ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ರಾತ್ರಿ ಕಳೆಯುವ ಕಾರ್ಮಿಕರ ನೆರವಿಗೆ ಧಾವಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಅಗತ್ಯ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾತ ದುರಂತದ ಕಾರಣ ಆ ಮಾರ್ಗದಲ್ಲಿ ಸಂಚರಿಸುವ ಹತ್ತಾರು ರೈಲುಗಳ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳಿಗೆ, ಕೋಲ್ಕತ್ತಾ ಮುಂತಾದ ರಾಜ್ಯಗಳಿಗೆ ತೆರಳ ಬೇಕಿರುವ ಕಾರ್ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲೇ ದಿನ ಕಳೆಯುವಂತಾಗಿದೆ. ಹೀಗಾಗಿ ಇವರೆಲ್ಲರಿಗೂ ಅಗತ್ಯ ಊಟ, ತಿಂಡಿಯ ವ್ಯವಸ್ಥೆ ಮಾಡುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.
ಒಡಿಶಾದಲ್ಲಿ ರೈಲು ಅಪಘಾತ ಸಂಭವಿಸಿರುವ ಕಾರಣ ಆ ಮಾರ್ಗದಲ್ಲಿ ಸಂಚರಿಸುವ ಹತ್ತಾರು ರೈಲುಗಳ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳು, ಕೋಲ್ಕತ್ತಾ ಮುಂತಾದ ಕಡೆಗಳಿಗೆ ತೆರಳಬೇಕಿರುವ ಕಾರ್ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲೇ ದಿನ ಕಳೆಯುವಂತಾಗಿದೆ. ಹೀಗಾಗಿ ಅವರೆಲ್ಲರಿಗೂ ಊಟ, ತಿಂಡಿ ಸೇರಿದಂತೆ ಅಗತ್ಯ…
— CM of Karnataka (@CMofKarnataka) June 3, 2023
ಮಾನ್ಯ ಮುಖ್ಯಮಂತ್ರಿಗಳು @CMofKarnataka @siddaramaiah ಮತ್ತು ಮಾನ್ಯ ಉಪ ಮುಖ್ಯಮಂತ್ರಿಗಳ @DKShivakumar ನಿರ್ದೇಶನದಂತೆ ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು 1/2#BalasoreTrainAccident #OdishaTrainAccident #BBMPCares @SantoshSLadINC @KarnatakaVarthe pic.twitter.com/1avZPlw95D
— Tushar Giri Nath IAS (@BBMPCOMM) June 3, 2023