Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ...

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಸಚಿವರು ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನ ಮಾಡಲಿ

ಡಾ. ರಝಾಕ್ ಉಸ್ತಾದ, ರಾಯಚೂರುಡಾ. ರಝಾಕ್ ಉಸ್ತಾದ, ರಾಯಚೂರು4 Jun 2023 6:59 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಸಚಿವರು ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನ ಮಾಡಲಿ

ವಿಶೇಷವಾಗಿ ಈ ಇಲಾಖೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಇಂತಹ ಸಂದರ್ಭದಲ್ಲಿ ಸಚಿವರು ಮುತುವರ್ಜಿವಹಿಸಿ ಕೆಲಸ ಮಾಡಬೇಕಿದೆ ಮತ್ತು ಸಮುದಾಯದ ಜನರೂ ಇದನ್ನೇ ಬಯಸುತ್ತಿದ್ದಾರೆ. ತಕ್ಷಣ ಸಚಿವರು ಇಲಾಖೆಯಡಿಯಲ್ಲಿ ಯಾವ ಯೋಜನೆಗಳು ಅನುಷ್ಠಾನದಲ್ಲಿವೆ ಮತ್ತು ಎಷ್ಟು ಯೋಜನೆಗಳು ಹಿಂದಿನ ಸರಕಾರ ಅನುಷ್ಠಾನ ಮಾಡದೇ ಕೈಬಿಟ್ಟಿದೆ ಎನ್ನುವುದನ್ನು ಇಲಾಖೆಯಲ್ಲಿ ಹಿಂದೆ ಸೇವೆ ಸಲ್ಲಿಸಿದ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ಪಟ್ಟಿ ಮಾಡುವುದು ಹಾಗೂ ಇಂದು ಸಮುದಾಯ ಆ ಇಲಾಖೆಯ ಮೂಲಕ ಏನನ್ನು ಬಯಸುತ್ತಿದೆ ಎನ್ನುವುದನ್ನು ಅರಿತುಕೊಂಡು ಕಾರ್ಯಯೋಜನೆಯನ್ನು ಸಿದ್ಧಪಡಿಸಿಕೊಳ್ಳಬೇಕಿದೆ.

ಕರ್ನಾಟಕ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಸಚಿವರು ಅತ್ಯಂತ ತ್ವರಿತವಾಗಿ ಹಾಗೂ ಆದ್ಯತೆಯ ಮೇರೆಗೆ ಹಲವು ಯೋಜನೆಗಳನ್ನು ಅನುಷ್ಠಾನ ಮಾಡುವ ಅವಶ್ಯಕತೆಯಿದೆ. ವಿಶೇಷವಾಗಿ ಈ ಇಲಾಖೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಇಂತಹ ಸಂದರ್ಭದಲ್ಲಿ ಸಚಿವರು ಮುತುವರ್ಜಿವಹಿಸಿ ಕೆಲಸ ಮಾಡಬೇಕಿದೆ ಮತ್ತು ಸಮುದಾಯದ ಜನರೂ ಇದನ್ನೇ ಬಯಸುತ್ತಿದ್ದಾರೆ. ತಕ್ಷಣ ಸಚಿವರು ಇಲಾಖೆಯಡಿಯಲ್ಲಿ ಯಾವ ಯೋಜನೆಗಳು ಅನುಷ್ಠಾನದಲ್ಲಿವೆ ಮತ್ತು ಎಷ್ಟು ಯೋಜನೆಗಳು ಹಿಂದಿನ ಸರಕಾರ ಅನುಷ್ಠಾನ ಮಾಡದೇ ಕೈಬಿಟ್ಟಿದೆ ಎನ್ನುವುದನ್ನು ಇಲಾಖೆಯಲ್ಲಿ ಹಿಂದೆ ಸೇವೆ ಸಲ್ಲಿಸಿದ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ಪಟ್ಟಿ ಮಾಡುವುದು ಹಾಗೂ ಇಂದು ಸಮುದಾಯ ಆ ಇಲಾಖೆಯ ಮೂಲಕ ಏನನ್ನು ಬಯಸುತ್ತಿದೆ ಎನ್ನುವುದನ್ನು ಅರಿತುಕೊಂಡು ಕಾರ್ಯಯೋಜನೆಯನ್ನು ಸಿದ್ಧಪಡಿಸಿಕೊಳ್ಳಬೇಕಿದೆ. ಈಗ ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಪ್ರಾರಂಭವಾಗುವ ಸಂದರ್ಭವಾಗಿರುವುದರಿಂದ ಅವುಗಳ ಸಮಸ್ಯೆಗಳನ್ನು ಬಗೆಹರಿಸಬೇಕಿದೆ.

ಇಲಾಖೆಯಲ್ಲಿ ಈಗಾಗಲೇ 200ಕ್ಕೂ ಹೆಚ್ಚು ಮೌಲಾನಾ ಆಝಾದ್ ಮಾದರಿ ಶಾಲೆಗಳು, 100ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, 25 ಮೊರಾರ್ಜಿ ದೇಸಾಯಿ ಪದವಿ ಪೂರ್ವ(ಮಹಿಳಾ) ಕಾಲೇಜುಗಳು ಹಾಗೂ 25 ಅಲ್ಪಸಂಖ್ಯಾತರ ನವೋದಯ ಮಾದರಿ ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಕಳೆದ ವರ್ಷ ಸರಿಯಾದ ಸಮಯದಲ್ಲಿ ಪಠ್ಯಪುಸ್ತಕ ಹಾಗೂ ಇತರ ಸಾಮಗ್ರಿಗಳನ್ನು ಸರಬರಾಜು ಮಾಡಿರುವುದಿಲ್ಲ, ಅವುಗಳನ್ನು ಈಗಿನಿಂದಲೇ ತಯಾರಿ ಮಾಡಿಕೊಂಡರೆ ಕನಿಷ್ಠ ಜುಲೈ ಮೊದಲ ವಾರದಲ್ಲಿ ಸರಬರಾಜು ಮಾಡಬಹುದು.

2022-23ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಲಾದ ಪ್ರೀ ಮೆಟ್ರಿಕ್, ಪೋಸ್ಟ್ ಮೆಟ್ರಿಕ್ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನ ಇಲ್ಲಿಯವರೆಗೆ ವಿತರಣೆಯಾಗಿರುವುದಿಲ್ಲ, ಹಿಂದಿನ ಕಾಂಗ್ರೆಸ್ ಸರಕಾರದಲ್ಲಿ ಆಯಾ ವರ್ಷದ ಮಾರ್ಚ್ ಕೊನೆಯ ವಾರದಲ್ಲಿ ವಿದ್ಯಾರ್ಥಿ ವೇತನ ವಿತರಣೆಯಾಗುತ್ತಿರುವುದನ್ನು ಪರಿಗಣಿಸಬೇಕು, ಅಲ್ಲದೆ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆಯಾಗುತ್ತಿತ್ತು, ಆದರೆ ಕಳೆದ ನಾಲ್ಕು ವರ್ಷಗಳಿಂದ ಕೇವಲ ಕೇಂದ್ರ ಪುರಸ್ಕೃತ ವಿದ್ಯಾರ್ಥಿ ವೇತನ ಮಾತ್ರ ವಿತರಣೆ ಮಾಡಲಾಗಿದ್ದು, ಇದರಿಂದ 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಲಭ್ಯವಾಗಿರುವುದಿಲ್ಲ. ಹಾಗೆಯೇ ಈಗ ಜೂನ್ ತಿಂಗಳು ಎಲ್ಲಾ ಶಾಲಾ-ಕಾಲೇಜುಗಳು ಪ್ರಾರಂಭವಾಗಿರುವುದರಿಂದ ತಕ್ಷಣ ವಿದ್ಯಾರ್ಥಿ ವೇತನ ವಿತರಣೆ ಮಾಡಲು ಕ್ರಮ ಜರುಗಿಸಬೇಕು. ಕೇಂದ್ರ ಸರಕಾರ 1ನೇ ತರಗತಿಯಿಂದ 8ನೇ ತರಗತಿ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಿದ್ದು, ಇದರಿಂದ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ, ಅದನ್ನು ರಾಜ್ಯ ಸರಕಾರದಿಂದ ವಿತರಣೆಗೆ ಕ್ರಮ ಜರುಗಿಸಬೇಕಿದೆ.

 ಅಲ್ಲದೆ, ಹಿಂದಿನ ಕಾಂಗ್ರೆಸ್ ಸರಕಾರದಲ್ಲಿ ವಿದ್ಯಾಸಿರಿ ಯೋಜನೆ ಹಾಗೂ ಶುಲ್ಕವಿನಾಯಿತಿ ಯೋಜನೆಯನ್ನು ವಿದ್ಯಾರ್ಥಿಗಳಿಗಾಗಿ ಅನುಷ್ಠಾನ ಮಾಡುತ್ತಿದ್ದು, ಬಿಜೆಪಿ ಸರಕಾರ ಅವುಗಳ ಭೌತಿಕ ಗುರಿಯನ್ನು ಕಡಿತಗೊಳಿಸಿದೆ, ಅದರ ಬಗ್ಗೆ ಪರಿಶೀಲನೆ ಮಾಡಿ ಅರ್ಹ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಹಾಗೂ ಶುಲ್ಕವಿನಾಯಿತಿ ಮೊತ್ತವನ್ನು ತಕ್ಷಣ ಮಂಜೂರು ಮಾಡಬೇಕಿದೆ.

ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಉರ್ದು ಶಾಲೆಗಳ ಅಭಿವೃದ್ಧಿಗಾಗಿ 9 ಅಂಶಗಳ ಕಾರ್ಯಕ್ರಮ ಅನುಷ್ಠಾನದಲ್ಲಿದ್ದು, ಅದು ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದೆ. ಇದರಿಂದಾಗಿ ಉರ್ದು ಶಾಲೆಗಳ ಸ್ಥಿತಿ ಶೋಚನೀಯವಾಗಿದೆ. ಹಾಗಾಗಿ ಈ ತಕ್ಷಣ ಸೂಕ್ತ ಅನುದಾನ ನಿಗದಿಗೊಳಿಸಿ ಸದರಿ ಯೋಜನೆಯನ್ನು ಮರುಜಾರಿಗೊಳಿಸಲು ಕ್ರಮ ಜರುಗಿಸಬೇಕಿದೆ.

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ವಿದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಲು ಜಾರಿಯಲ್ಲಿದ್ದ ಯೋಜನೆಯನ್ನು ಹೆಚ್ಚಿನ ಮೊತ್ತದ ವಿದ್ಯಾರ್ಥಿ ವೇತನದೊಂದಿಗೆ ಮರು ಜಾರಿಗೊಳಿಸಲು ಕ್ರಮವಹಿಸಬೇಕಿದೆ. ಅದೇ ರೀತಿ, ಅಲ್ಪಸಂಖ್ಯಾತ ಸಮುದಾಯದ ಯುವಕರಿಗೆ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗೆ ತರಬೇತಿ ನೀಡುವ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಯೋಜನೆ ಕಳೆದ ನಾಲ್ಕು ವರ್ಷಗಳಲ್ಲಿ ಸಮರ್ಪಕವಾಗಿ ಅನುಷ್ಠಾನವಾಗಿರುವುದಿಲ್ಲ, ಇದರಿಂದ ನೂರಾರು ಬಡ ಪ್ರತಿಭಾನ್ವಿತ ಯುವಕರು ಅವಕಾಶದಿಂದ ವಂಚಿತಗೊಂಡಿದ್ದಾರೆ. ಈ ಯೋಜನೆಯನ್ನು ತಕ್ಷಣದಿಂದ ಜಾರಿಗೊಳಿಸಲು ಸೂಕ್ತ ಕ್ರಮ ಜರುಗಿಸಬೇಕಿದೆ.

ಈಗ 2023-24ನೇ ಸಾಲಿನ ವೃತ್ತಿಪರ ಕೋರ್ಸಿನ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತದೆ, ಈ ಹಿಂದೆ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಅರಿವು ಯೋಜನೆಯ ಮೂಲಕ ಶೈಕ್ಷಣಿಕ ಸಾಲ ನೀಡುವ ಯೋಜನೆ ಜಾರಿಯಲ್ಲಿತ್ತು. ಈ ಯೋಜನೆ ಜಾರಿಗೊಳಿಸಲು ಹಿಂದಿನ ಕಾಂಗ್ರೆಸ್ ಸರಕಾರ ಮುಂಗಡವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಅನುದಾನವನ್ನು ಪಾವತಿಸಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪ್ರವೇಶ ಪಡೆಯುವ ಸಂದರ್ಭದಲ್ಲಿ ಯಾವುದೇ ಶುಲ್ಕ ಪಾವತಿಸದೆ ನೇರವಾಗಿ ನಿಗಮಕ್ಕೆ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದಾಗಿತ್ತು. ಆದರೆ ಬಿಜೆಪಿ ಸರಕಾರ ಈ ಯೋಜನೆಗೆ ನಿಗದಿಗೊಳಿಸಲಾದ ಅನುದಾನದ ಮೊತ್ತವನ್ನು ಕಡಿತಗೊಳಿಸಿ, ಯಾರೂ ಪ್ರವೇಶ ಪಡೆಯದ ರೀತಿ ದ್ವೇಷ ಸಾಧಿಸಿರುತ್ತದೆ. ತಕ್ಷಣ ಇಲಾಖೆ ಸದರಿ ಯೋಜನೆಯನ್ನು ಪೂರ್ಣ ಪ್ರಮಾಣದ ಅನುದಾನದೊಂದಿಗೆ ಮರುಜಾರಿಗೊಳಿಸಬೇಕು.

ಕಳೆದ ಕೆಲವು ವರ್ಷಗಳಿಂದ ಕೇಂದ್ರ ಪ್ರಾಯೋಜಕತ್ವದ ಪ್ರಧಾನ ಮಂತ್ರಿ ಜನವಿಕಾಸ ಯೋಜನೆ (ಎಂ.ಎಸ್.ಡಿ.ಪಿ.) ಅಡಿಯಲ್ಲಿ ಯಾವುದೇ ಪ್ರಸ್ತಾವನೆ ಸಲ್ಲಿಸಿರುವುದಿಲ್ಲ, ಸರಕಾರ ಸದರಿ ಯೋಜನೆ ವ್ಯಾಪ್ತಿಯಲ್ಲಿ ಬರುವ ತಾಲೂಕು, ಬ್ಲಾಕ್ ಹಾಗೂ ನಗರ ಪ್ರದೇಶಗಳ ಬೇಡಿಕೆಯನುಸಾರ ಹೊಸದಾಗಿ ಪ್ರಸ್ತಾವನೆ ಸಲ್ಲಿಸಬೇಕು ಹಾಗೂ ಯೋಜನೆಯಲ್ಲಿ ಬರುವ ಎಲ್ಲಾ ಸೆಕ್ಟರ್ಗಳನ್ನು ಅನುಷ್ಠಾನ ಮಾಡಬೇಕಿದೆ.

ರಾಜ್ಯದಲ್ಲಿ ಇರುವ ಅಲ್ಪಸಂಖ್ಯಾತರ ಇಲಾಖೆಯ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಪ್ರವೇಶ ಸಂಖ್ಯೆಯನ್ನು ಬೇಡಿಕೆಯನುಸಾರ ಹೆಚ್ಚಿಸುವ ಬಗ್ಗೆ ಈಗಲೇ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕಿದೆ, ಬಹುತೇಕ ನಗರ ಪ್ರದೇಶಗಳಲ್ಲಿ ವಿದ್ಯಾರ್ಥಿ ವಸತಿ ನಿಲಯಗಳ ಕೊರತೆಯಿದ್ದು, ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಬೇಡಿಕೆ ಹೆಚ್ಚಾಗಿರುತ್ತದೆ, ಹಿಂದಿನ ಮೂರು ವರ್ಷದ ಮಾಹಿತಿ ಪಡೆದು, ಹೆಚ್ಚುವರಿ ಪ್ರವೇಶಕ್ಕೆ ಮಂಜೂರಾತಿ ನೀಡಬೇಕು.

ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮಕ್ಕೆ ಕನಿಷ್ಠ 1,000 ಕೋ.ರೂ ಅನುದಾನ ನಿಗದಿಗೊಳಿಸಿ, ವಿವಿಧ ಫಲಾನುಭವಿಗಳ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವಲ್ಲಿ ಭೌತಿಕ ಗುರಿಯನ್ನು ಹೆಚ್ಚಿಸುವುದು ಹಾಗೂ ಸಮುದಾಯದ ಬೇಡಿಕೆಯಂತೆ ಹೊಸ ಯೋಜನೆಗಳನ್ನು ಅನುಷ್ಠಾನ ಮಾಡುವ ಬಗ್ಗೆ ಚಿಂತಿಸಬೇಕಿದೆ.

ವಕ್ಫ್ ಮಂಡಳಿ ವ್ಯಾಪ್ತಿಯಲ್ಲಿ ವಕ್ಫ್ ಮಹಿಳಾ ಫೌಂಡೇಶನ್ ಕಾರ್ಯನಿರ್ವಹಿಸುತ್ತಿದ್ದು, ಇದರ ಕೇಂದ್ರ ಕಚೇರಿ ಮಾತ್ರವಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಮಹಿಳೆಯರು ಯೋಜನೆಗಳ ಪ್ರಯೋಜನ ಪಡೆಯಲು ಕೇಂದ್ರ ಕಛೇರಿಗೆ ಬರುವುದು ಕಷ್ಟಸಾಧ್ಯವಿದ್ದು, ಇದನ್ನು ವಿಕೇಂದ್ರೀಕರಣಗೊಳಿಸುವ ಕೆಲಸವಾಗಬೇಕಿದೆ, ಜಿಲ್ಲೆಯಲ್ಲಿ ಇರುವ ವಕ್ಫ್ ಕಚೇರಿಯಲ್ಲಿ ಒಂದು ಸೆಕ್ಷನ್ ವಕ್ಫ್ ಮಹಿಳಾ ಫೌಂಡೇಶನ್ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಜವಾಬ್ದಾರಿ ನಿಗದಿಗೊಳಿಸಬಹುದು, ಅಲ್ಲದೆ ಕಳೆದ ಹಲವು ವರ್ಷಗಳಿಂದ ವಕ್ಫ್ ಮಹಿಳಾ ಫೌಂಡೇಶನ್ಗೆ ಹೊಸ ಯೋಜನೆಗಳು ಜಾರಿಗೊಳಿಸಲು ಮುಂದಾಗಿರುವುದಿಲ್ಲ, ತಕ್ಷಣ ಸರಕಾರ ಸದರಿ ಫೌಂಡೇಶನ್ಗೆ ಹೆಚ್ಚುವರಿ ಅನುದಾನ ಒದಗಿಸಿ, ಹೊಸ ಯೋಜನೆಗಳನ್ನು ರೂಪಿಸಲು ಅವಕಾಶ ಮಾಡಿಕೊಡಬೇಕಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಿಂದ ಆದ್ಯತೆಯ ಮೇರೆಗೆ ಇಲಾಖೆಯನ್ನು ಚುರುಕುಗೊಳಿಸುವ ಕೆಲಸ ವಾಗಬೇಕಿದೆ. ಇದನ್ನೇ ಸಮುದಾಯವೂ ಸಹ ಬಯಸುತ್ತಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ಡಾ. ರಝಾಕ್ ಉಸ್ತಾದ, ರಾಯಚೂರು
ಡಾ. ರಝಾಕ್ ಉಸ್ತಾದ, ರಾಯಚೂರು
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X