ಮಕ್ಕಳ ಹಿತದೃಷ್ಟಿಯಿಂದ ಪಠ್ಯ ಬದಲಾವಣೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಬೆಂಗಳೂರು, ಜೂ. 2: ‘ಮಕ್ಕಳ ಹಿತದೃಷ್ಟಿಯಿಂದ ಪಠ್ಯ ಬದಲಾವಣೆ ಮಾಡುವ ನಿಟ್ಟಿನಲ್ಲಿ ಕೆಲವು ತೀರ್ಮಾನ ಮಾಡಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಲೆ ಪೂರ್ಣ ಪ್ರಮಾಣದಲ್ಲಿ ಆರಂಭ ಆಗಲು ಕೆಲವು ದಿನ ಆಗುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ತೊಂದರೆ ಆಗದ ರೀತಿಯಲ್ಲಿ ಪಠ್ಯ ಬದಲಾವಣೆ ಕುರಿತಾಗಿ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಹೇಳಿದರು.
‘ಈಗ ಬದಲಾವಣೆ ಆಗಿರುವ ಪಠ್ಯದಲ್ಲಿ ಯಾವುದನ್ನು ಕೈ ಬಿಡುತ್ತೇವೆ ಎಂಬ ಬಗ್ಗೆ ಈ ಸಂದರ್ಭದಲ್ಲಿ ಹೇಳುವುದಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಪಠ್ಯ ಬದಲಾವಣೆ ಮಾಡುವ ನಿಟ್ಟಿನಲ್ಲಿ ಕೆಲವು ತೀರ್ಮಾನ ಮಾಡಲಾಗುವುದು’ ಎಂದು ಅವರು ನುಡಿದರು.
Next Story