ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್ ಗೆ ಮತ್ತೆ ಬಿಗ್ ರಿಲೀಫ್: ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು, ಜೂ.2: ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನದ ಆರೋಪ ಹೊತ್ತುಕೊಂಡಿರುವ ನಟ ಚೇತನ್ ಅಹಿಂಸಾ ಅವರ ಸಾಗರೋತ್ತರ ಭಾರತೀಯ ನಾಗರಿಕ(ಒಸಿಐ) ಕಾರ್ಡ್ ಅನ್ನು ರದ್ದುಗೊಳಿಸಿ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶಕ್ಕೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ವಿಸ್ತರಣೆ ಮಾಡಿದೆ.
ಆ ಮೂಲಕ ಗಡಿಪಾರು ಭೀತಿಯಲ್ಲಿದ್ದ ಚೇತನ್‍ಗೆ ಹೈಕೋರ್ಟ್ ಮತ್ತೆ ರಿಲೀಫ್ ಸಿಕ್ಕಂತಾಗಿದೆ. ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನದ ಆರೋಪ ಹಾಗೂ ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆ ಕೇಂದ್ರ ಸರಕಾರ ನೋಟಿಸ್ ನೀಡಿ ಉತ್ತರ ಪಡೆದಿತ್ತು.
ಆದರೆ ಚೇತನ್ ಅವರಿಂದ ಸಮಾಧಾನಕರ ಉತ್ತರ ಸಿಗದ ಹಿನ್ನೆಲೆ 2018 ರಲ್ಲಿ ನೀಡಿದ್ದ ಓವರ್ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ಅನ್ನು ಕೇಂದ್ರ ಸರಕಾರ ರದ್ದುಗೊಳಿಸಿತ್ತು.
ಕೇಂದ್ರ ಸರಕಾರದ ಕ್ರಮದ ವಿರುದ್ಧ ಚೇತನ್ ಅಹಿಂಸಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ ಕೋರ್ಟ್ ಎ.21 ರಂದು ಚೇತನ್‍ಗೆ ಷರತ್ತುಬದ್ಧ ರಿಲೀಫ್ ನೀಡಿತ್ತು. ಈ ಹಿಂದೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಶುಕ್ರವಾರ ಜೂನ್ 20ರ ವರೆಗೆ ವಿಸ್ತರಿಸಿ ಆದೇಶಿಸಿದೆ. ಅಲ್ಲದೆ, ಚೇತನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಸೂಚನೆ ನೀಡಿದೆ.
Karnataka High Court extended the interim stay on an order passed by the Union Government cancelling the Overseas Citizen of India card of Kannada actor and activist Chetan Ahimsa.
— ANI (@ANI) June 2, 2023
(File Photo) pic.twitter.com/hxMTkQ4jET