Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಪತ್ನಿಯನ್ನು ಕೊಲೆಗೈದು ಕಥೆ...

ಬೆಂಗಳೂರು: ಪತ್ನಿಯನ್ನು ಕೊಲೆಗೈದು ಕಥೆ ಕಟ್ಟಿದ್ದ ಪತಿ ಬಂಧನ

3 Jun 2023 1:17 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬೆಂಗಳೂರು: ಪತ್ನಿಯನ್ನು ಕೊಲೆಗೈದು ಕಥೆ ಕಟ್ಟಿದ್ದ ಪತಿ ಬಂಧನ

ಬೆಂಗಳೂರು, ಜೂ.3: ಪತ್ನಿಯನ್ನು ಕೊಲೆಗೈದು, ಬಳಿಕ ಆಸ್ಪತ್ರೆಗೆ ಕರೆ ತಂದು ‘ಆಕೆ ಮಾತನಾಡುತ್ತಿಲ್ಲ’ ಎಂದು ಕಥೆ ಕಟ್ಟಿದ್ದ ಪತಿಯನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶರತ್ ಎಂದು ಗುರುತಿಸಲಾಗಿದೆ. ಪ್ರಿಯಾ (19) ಕೊಲೆಯಾದ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೂ.1ರಂದು ಯಶವಂತಪುರದ ಖಾಸಗಿ ಆಸ್ಪತ್ರೆಗೆ ಪತ್ನಿಯ ಮೃತದೇಹದೊಂದಿಗೆ ಬಂದಿದ್ದ ಆರೋಪಿ ಶರತ್ ‘ತನ್ನ ಪತ್ನಿ ಮಾತನಾಡುತ್ತಿಲ್ಲ’ ಎಂದು ಆಸ್ಪತ್ರೆಯಲ್ಲಿ ಗೋಳಾಡುತ್ತಿದ್ದ. ಈ ಬಗ್ಗೆ ವೈದ್ಯರು ಪರಿಶೀಲನೆ ನಡೆಸಿದಾಗ ಆಕೆ ಸಾವನ್ನಪ್ಪಿರುವುದು ತಿಳಿದು ಬಂದಿದೆ. ಪತ್ನಿ ಸಾವನ್ನಪ್ಪಿರುವುದನ್ನು ವೈದ್ಯರು ದೃಢಪಡಿಸಿದ ಬಳಿಕವೂ ಆರೋಪಿ ಶರತ್ ಜೋರಾಗಿ ಗೋಳಾಡತೊಡಗಿದ್ದಾನೆ. ಈ ಸಂಬಂಧ ಆಸ್ಪತ್ರೆ ಸಿಬ್ಬಂದಿ ಅನುಮಾನಾಸ್ಪದ ಸಾವು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಳಿಕ ಮೃತ ಪ್ರಿಯಾಳ ತಾಯಿ ನೀಡಿದ ದೂರಿನನ್ವಯ ಯಶವಂತಪುರ ಠಾಣಾ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ಪ್ರಕರಣದ ತನಿಖೆಗೆ ಮುಂದಾಗಿದ್ದರು.

ಆರೋಪಿ ಶರತ್‍ಗೆ ಪ್ರಿಯಾ ಎರಡನೇ ಹೆಂಡತಿ. ಮದುವೆಯಾಗಿ ಮೊದಲ ಹೆಂಡತಿ ಇದ್ದರೂ ಶರತ್ ಎರಡನೇ ಮದುವೆಯಾಗಿದ್ದ. ಅಲ್ಲದೆ ಆರೋಪಿ ಶರತ್ ಪತ್ನಿ ಪ್ರಿಯಾಳೊಂದಿಗೆ ಯಶವಂತಪುರದ ಸಂಜಯ್ ಗಾಂಧಿ ನಗರದಲ್ಲಿ ವಾಸವಿದ್ದರು. ಇನ್ನು ಪ್ರಿಯಾ ಹಾಗೂ ಶರತ್ ನಡುವೆ ಎರಡು ಮದುವೆ ವಿಚಾರಕ್ಕೆ ಕೆಲ ದಿನಗಳಿಂದ ಜಗಳವಾಗುತ್ತಿತ್ತು ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ. 

ಜೂ.1ರ ಸಂಜೆ ಮತ್ತೆ ಇದೇ ವಿಚಾರವಾಗಿ ಜಗಳ ಆರಂಭವಾಗಿ ಶರತ್ ಪ್ರಿಯಾಳ ಕತ್ತು ಹಿಸುಕಿದ್ದಾನೆ. ಈ ವೇಳೆ ಪ್ರಿಯಾಗೆ ಉಸಿರಾಟದ ತೊಂದರೆಯುಂಟಾಗಿ ಸಾವನ್ನಪ್ಪಿದ್ದಾಳೆ. ಇದರಿಂದ ಗಾಬರಿಗೊಂಡ ಶರತ್ ಘಟನೆಯನ್ನು ಮುಚ್ಚಿಡಲು ಪತ್ನಿಯ ಮೃತದೇಹವನ್ನು ಆಸ್ಪತ್ರೆಗೆ ತಂದು ಗೋಳಾಡುವ ನಾಟಕವಾಡಿದ್ದಾನೆ. ಶರತ್‍ನ ನಾಟಕ ಕಂಡು ಪೊಲೀಸರು ಅನುಮಾನಗೊಂಡಿದ್ದಾರೆ. ಇನ್ನು ಮೃತದೇಹದ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಪ್ರಿಯಾ ಸಾವಿನ ಅಸಲಿ ಸತ್ಯ ಬಯಲಾಗಿದೆ.

ಪ್ರಿಯಾಳ ಮೇಲೆ ಶರತ್ ಹಲ್ಲೆ ನಡೆಸಿ ಕುತ್ತಿಗೆಯ ಬಳಿ ಪಕ್ಕೆಲುಬು ಮುರಿದಿರುವುದು ವರದಿಯಲ್ಲಿ ತಿಳಿದುಬಂದಿದೆ. ಸದ್ಯ ಆರೋಪಿ ಶರತ್‍ನನ್ನು ವಶಕ್ಕೆ ಪಡೆದಿರುವ ಯಶವಂತಪುರ ಪೊಲೀಸರು, ಕೊಲೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಕೈಗೊಂಡಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X