ಒಡಿಶಾ ರೈಲು ದುರಂತ: ನೆರವಿಗೆ ಧಾವಿಸಿದ ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಸಲ್ಲಿಸಿದ ಕ್ರೀಡಾಪಟುಗಳು

ಬೆಂಗಳೂರು, ಜೂ.3: ಕೊಲ್ಕತ್ತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು, ನಿನ್ನೆ ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತದ ಪರಿಣಾಮವಾಗಿ ಮರಳಿ ರಾಜ್ಯಕ್ಕೆ ವಾಪಸ್ ಬರಲು ಪರಿತಪಿಸುತ್ತಿದ್ದ ತಂಡಕ್ಕೆ ರಾಜ್ಯ ಸರಕಾರ ನಿಯೋಜಿಸಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹಾಯ ಹಸ್ತ ಚಾಚಿ ತಂಡ ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್ಸಾಗಲು ನೆರವಾಗಿದ್ದಾರೆ.
ತಂಡದ ತರಬೇತುದಾರರು ಸೇರಿದಂತೆ 32 ಸದಸ್ಯರನ್ನೊಳಗೊಂಡ ತಂಡ ತಮ್ಮ ಸಂಕಷ್ಟವನ್ನು ವೀಡಿಯೊ ಮಾಡಿ ಹೇಳಿಕೊಂಡಿದ್ದರು. ಈ ವೀಡಿಯೊ ತಲುಪಿದ ತಕ್ಷಣ ಕಾರ್ಯ ಪ್ರವೃತ್ತರಾದ ಸಂತೋಷ್ ಲಾಡ್ ಮತ್ತು ಅಧಿಕಾರಿಗಳ ತಂಡ ಎಲ್ಲರಿಗೂ ಬೆಂಗಳೂರಿಗೆ ವಿಮಾನ ಟಿಕೆಟ್ ಹಾಗೂ ಸೂಕ್ತ ವಸತಿ, ಊಟದ ವ್ಯವಸ್ಥೆ ಒದಗಿಸಿದೆ.
ತಮ್ಮ ನೆರವಿಗೆ ಧಾವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ಕಾರ್ಮಿಕ ಸಚಿವ ಲಾಡ್ ಹಾಗೂ ಅಧಿಕಾರಿಗಳಿಗೆ ಕ್ರೀಡಾ ಪಟುಗಳು ಧನ್ಯವಾದ ಅರ್ಪಿಸಿದ್ದಾರೆ. ತಮ್ಮ ತಂಡ ಕೈಗೊಂಡ ರಕ್ಷಣಾ ಮತ್ತು ನೆರವಿನ ಕಾರ್ಯಗಳ ಕುರಿತು ಸಚಿವ ಸಂತೋಷ್ ಲಾಡ್ ದೂರವಾಣಿ ಮೂಲಕ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದಾರೆ.
ಒರಿಸ್ಸಾದಲ್ಲಿ ರೈಲು ಅಪಘಾತದಿಂದ ರೈಲು ಸಂಚಾರ ಸ್ಥಗಿತಗೊಂಡು ಕೋಲ್ಕತ್ತಾದಲ್ಲಿ ಸಿಲುಕಿದ್ದ ಕರ್ನಾಟಕದ ಬಾಲಕಿಯರ ವಾಲಿಬಾಲ್ ತಂಡವನ್ನು ವಿಮಾನದ ಮೂಲಕ ತಾಯ್ನಾಡಿಗೆ ಕರೆತರಲು ವ್ಯವಸ್ಥೆ ಮಾಡಿದ ರಾಜ್ಯ ಸರ್ಕಾರಕ್ಕೆ, ಮುಖ್ಯಮಂತ್ರಿಗಳಿಗೆ ಬಾಲಕಿಯರು ಧನ್ಯವಾದ ತಿಳಿಸಿದ್ದಾರೆ.
— Karnataka Congress (@INCKarnataka) June 4, 2023
ಜನರ ಸಂತಷ್ಟಕ್ಕೆ ಸ್ಪಂದಿಸಲು ನಾವು ತಡಮಾಡುವುದಿಲ್ಲ, ಕನ್ನಡಿಗರ… pic.twitter.com/LPo7bVMktL