ಸಚಿವ ಮಧು ಬಂಗಾರಪ್ಪ ಸ್ವಾಗತಿಸಲು ಸಿಂಗಾರಗೊಂಡ ಸಿಹಿಮೊಗೆ

ಶಿವಮೊಗ್ಗ: ನೂತನ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಅವರನ್ನು ಸ್ವಾಗತಿಸಲು ಶಿವಮೊಗ್ಗ ನಗರವೇ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ.
ಜಿಲ್ಲೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆದ್ದ ಮಧುಬಂಗಾರಪ್ಪ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾಗಿ ಆಯ್ಕೆಯಾಗಿದ್ದಾರೆ.ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕ ಹಿನ್ನಲೆಯಲ್ಲಿ ಮಧು ಬಂಗಾರಪ್ಪ ಅಭಿಮಾನಿಗಳು ಶಿವಮೊಗ್ಗ ನಗರದ ಪ್ರಮುಖ ವೃತ್ತಗಳಿಗೆ ಬಾಳೆಕಂದು,ಮಾವಿನ ತೋರಣ ಹಾಗೂ ಭರ್ಜರಿ ಪ್ಲೆಕ್ಸ್ ಹಾಕಿ ಸ್ವಾಗತಿಸಿದ್ದಾರೆ.
ಮೊದಲ ಬಾರಿಗೆ ಸಚಿವರು ಶಿವಮೊಗ್ಗಕ್ಕೆ ಆಗಮಿಸುತ್ತಿರುವುದು ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮುಡಿಗೊಳಿಸಿದೆ.
ನಗರದ ಎಂಆರ್ ಎಸ್ ವೃತ್ತದಿಂದ ವೇದಿಕೆ ಕಾರ್ಯಕ್ರಮ ನಡೆಯುವ ಲಗಾನ್ ಮಂದಿರದ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಮಧು ಬಂಗಾರಪ್ಪ ಅವರಿಗೆ ಸ್ವಾಗತಕೋರುವ ಫ್ಲೆಕ್ಸ್, ಬಂಟಿಂಗ್ಸ್ ,ಕಾಂಗ್ರೆಸ್ ಬಾವುಟ ರಾರಾಜಿಸುತ್ತಿವೆ.
ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರ ಲಗಾನ್ ಕಲ್ಯಾಣ ಮಂದಿರದಲ್ಲಿ ಸಚಿವ ಮಧು ಬಂಗಾರಪ್ಪ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ.
ಸಮಾರಂಭಕ್ಕೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಸಚಿವರಾದ ಕಿಮ್ಮನೆ ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದರೇಶ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
.jpeg)
