ಒಡಿಶಾ ರೈಲು ದುರಂತ: ಘಟನಾ ಸ್ಥಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ದೂರವಾಣಿ ಮೂಲಕ ಧೈರ್ಯ ತುಂಬಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಒಡಿಶಾದ ಬಾಲಾಸೋರ್ ನಲ್ಲಿ ಮೂರು ರೈಲುಗಳ ನಡುವೆ ನಡೆದಿರುವ ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಸಂಖ್ಯೆ 261ಕ್ಕೆ ಏರಿದೆ ಎಂದು ಆಗ್ನೇಯ ರೈಲ್ವೇಸ್ ಶನಿವಾರ ತಿಳಿಸಿದೆ.
ಅಪಘಾತಕ್ಕೀಡಾದ ರೈಲುಗಳಲ್ಲಿ ಒಂದಾಗಿರುವ ಕೋರಮಂಡಲ ಎಕ್ಸ್ ಪ್ರೆಸ್ ನಲ್ಲಿ ಚಿಕ್ಕಮಗಳೂರು ಜಿಲ್ಲೆಯ 110 ಮಂದಿ ಪ್ರಯಾಣಿಸುತ್ತಿದ್ದು, ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುರಂತ ಸ್ಥಳದಲ್ಲಿ ಸಿಲುಕಿದ್ದ 30ಕ್ಕೂ ಹೆಚ್ಚು ಮಂದಿ ಕನ್ನಡಿಗರ ಜತೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.
ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಕಳುಹಿಸಲಾಗಿದೆ, ಅಗತ್ಯ ಎಲ್ಲಾ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಒಡಿಶಾದ ಬಾಲಸೋರ್ ರೈಲು ದುರಂತದ ಸ್ಥಳದಲ್ಲಿ ಸಿಲುಕಿದ್ದ 30ಕ್ಕೂ ಹೆಚ್ಚು ಮಂದಿ ಕನ್ನಡಿಗರ ಜತೆ ಮುಖ್ಯಮಂತ್ರಿ @siddaramaiah ಅವರು ಮಾತನಾಡಿ, ಸರ್ಕಾರದಿಂದ ಅಗತ್ಯವಿರುವ ಎಲ್ಲಾ ರೀತಿಯ ನೆರವನ್ನು ಒದಗಿಸಿ, ಸುರಕ್ಷಿತವಾಗಿ ವಾಪಾಸ್ ಕರೆ ತರಲಾಗುವುದೆಂದು ಧೈರ್ಯ ತುಂಬಿದರು. pic.twitter.com/LcPmt8Ux7B
— CM of Karnataka (@CMofKarnataka) June 3, 2023