ಸುರತ್ಕಲ್: ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ದೋಚಿ ಪರಾರಿ
ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರಿಂದ ಕೃತ್ಯ

ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರಿಂದ ಕೃತ್ಯ
ಸುರತ್ಕಲ್, ಜೂ. 2: ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ದೋಚಿ ಪರಾರಿಯಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಡಂಬೈಲ್ ಎಂಬಲ್ಲಿ ವರದಿಯಾಗಿದೆ.
ಪುಷ್ಪಾ (70) ಎಂಬವರು ಇಂದು ಬೆಳಗ್ಗೆ ತಡಂಬೈಲ್‌ನ ತನ್ನ ಮನೆಯ ಕಂಪೌಂಡ್ ಒಳಭಾಗದಲ್ಲಿದ್ದ ಬಾವಿಯಿಂದ ನೀರು ಸೇದುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಅವರ ಕುತ್ತಿಗೆಯಲ್ಲಿದ್ದ ಅಂದಾಜು 1.25 ಲಕ್ಷ ರೂ. ಬೆಲೆಯ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದಾರೆ ಎಂದು ಅವರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.
ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.
Next Story