ಸಾಬರ ಮನೆಯಲ್ಲಿ 2-3 ಹೆಂಡ್ತಿ ಇದ್ದಾರೆ...: ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ
ಗೃಹ ಲಕ್ಷ್ಮಿ ಯೋಜನೆಯನ್ನು ಟೀಕಿಸುವ ಭರದಲ್ಲಿ ಮುಸ್ಲಿಮರನ್ನು ಎಳೆದು ತಂದ ಸಂಸದ

ಮೈಸೂರು: ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಟೀಕಿಸುವ ಭರದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಾಂಗ್ರೆಸ್ ನ ಗೃಹ ಲಕ್ಷ್ಮಿ ಯೋಜನೆಯಂತೆ 2000 ರೂ. ನೀಡಬೇಂದರೆ ಮನೆ ಯಜಮಾನಿ ಯಾರು ಅಂತಾ ತೀರ್ಮಾನ ಮಾಡಬೇಕಂತೆ? ಮನೆಯೊಳಗೆ ಅತ್ತೆ - ಸೊಸೆ ಕೂತು ಈ ತೀರ್ಮಾನ ಮಾಡಲು ಸಾಧ್ಯನಾ? ಹಿಂದೂಗಳ ಮನೆಯಲ್ಲಾದರೂ ಅತ್ತೆ - ಸೊಸೆ ನಡುವೆ ಯಜಮಾನಿಗೆ ಪೈಪೋಟಿ ಇರುತ್ತೆ. ಆದರೆ, ಸಾಬ್ರ ಮನೆಯಲ್ಲಿ ಎರಡು ಹೆಂಡ್ತಿ ಮೂರು ಹೆಂಡ್ತಿ ಇದ್ದಾರೆ. ಅವರಲ್ಲಿ ಯಾರು ಯಜಮಾನಿ ಆಗುತ್ತಾರೆ? ಅವರ ಮನೆಯೊಳಗೆ ಬೆಂಕಿ ಹಾಕುತ್ತಿದ್ದೀರಿ .ಕುಟುಂಬ ಒಡೆಯುವ ಕೆಲಸ ಆಗುತ್ತಿದೆ' ಎಂದು ಹೇಳಿದ್ದಾರೆ.
'ಕರ್ನಾಟಕಕ್ಕೆ ಶ್ರೀಲಂಕಾ, ಬಾಂಗ್ಲಾದೇಶದ ಸ್ಥಿತಿ ಬರುವ ಕಾಲ ದೂರವಿಲ್ಲ. ಕೇಜ್ರಿವಾಲ್ 2013ರಲ್ಲಿ ಕಳಪೆ ಫ್ರೀ ಯೋಜನೆ ತಂದಿದ್ದರು. ಈಗ ಅದನ್ನೆ ಕಾಂಗ್ರೆಸ್ ಸರಕಾರ ಮಾಡಿದೆ. ಕಾಂಗ್ರೆಸ್ ನ ಪ್ರಣಾಳಿಕೆ ಈಡೇರಿಸಲು ಕೇಂದ್ರ ಬಜೆಟ್ ಹಣ ತಂದರೂ ಆಗಲ್ಲ' ಎಂದು ಪ್ರತಾಪ್ ಸಿಂಹ ಟೀಕಿಸಿದ್ದಾರೆ.