Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಡಿಯುವ ನೀರಿನಲ್ಲಿ ಉಪ್ಪಿನಾಂಶ: ಸೂಕ್ತ...

ಕುಡಿಯುವ ನೀರಿನಲ್ಲಿ ಉಪ್ಪಿನಾಂಶ: ಸೂಕ್ತ ಕ್ರಮಕ್ಕೆ ಕುಂದಾಪುರ ಶಾಸಕ ಕೊಡ್ಗಿ ಸೂಚನೆ

3 Jun 2023 3:11 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕುಡಿಯುವ ನೀರಿನಲ್ಲಿ ಉಪ್ಪಿನಾಂಶ: ಸೂಕ್ತ ಕ್ರಮಕ್ಕೆ ಕುಂದಾಪುರ ಶಾಸಕ ಕೊಡ್ಗಿ ಸೂಚನೆ

ಕುಂದಾಪುರ: ಪುರಸಭೆ ವ್ಯಾಪ್ತಿಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಕುಡಿಯುವ ನೀರಿನಲ್ಲಿ ಉಪ್ಪಿನಂಶವಿರು ವುದರಿಂದ ಜನರಿಗೆ ಸಮಸ್ಯೆ ಯಾಗುತ್ತಿದೆ. ಜನರು ನಾಲ್ಕು ದಿನಗಳ ಕಾಲ ಉಪ್ಪುಮಿಶ್ರಿತ ನೀರು ಕುಡಿಯಲು ಸಾಧ್ಯವಿಲ್ಲ. ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದ್ದಾರೆ.

ಕುಂದಾಪುರ ಪುರಸಭೆ ಹಾಗೂ ಶುದ್ಧ ಕುಡಿಯುವ ನೀರಿನ ಸರಬರಾಜು ಯೋಜನೆ ಜಲಸಿರಿಗೆ ಸಂಬಂಧಪಟ್ಟವರ ಕಾರ್ಯವೈಖರಿ ಕುರಿತು ಅಸಮಾ ಧಾನ ವ್ಯಕ್ತಪಡಿಸಿ ಅವರು, ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಸ್ತುತ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಪರಿಶೀಲಿಸಿದ ಬಳಿಕ ಜನರಿಗೆ ನೀರು ನೀಡಬೇಕು. ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು. ಒಬ್ಬರನ್ನೊಬ್ಬರು ದೂರಿಕೊಳ್ಳದೇ ನಿತ್ಯದ ಜನಪರ ಕೆಲಸಗಳನ್ನು ಸಮನ್ವಯತೆ ಯಿಂದ ಮಾಡಬೇಕು ಎಂದರು.

‘ಸಣ್ಣ ನೀರಾವರಿ ಇಲಾಖೆ ಸಂಬಂಧಿತ ಕಾಮಗಾರಿಯ ಹಿನ್ನೆಲೆ ಅಣೆಕಟ್ಟಿನ ತಡೆ ಹಲಗೆ ತೆರವು ಮಾಡಿದ್ದರಿಂದ ಕುಡಿಯುವ ನೀರಿನೊಂದಿಗೆ ಉಪ್ಪು ನೀರು ಸೇರಿಕೊಂಡಿದೆ. ಮಾಹಿತಿ ತಿಳಿದ ಕೂಡಲೇ ಅಗತ್ಯ ಕ್ರಮ ಕೈಗೊಂಡು ಜನರಿಗೆ ಸಮಸ್ಯೆಯಾಗದಂತೆ ನೋಡಿಕೊಂಡಿದ್ದೇವೆ ಎಂದು ಜಲಸಿರಿ ಯೋಜನೆಯ ಅಧಿಕಾರಿಗಳು ತಿಳಿಸಿದರು.

ಪುರಸಭೆ ಆಡಳಿತಾಧಿಕಾರಿ ರಶ್ಮೀ ಎಸ್.ಆರ್ ಮಾತನಾಡಿ, ಪುರಸಭೆ ಹಾಗೂ ಜಲಸಿರಿ ನಡುವೆ ಸಮನ್ವಯತೆ ಕೊರತೆ ಕಾಣಿಸುತ್ತಿದೆ. ಜಂಟಿ ಸಭೆ ನಡೆಸಿ ಸಮನ್ವಯತೆ ಸಾಧಿಸಿ ಜನರಿಗೆ ಅನುಕೂಲ ಕಲ್ಪಿಸಲು ಕ್ರಮ ವಹಿಸುತ್ತೇವೆ ಎಂದರು.

ಪುರಸಭೆಯಿಂದ ಜಲಸಿರಿಗೆ ಹಸ್ತಾಂತರಿಸುವ ಪೂರ್ವದಲ್ಲಿ 3300 ನಳ್ಳಿಗಳ ಸಂಪರ್ಕಗಳಿದ್ದವು. ಅದನ್ನು 6450 ಹೆಚ್ಚಿಸುವ ಬಗ್ಗೆ ಕರಾರು ಒಪ್ಪಂದ ಮಾಡಿ ಕೊಳ್ಳಲಾಗಿತ್ತು. ಈಗ 4200 ಆಗಿದ್ದು ನಿಯೋಜಿತ ಗುರಿ ತಲುಪಿಲ್ಲ. ಇದರಿಂದ ಪುರಸಭೆಗೆ ನಷ್ಟವಾಗುತ್ತದೆ. ಗುತ್ತಿಗೆ ವಹಿಸಿಕೊಂಡಿರುವ ಸಂಸ್ಥೆಯ ನಿರ್ವಹಣೆಯ ಬಗ್ಗೆಯೂ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಪುರಸಭೆ ಮುಖ್ಯಾಧಿಕಾರಿ ಮಂಜುನಾಥ ಹೇಳಿದರು.

ಜಲಸಿರಿ ಯೋಜನೆ ಹಸ್ತಾಂತರ ಬಳಿಕ ನಿರಿಕ್ಷಿತ ಕೆಲಸವಾಗಿಲ್ಲ. ಯೋಜನೆ ಪೂರ್ವ ಕರಾರಿನಂತೆಯೂ ನಡೆದು ಕೊಂಡಿಲ್ಲ. ಜಲಸಿರಿ ಯೋಜನೆ ಗುತ್ತಿಗೆ ಕೆಲಸಕ್ಕೆ ನಿಯೋಜಿಸಿದ ನೌಕರರಿಗೆ ಸಕಾಲಕ್ಕೆ ಸಂಬಳ, ಇಎಸ್‌ಐ, ಪಿಎಫ್ ಸೌಕರ್ಯ ಒದಗಿಸಬೇಕೆಂದು ಅವರು ಸಂಬಂದಪಟ್ಟವರಿಗೆ ಸೂಚಿಸಿದರು.

ಯುಜಿಡಿ ಸಮಸ್ಯೆ ಶೀಘ್ರ ಪರಿಹಾರವಾಗಬೇಕು ಎಂದು ಸೂಚಿಸಿದ ಶಾಸಕರು, ಕುಂದಾಪುರ ನಗರದಲ್ಲಿ ಪಾರ್ಕಿಂಗ್ ಸಮಸ್ಯೆ, ರಿಕ್ಷಾ ನಿಲ್ದಾಣಗಳ ಬೇಡಿಕೆಯನ್ನು ಆದ್ಯತೆ ಮೇರೆಗೆ ಗಮನಹರಿಸಿ ಕ್ರಮಕೈಗೊಳ್ಳಲು ತಿಳಿಸಿದರು. ಕುಂದಾಪುರ ಫ್ಲೈಓವರ್ ಕೆಳಭಾಗದಲ್ಲಿ ಖಾಲಿ ಜಾಗವಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರ ಬಳಿ ಮಾತನಾಡಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ಕುರಿತು ವಿಚಾರ ಮಾಡುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಪುರಸಭೆಯಲ್ಲಿ ಸಿಬ್ಬಂದಿ ಕೊರತೆ

ಕುಂದಾಪುರ ಪುರಸಭೆಯಲ್ಲಿ 23 ವಾರ್ಡ್‌ಗಳಿದ್ದು, ಪುರಸಭೆ ಕಚೇರಿಯಲ್ಲಿ ಪೌರಕಾರ್ಮಿಕರ ಸಹಿತ ಒಟ್ಟು 108 ಹುದ್ದೆಗಳಿವೆ. ಆದರೆ ಈಗ 46 ಮಂದಿ ಕಾರ್ಯನಿರ್ವಹಿಸುತ್ತಿದ್ದು 62 ಹುದ್ದೆಗಳು ಖಾಲಿ ಇವೆ ಎಂದು ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್ ತಿಳಿಸಿದರು.

16 ಮಂದಿ ಹೊರಗುತ್ತಿಗೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂದಿನ ತಿಂಗಳು ಒಬ್ಬರು ಎಫ್‌ಡಿಎ ದರ್ಜೆಯವರು ನಿವೃತ್ತಿ ಹೊಂದಲಿದ್ದಾರೆ ಎಂದು ಅವರು ಶಾಸಕರ ಗಮನಕ್ಕೆ ತಂದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X