ಮಂಗಳೂರು ಸೆಂಟ್ರಲ್ - ಸಂತ್ರಗಾಚಿ ವಿವೇಕ್ ಎಕ್ಸ್‌ಪ್ರೆಸ್ ರೈಲು ಸೇವೆ ರದ್ದು

ಮಂಗಳೂರು, ಜೂ.3: ಬಾಲಸೋರ್‌ನಲ್ಲಿ ರೈಲು ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್ - ಸಂತ್ರಗಾಚಿ ವಿವೇಕ್ ಎಕ್ಸ್‌ಪ್ರೆಸ್ ಸೇವೆಯನ್ನು ರದ್ದುಗೊಳಿಸಲಾಗಿದೆ.
ಶನಿವಾರ ರಾತ್ರಿ 11 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಈ ರೈಲು (ರೈಲು ಸಂಖ್ಯೆ 22852) ಹೊರಡ ಬೇಕಿತ್ತು. ರೈಲು ದುರಂತದ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್ - ಸಂತ್ರಗಾಚಿ ವಿವೇಕ್ ವೀಕ್ಲಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ಸೇವೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಎಂದು ರೈಲ್ವೇ ಮೂಲಗಳು ತಿಳಿಸಿದೆ.
Next Story