Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅನೈತಿಕ ಪೊಲೀಸ್‌ಗಿರಿ ಆರೋಪಿಗಳಿಂದ...

ಅನೈತಿಕ ಪೊಲೀಸ್‌ಗಿರಿ ಆರೋಪಿಗಳಿಂದ ಮುಚ್ಚಳಿಕೆ ಪಡೆದುಕೊಳ್ಳಲಾಗುವುದು: ಕಮಿಷನರ್ ಕುಲದೀಪ್ ಕುಮಾರ್ ಜೈನ್

3 Jun 2023 2:58 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅನೈತಿಕ ಪೊಲೀಸ್‌ಗಿರಿ ಆರೋಪಿಗಳಿಂದ ಮುಚ್ಚಳಿಕೆ ಪಡೆದುಕೊಳ್ಳಲಾಗುವುದು: ಕಮಿಷನರ್ ಕುಲದೀಪ್ ಕುಮಾರ್ ಜೈನ್

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳಲ್ಲಿ ನಡೆದ ಮತೀಯ ಗೂಂಡಾಗಿರಿ ಪ್ರಕರಣಗಳಲ್ಲಿ ನೇರ ಮತ್ತು ಪರೋಕ್ಷವಾಗಿ ಭಾಗಿಯಾದ ಎಲ್ಲರನ್ನೂ ಪೊಲೀಸ್ ಇಲಾಖೆಯು ಗುರುತಿಸಿದೆ. ಈ ಎಲ್ಲಾ ಆರೋಪಿಗಳಿಂದ ಒಂದು ವರ್ಷದ ಮಟ್ಟಿಗೆ ಮುಚ್ಚಳಿಕೆ ಪಡೆದುಕೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಆರೋಪಿಗಳ ವಿರುದ್ಧ ಮನ್ನೆಚ್ಚರಿಕೆಯ ಕ್ರಮವಾಗಿ ಸಿಆರ್‌ಪಿಸಿ 107 ಮತ್ತು 110 ಅಡಿ ಪ್ರಕರಣ ದಾಖಲಿಸಲಾಗುತ್ತದೆ. ಈ ಅವಧಿಯಲ್ಲಿ ಯಾವುದೇ ಶಾಂತಿ ಉಲ್ಲಂಘಿಸಿದರೆ ದಂಡವನ್ನು ವಸೂಲಿ ಮಾಡಲಾಗುತ್ತದೆ. ಒಂದು ವರ್ಷದ ಅವಧಿಯ ಬಳಿಕವೂ ಕಾನೂನು ಉಲ್ಲಂಘಿಸಿದರೆ ಮುಚ್ಚಳಿಕೆಯ ಅವಧಿಯನ್ನು ವಿಸ್ತರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಜೂನ್ 1ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಬೀಚ್‌ನಲ್ಲಿ ವರದಿಯಾದ ಮತೀಯ ಗೂಂಡಾಗಿರಿಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಏಳು ಮಂದಿಯನ್ನು ಜೂನ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಪ್ರಾಪ್ತ ಬಾಲಕನಿಗೆ ಸಂಬಂಧಿಸಿದಂತೆ ನ್ಯಾಯ ಮಂಡಳಿಗೆ ವರದಿಯನ್ನು ಸಲ್ಲಿಸಲಾಗಿದೆ ಎಂದು ಹೇಳಿದರು.

ಕಳೆದ ಒಂದು ವರ್ಷದಲ್ಲಿ ಮುಚ್ಚಳಿಕೆ ಷರತ್ತುಗಳನ್ನು ಉಲ್ಲಂಘಿಸಿದ ಒಂಬತ್ತು ಮಂದಿಯಿಂದ ನಗರ ಪೊಲೀಸರು 1.90 ಲಕ್ಷ ರೂ.  ವಸೂಲಿ ಮಾಡಿದ್ದಾರೆ. ಈ ವರ್ಷ 62 ರೌಡಿ ಶೀಟರ್‌ಗಳನ್ನು ಕಮಿಷನರೇಟ್ ವ್ಯಾಪ್ತಿಯಿಂದ ಹೊರ ಹಾಕಲಾಗಿದೆ. ನಗರದಲ್ಲಿ ವಿವಿಧ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ 1200 ಆರೋಪಿ ಗಳಿಂದ ಮುಚ್ಚಳಿಕೆ ಪಡೆದುಕೊಂಳ್ಳಲಾಗಿದೆ ಎಂದು ಕಮಿಷನರ್ ತಿಳಿಸಿದರು.

ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಂಶುಕುಮಾರ್ ಮಾತನಾಡಿ, ಸೋಮೇಶ್ವರ ಬೀಚ್‌ನಲ್ಲಿ ಮತೀಯ ಗೂಂಡಾಗಿರಿ ಘಟನೆ ವರದಿಯಾದ ಬಳಿಕ ಅಧಿಕ ಸಂಖ್ಯೆಯಲ್ಲಿ ಜನರು ಸೇರುವ ಬೀಚ್‌ಗಳು, ಮಾಲ್‌ಗಳ ಸಹಿತ ಪ್ರಮುಖ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಲು ಕ್ರಮ ಜರಗಿಸಲಾಗಿದೆ. ಈ ಪ್ರದೇಶಗಳಲ್ಲಿ ಸಂಜೆ 5 ರಿಂದ ರಾತ್ರಿ 10 ರವರೆಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X