ಒಡಿಶಾದಲ್ಲಿ 3 ರೈಲು ಅಪಘಾತ: ಪರಿಸ್ಥಿತಿ ಅವಲೋಕನಕ್ಕೆ ಸಭೆ ಕರೆದ ಪ್ರಧಾನಿ ಮೋದಿ

ಹೊಸದಿಲ್ಲಿ: ಒಡಿಶಾದಲ್ಲಿ ಶುಕ್ರವಾರ ಸಂಭವಿಸಿದ ರೈಲು ಅಪಘಾತದಲ್ಲಿ 230 ಕ್ಕೂ ಹೆಚ್ಚು ಜನರು ಸಾವನ್ನಪ್ಪಿ , 650ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ರೈಲ್ವೆ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಂಜೆ 7 ಗಂಟೆಗೆ ಬಾಲಸೋರ್‌ನಲ್ಲಿ ರೈಲಿನ ಒಂದು ಬೋಗಿ ಹಳಿತಪ್ಪಿದ ನಂತರ ಮೂರು ರೈಲುಗಳು ಡಿಕ್ಕಿ ಹೊಡೆದುಕೊಂಡಿವೆ.
ಮೂರು ರೈಲುಗಳ ಅಪಘಾತದ ನಂತರದ ರಕ್ಷಣೆ, ಚಿಕಿತ್ಸೆ ಹಾಗೂ ಇತರ ವಿಷಯಗಳ ಬಗ್ಗೆ ಪ್ರಧಾನಿ ಮೋದಿ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಪಘಾತದಲ್ಲಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಹಾಗೂ ಗೂಡ್ಸ್ ರೈಲು ಸೇರಿವೆ.
Next Story