ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ನೇತೃತ್ವದಲ್ಲಿ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು.
ಪ್ರಕೃತಿ ವಿಕೋಪ ತಡೆಗಟ್ಟಲು ಮಾಡಿಕೊಂಡಿರುವ ಕ್ರಮಗಳು, 63 ಉಪ ವಲಯಗಳಲ್ಲಿ ಸ್ಥಾಪಿಸಿರುವ ಕಂಟ್ರೋಲ್ ರೂಂಗಳಲ್ಲಿ ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಸಭೆಯಲ್ಲಿ ಮಾಹಿತಿ ಪಡೆಯಲಾಯಿತು.
BWSSB, BESCOM, BDA, BMRCL, KRide, DULT, BMTC ಮತ್ತು ಸಂಚಾರ ಪೋಲಿಸ್ ಇಲಾಖೆಗಳ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.
ವಿಶೇಷ ಆಯುಕ್ತರಾದ ಡಾ. ಹರೀಶ್ ಕುಮಾರ್, ಡಾ. ಆರ್ ಎಲ್ ದೀಪಕ್, ಡಾ. ತ್ರಿಲೋಕ್ ಚಂದ್ರ, ಪ್ರೀತಿ ಗೆಹ್ಲೋಟ್, ರವೀಂದ್ರ, ರೆಡ್ಡಿ, ಶಂಕರ್ ಬಾಬು ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Next Story