ಮಂಡ್ಯ | ಲಾರಿಗೆ ಕಾರು ಢಿಕ್ಕಿ: ನಾಲ್ವರು ಯುವಕರು ಸ್ಥಳದಲ್ಲೇ ಮೃತ್ಯು

ನಾಗಮಂಗಲ, ಜೂ.4: ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ತಾಲೂಕಿನ ತಿರುಮಲಾಪುರ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.
ಅಪಘಾತದಲ್ಲಿ ಶರತ್, ನವೀನ್, ಹೇಮಂತ್ ಎಂಬವರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಮತ್ತೋರ್ವನ ಮೃತನ ಹೆಸರು ವಿಳಾಸ ತಿಳಿದುಬಂದಿಲ್ಲ. ಇವರೆಲ್ಲರೂ ನೆಲಮಂಗಲ ಮತ್ತು ಮಾಗಡಿ ಮೂಲದವರು ಎಂದು ಹೇಳಲಾಗುತ್ತಿದೆ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬರುವ ತಿರುಮಲಾಪುರ ಗೇಟ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದವರು ಬೆಂಗಳೂರಿನಿಂದ ಹಾಸನ ಕಡೆ ಹೋಗುತ್ತಿದ್ದರೆನ್ನಲಾಗಿದೆ. ಇವರ ಕಾರು ತಿರುಮಲಾಪುರ ಗೇಟ್ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ತ್ಯಾಜ್ಯ ಸಾಗಾಟದ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ನಾಗಮಂಗಲ ಡಿವೈಎಸ್ಪಿ ಲಕ್ಷ್ಮಿ ಪ್ರಸಾದ್, ಸಿಪಿಐ ನಿರಂಜನ್ ಹಾಗೂ ಬೆಳ್ಳೂರುಪೊಲೀಸ್ ಠಾಣೆ ಪಿಐ ಲೋಕೇಶ್ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
.jpeg)
.jpeg)
.jpeg)
.jpeg)