ಒಡಿಶಾ ರೈಲು ಅಪಘಾತದಲ್ಲಿ 50 ಮಂದಿ ಮೃತ್ಯು: ಸಿಎಂ ಸಿದ್ದರಾಮಯ್ಯ ಸಂತಾಪ

ಒಡಿಶಾ: ಬಾಲಸೋರ್ ಜಿಲ್ಲೆಯಲ್ಲಿ ಪ್ಯಾಸೆಂಜರ್ ರೈಲು ಹಳಿತಪ್ಪಿ ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 50 ಮಂದಿ ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಡಿರುವ ಅವರು, 'ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ಕೇಳಿ ಅತೀವ ನೋವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಗಾಯಗೊಂಡಿರುವವರೆಲ್ಲರೂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ' ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಒಡಿಶಾದಲ್ಲಿ ರೈಲು ಅಪಘಾತ: 50 ಮಂದಿ ಮೃತ್ಯು; 300ಕ್ಕೇರಿದ ಗಾಯಾಳುಗಳ ಸಂಖ್ಯೆ
ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ಕೇಳಿ ಅತೀವ ನೋವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ.
— CM of Karnataka (@CMofKarnataka) June 2, 2023
ದುರ್ಘಟನೆಯಲ್ಲಿ ಗಾಯಗೊಂಡಿರುವವರೆಲ್ಲರೂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.#TrainAccident pic.twitter.com/7D8SOr1TCS