂತದ ಆಧಾರದಲ್ಲಿ ಗೆಲ್ಲದೆ, ಗ್ಯಾರೆಂಟಿಗಳ ಆಧಾರದಲ್ಲಿ ಗೆದ್ದಿದ್ದಾರೆ'' ಎಂದು ವಾಗ್ದಾಳಿ ನಡೆಸಿದರು.
Next Story