Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್...

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿಸ್ತರಿಸಲು ಎಸ್ ಎಫ್ ಐ ಆಗ್ರಹ

3 Jun 2023 5:53 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿಸ್ತರಿಸಲು ಎಸ್ ಎಫ್ ಐ ಆಗ್ರಹ

ಬೆಂಗಳೂರು: ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‍ನ್ನು ನೀಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಸಂಘಟನೆಯು ಹಲವು ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದೆ. ಆದರೆ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಈ ಬೇಡಿಕೆಯನ್ನು ಈಡೇರಿಸದೆ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟನೆ ಬಿಡುಗಡೆಗೊಳಿಸಿರುವ ಎಸ್ ಎಫ್ ಐ, ಕರ್ನಾಟಕ ರಾಜ್ಯ ಸರ್ಕಾರ ಎಸ್‍ಸಿ-ಎಸ್‍ಟಿ ವಿದ್ಯಾರ್ಥಿಗಳಿಗೆ ಉಚಿತ ಪಾಸ್‍ನ್ನು ಮತ್ತು ಇತರರಿಗೆ ರಿಯಾಯಿತಿ ದರದಲ್ಲಿ ಬಸ್‍ಪಾಸ್ ನೀಡುವ ತಿರ್ಮಾನವನ್ನು ಮಾಡಿ ಈಗಾಗಲೇ ನೀಡುತ್ತಿದೆ. ಇದು ಸ್ವಾಗತಾರ್ಹ. ಆದರೆ ಇತರೆ ವಿದ್ಯಾರ್ಥಿಗಳನ್ನು ಪ್ರತ್ಯೇಕಿಸುವಂತಹ ಕೆಲಸವು  ಇದಾಗುತ್ತದೆ. ಆದ್ದರಿಂದ ಈ ಹಿಂದಿನ ಸರ್ಕಾರದ ನಡೆಯನ್ನು ನಿಲ್ಲಿಸಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್  ಪಾಸ್ ವಿತರಣೆಗೆ ಈಗಿನ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದೆ.

ರಾಜ್ಯದಲ್ಲಿ ಈಗಾಗಲೇ ಶೈಕ್ಷಣಿಕ ವರ್ಷ ಆರಂಭಗೊಂಡಿದೆ. ವಿದ್ಯಾರ್ಥಿಗಳು ಪ್ರಸಕ್ತ ವರ್ಷ ಶಾಲಾ-ಕಾಲೇಜುಗಳಲ್ಲಿ ಅನಧಿಕೃತ ಶುಲ್ಕ ಏರಿಕೆ, ಕೋವಿಡ್ ನಂತರದ ಆರ್ಥಿಕ ಸಂಕಷ್ಟ ಮತ್ತು ಬೆಲೆ ಏರಿಕೆಗಳಿಂದ ರೈತ, ಕೃಷಿ-ಕೂಲಿಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗುವುದರ ಜೊತೆಗೆ ತಮ್ಮ ವಿದ್ಯಾಭ್ಯಾಸವನ್ನು ಮೂಟಕುಗೊಳಿಸಿ ಕೂಲಿ ಕೆಲಸ ಅರಸಿ ದೊಡ್ಡ ದೊಡ್ಡ ನಗರ ಪ್ರದೇಶಗಳತ್ತ ಹೋಗುವಂತಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿದರೆ ಹೆಚ್ಚು ಅನುಕೂಲ ಆಗುತ್ತದೆ. ಯಾವುದೇ ಸರ್ಕಾರ ಆದರೂ ಕೂಡಾ ವಿದ್ಯಾರ್ಥಿ ಸಮುದಾಯದ ಮಧ್ಯೆ ತಾರತಮ್ಯ ಹುಟ್ಟು ಹಾಕುವ ಪ್ರವೃತ್ತಿಯನ್ನು ಮಾಡದೆ ವಿದ್ಯಾರ್ಥಿ ಸಮುದಾಯಕ್ಕೆ ದೂರಕಬೇಕಾದ ಎಲ್ಲಾ ಸೌಲಭ್ಯಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೂ ಸಮಾನವಾಗಿ ದೂರಕುವಂತೆ ಮಾಡಬೇಕು ಒತ್ತಾಯಿಸಿದೆ.

 ರಾಜ್ಯದಲ್ಲಿ ಬಸ್ ಪಾಸ್ ಪ್ರಯಾಣದರ ಇತರೆ ರಾಜ್ಯಗಳಿಗಿಂತ ದುಬಾರಿಯಾಗಿದೆ. ಜೊತೆಗೆ ಅನೇಕ ಹಳ್ಳಿಗಳಿಗೆ   ಸಮರ್ಪಕ ಸಾರಿಗೆ ಸೌಲಭ್ಯವು ಇಲ್ಲ ಇದನ್ನು ಸರಿಪಡಿಸಲು ಮುಂದಾಗಬೇಕು ಹಾಗೂ ಬಸ್ ಪಾಸ್ ದೂರದ ಮಿತಿಯನ್ನು 60ಕೀ ಮೀ ಗೆ ಬದಲಾಗಿ 100 ಕೀ ಮಿ ವ್ಯಾಪ್ತಿಗೆ ಹೆಚ್ಚಿಸಬೇಕು. ಒಂದು ವೇಳೆ ರಾಜ್ಯ ಸರ್ಕಾರ ಉಚಿತ ಬಸ್ ಪಾಸ್ ಬೇಡಿಕೆಯನ್ನು ಈಡೇರಿಸದಿದ್ದರೆ ರಾಜ್ಯದಾದ್ಯಂತ ಎಸ್ ಎಫ್ ಐ ನೇತೃತ್ವದಲ್ಲಿ ವಿದ್ಯಾರ್ಥಿಗಳೊಂದಿಗೆ ಹೋರಾಟ ಮಾಡಿ ಸಾಮೂಹಿಕವಾಗಿ ಬಸ್ ಹತ್ತಿ ಟಿಕೆಟ್ ಪಡೆಯದೇ ಪ್ರಯಾಣ ಮಾಡುವ ವಿನೂತನ ಹೋರಾಟವನ್ನು ಮಾಡಬೇಕಾಗುತ್ತದೆಂದು ಪ್ರಕಟನೆಯಲ್ಲಿ  ಸರ್ಕಾರವನ್ನು ಎಚ್ಚರಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X