Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾಸಿಕ ಪಿಂಚಣಿ ಯೋಜನೆಗಳಿಗೆ ನಕಲಿ ಆಧಾರ್...

ಮಾಸಿಕ ಪಿಂಚಣಿ ಯೋಜನೆಗಳಿಗೆ ನಕಲಿ ಆಧಾರ್ ಹಾವಳಿ

► ಫಲಾನುಭವಿಗಳಿಗೆ ಎರಡೆರಡು ಪಿಂಚಣಿ ಪಾವತಿ ► ರಾಜ್ಯದಲ್ಲಿ 39,689 ನಕಲಿ ಆಧಾರ್ ಕಾರ್ಡ್ ಪ್ರಕರಣ

ಜಿ.ಮಹಾಂತೇಶ್ಜಿ.ಮಹಾಂತೇಶ್5 Jun 2023 9:38 AM IST
share
ಮಾಸಿಕ ಪಿಂಚಣಿ ಯೋಜನೆಗಳಿಗೆ ನಕಲಿ ಆಧಾರ್ ಹಾವಳಿ
► ಫಲಾನುಭವಿಗಳಿಗೆ ಎರಡೆರಡು ಪಿಂಚಣಿ ಪಾವತಿ ► ರಾಜ್ಯದಲ್ಲಿ 39,689 ನಕಲಿ ಆಧಾರ್ ಕಾರ್ಡ್ ಪ್ರಕರಣ

ಬೆಂಗಳೂರು, ಜೂ.4: ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ವೇತನ, ಅಂಗವಿಕಲರ ವೇತನ, ಮನಸ್ವಿನಿ, ಮೈತ್ರಿ, ಆ್ಯಸಿಡ್ ದಾಳಿಗೆ ಒಳಗಾದ ಮಹಿಳೆಯರಿಗೆ ಪಿಂಚಣಿ, ರೈತ ವಿಧವಾ ವೇತನ ಯೋಜನೆಗಳ ಫಲಾನುಭವಿಗಳಾಗಿದ್ದು, ಪಿಂಚಣಿ ಯೋಜನೆಗೂ ಆಯ್ಕೆಯಾಗಿರುವ ಫಲಾನುಭವಿಗಳಿಗೆ  ಎರಡೆರಡು ಪಿಂಚಣಿ ಪಾವತಿ ಮಾಡಲಾಗುತ್ತಿದೆ ಎಂಬುದು ಇದೀಗ ಬಹಿರಂಗವಾಗಿದೆ.

ಮಾಸಿಕ ಪಿಂಚಣಿ ಯೋಜನೆಗಳನ್ನು ಆಧಾರ್ ಆಧಾರಿತ ನೇರ ಹಣ ಸಂದಾಯ ಯೋಜನೆಯಡಿ ತರಲು ನಿರ್ಧರಿಸುವ ಸಂಬಂಧ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯವು 2023ರ ಮೇ 24 ಮತ್ತು 25ರಂದು ನಡೆಸಿದ ವೀಡಿಯೊ ಸಂವಾದದಲ್ಲಿ ಈ ವಿಚಾರವು ಪ್ರಸ್ತಾಪವಾಗಿದೆ.

ಮಾಸಿಕ ಪಿಂಚಣಿ ಯೋಜನೆಗಳನ್ನು ಆಧಾರ್ ಆಧಾರಿತ ನೇರ ಹಣ ಸಂದಾಯ ಯೋಜನೆಯಡಿ ತರಬೇಕು ಎಂದು ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯವು 2023ರ ಜೂನ್ 2ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿದೆ. ಈ ಪತ್ರದ ಪ್ರತಿಯು ‘ಠಿಛಿ ್ಛಜ್ಝಿಛಿ.ಜ್ಞಿ’ಗೆ ಲಭ್ಯವಾಗಿದೆ.

‘ರಾಜ್ಯದಲ್ಲಿ 39,689  ನಕಲಿ ಆಧಾರ್ ಪ್ರಕರಣಗಳಿವೆ. ಈ ಪ್ರಕರಣಗಳ ಸಂಬಂಧ  ಜಿಲ್ಲೆಗಳಲ್ಲಿ ಪರಿಶೀಲಿಸಿ ಒಬ್ಬ ಫಲಾನುಭವಿ ಎರಡೆರಡು ಪಿಂಚಣಿ ಪಡೆಯುತ್ತಿದ್ದಲ್ಲಿ ಸರಿಯಾದ ಮಾಹಿತಿಯುಳ್ಳ ಪ್ರಕರಣವನ್ನು ಉಳಿಸಿಕೊಂಡು ಇನ್ನೊಂದು ಪ್ರಕರಣವನ್ನು ರದ್ದುಪಡಿಸಬೇಕು. ಒಂದೇ ಆಧಾರ್ ಸಂಖ್ಯೆಯನ್ನು ಒಬ್ಬರು ಹಾಗೂ ಅದಕ್ಕಿಂತ ಹೆಚ್ಚಿನ

ಫಲಾನುಭವಿಗಳಿಗೆ ಜೋಡಣೆಯಾಗಿದ್ದಲ್ಲಿ ಅಂತಹ ಪ್ರಕರಣಗಳಲ್ಲಿ ಫಲಾನುಭವಿಗಳ ಸರಿಯಾದ ಮಾಹಿತಿಯನ್ನು ಸಂಗ್ರಹಿಸಿ ಸರಿಯಾದ ಆಧಾರ್ ಮಾಹಿತಿಯನ್ನು ಫಲಾನುಭವಿಗೆ ಜೋಡಣೆ ಮಾಡಬೇಕು’ ಎಂದು ನಿರ್ದೇಶಿಸಿರುವುದು ಪತ್ರದಿಂದ ಗೊತ್ತಾಗಿದೆ.

ನಿರ್ದೇಶನಾಲಯದ ನಿರ್ದೇಶಕರು ಬರೆದಿರುವ ಪತ್ರದ ಪ್ರಕಾರ ಫಲಾನುಭವಿಗಳಿಗೆ ಎರಡೆರಡು ಪಿಂಚಣಿ ಪಾವತಿಯಾಗುತ್ತಿರುವ ಈ   ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆಯೇ ಎಂಬ ಅನುಮಾನಗಳಿಗೂ ದಾರಿಮಾಡಿಕೊಟ್ಟಂತಾಗಿದೆ.

ರಾಜ್ಯದಲ್ಲಿ ಇನ್ನೂ 69,745 ಪ್ರಕರಣಗಳು ಆಧಾರ್ ಸೀಡಿಂಗ್ಗೆ ಬಾಕಿ ಇವೆ. ಈ ಕುರಿತು ಕೂಡಲೇ ಪರಿಶೀಲಿಸಿ ಗ್ರಾಮ ಲೆಕ್ಕಾಧಿಕಾರಿ ಹಾಗೂ ರಾಜಸ್ವ ನಿರೀಕ್ಷಕರಿಗೆ ಪಟ್ಟಿಯನ್ನು ಒದಗಿಸಿ ಅರ್ಹ ಫಲಾನುಭವಿಗಳಿಂದ ಬಾಕಿ ಇರುವ ಪ್ರಕರಣಗಳ ಆಧಾರ್ ಮಾಹಿತಿಯನ್ನು ಸಂಗ್ರಹಿಸಿ ಬ್ಯಾಂಕ್ಗಳ ಸಮನ್ವಯದೊಂದಿಗೆ ಎನ್ಪಿಸಿಐ ಮ್ಯಾಪಿಂಗ್ಗೆ ಕ್ರಮ ವಹಿಸಬೇಕು ಎಂದು ಇದೇ ಪತ್ರದಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ರಾಜ್ಯದಲ್ಲಿ 33,327 ಪ್ರಕರಣಗಳಲ್ಲಿ ಪಿಂಚಣಿಯನ್ನು ಇಎಂಒ ಮೂಲಕ ಪಡೆಯುತ್ತಿದ್ದ ಕಾರಣ ಪಿಂಚಣಿಯನ್ನು ಸ್ಥಗಿತಗೊಳಿಸಲಾಗಿತ್ತು. ಈ ಫಲಾನುಭವಿಗಳಿಗೆ ಸಂಬಂಧಿಸಿ ಪ್ರಕರಣಗಳನ್ನು ಪರಿಶೀಲಿಸಿ ಅಂಚೆ ಇಲಾಖೆಯ ಸಮನ್ವಯದೊಂದಿಗೆ ಅಂಚೆ ಉಳಿತಾಯ ಖಾತೆ ಅಥವಾ ಬ್ಯಾಂಕ್ ಖಾತೆ ತೆರೆದು ಬ್ಯಾಂಕ್ ಸಮನ್ವಯದೊಂದಿಗೆ ಎನ್ಪಿಸಿಐ ಮ್ಯಾಪಿಂಗ್ಗೆ ಕ್ರಮ ವಹಿಸಬೇಕು ಎಂದು ನಿರ್ದೇಶಿಸಿರುವುದು ಪತ್ರದಿಂದ ಗೊತ್ತಾಗಿದೆ.

ಜೂನ್ 2023ರಿಂದಲೇ ಮಾಸಿಕ ಪಿಂಚಣಿ ಯೋಜನೆಯನ್ನು ಆಧಾರ್ ಆಧರಿತ ನೇರ ಹಣ ಸಂದಾಯ ಯೋಜನೆಯಡಿ ತರಲು ನಿರ್ಧರಿಸಿರುವುದರಿಂದ ಆಧಾರ್ ಸಂಗ್ರಹಣೆ ಕಾರ್ಯಕ್ಕೆ ಆದ್ಯತೆ ನೀಡಿ ಪೂರ್ಣಗೊಳಿಸಬೇಕು. ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡಿರುವ ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳವರು ಅಂಚೆ ಇಲಾಖೆ ಹಾಗೂ ಲೀಡ್ ಬ್ಯಾಂಕ್ನೊಂದಿಗೆ ತುರ್ತಾಗಿ ಸಭೆ ನಡೆಸಿ ಪ್ರಗತಿ ಸಾಧಿಸಬೇಕು ಎಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಆಧಾರ್, ಪಾನ್ ಲಿಂಕ್ ಮಾಡುವ ಸಮಸ್ಯೆಯಿಂದಾಗಿ ಬೆಂಗಳೂರು ನಗರವೊಂದರಲ್ಲೇ  ಸುಮಾರು 300 ಹಿರಿಯ ನಾಗರಿಕರು ಹಲವು ತಿಂಗಳಿಂದ ಪಿಂಚಣಿ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು 7 ವಾರ್ಡ್ಗಳಲ್ಲಿ ಸ್ಲಂ ಮಹಿಳಾ ಸಂಘಟನೆಯೊಂದು ನಡೆಸಿದ್ದ ಸಮೀಕ್ಷೆ ತಿಳಿಸಿತ್ತು.

ಈ ಪೈಕಿ ಶೇ.90ರಷ್ಟು ನಾಗರಿಕರು ಪರಿಶಿಷ್ಟ ಸಮುದಾಯಗಳಿಗೆ ಸೇರಿದ್ದಾರೆ. ಅವರಲ್ಲಿ ವಯಸ್ಸಾದವರು ಮತ್ತು ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದವರು ಇದ್ದಾರೆ. ಹಲವರು ಹಣಕಾಸಿನ ಸಮಸ್ಯೆಯಿಂದಾಗಿ ಔಷಧಗಳನ್ನು ಕೊಳ್ಳುವುದನ್ನು ನಿಲ್ಲಿಸಿದ್ದಾರೆ ಎಂದೂ ಸಮೀಕ್ಷೆಯಿಂದ ತಿಳಿದು ಬಂದಿತ್ತು.

ಅದೇ ರೀತಿ ಹಲವರಿಗೆ ಸರಿಯಾಗಿ ಪಿಂಚಣಿ ಬರುತ್ತಿಲ್ಲ. ಪಿಪಿಒ (ಪೆನ್ಷನ್ ಪೇಮೆಂಟ್ ಆರ್ಡರ್) ಐಡಿ ಮತ್ತು ಬ್ಯಾಂಕ್ ಖಾತೆಗೆ ಪಾನ್ ನಂಬರ್, ಆಧಾರ್ ಜೋಡಣೆಯಾಗದಿರುವುದೇ ಪಿಂಚಣಿ ಸ್ಥಗಿತಗೊಳ್ಳಲು ಪ್ರಮುಖ ಕಾರಣವಾಗಿದೆ ಎಂಬುದು ಸಮೀಕ್ಷೆಯು ಬಹಿರಂಗಪಡಿಸಿತ್ತು.

ಹಲವರು ಆಧಾರ್ ಕಾರ್ಡ್ ಪಡೆಯುವಾಗ ನೀಡಿದ ಮೊಬೈಲ್ ಸಂಖ್ಯೆಯನ್ನು ಈಗ ಹೊಂದಿಲ್ಲ. ಹೀಗಾಗಿ ಒಟಿಪಿ ಮೂಲಕ ವೆರಿಫಿಕೇಶನ್ ಪೂರ್ಣಗೊಳ್ಳದೆ ಹಲವರ ಪಿಂಚಣಿ ಸ್ಥಗಿತಗೊಂಡಿತ್ತು.  ಆಧಾರ್ ಜತೆ ಜೋಡಣೆಯಾಗಿರುವ ಮೊಬೈಲ್ ನಂಬರ್ ಇಲ್ಲದೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಾನಾ ಸೇವೆ, ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಪಡೆಯಲು ಕೂಡ ತೊಂದರೆಯಾಗಿತ್ತು ಎಂಬುದನ್ನು ಸಮೀಕ್ಷೆಯು ಹೊರಗೆಡವಿದ್ದನ್ನು ಸ್ಮರಿಸಬಹುದು.

ನೇರ ಹಣ  ಸಂದಾಯ ಯೋಜನೆಯಡಿ ‘ಪಿಂಚಣಿ’

ಪಿಂಚಣಿ ಯೋಜನೆಯನ್ನು ಇದೀಗ ನೇರ ಹಣ  ಸಂದಾಯ ಯೋಜನೆ ವ್ಯಾಪ್ತಿಗೆ ತರಲು ರಾಜ್ಯಸರಕಾರ  ತೀರ್ಮಾನಿಸಿದೆ. ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳನ್ನು ಈ ಯೋಜನೆಯಡಿ ಪ್ರಾಯೋಗಿಕ ಜಿಲ್ಲೆಗಳನ್ನಾಗಿ ಪರಿಗಣಿಸಿ, ಮೊದಲನೇ ಹಂತದಲ್ಲಿ ಈ ಜಿಲ್ಲೆಗಳಲ್ಲಿ ಮಾಸಿಕ ಪಿಂಚಣಿ ಯೋಜನೆಗಳನ್ನು ಆಧಾರ್ ಆಧಾರಿತ ನೇರ ಹಣ ಸಂದಾಯ ಯೋಜನೆಯಡಿ ತರಲು ನಿರ್ಧರಿಸಿದೆ.

ನೇರ ಹಣ ಸಂದಾಯ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಎನ್ಪಿಸಿಐ ಸೀಡಿಂಗ್ ಸ್ಟೇಟಸ್, ಹೆಸರು ಹೊಂದಾಣಿಕೆಯಾಗದ ಪ್ರಕರಣಗಳಲ್ಲಿ ಪ್ರಾಥಮಿಕ ಹಂತದ ಕಾರ್ಯಗಳನ್ನು ನಿರ್ದೇಶನಾಲಯದ ಮಟ್ಟದಲ್ಲಿ ಕೈಗೊಳ್ಳಲಾಗುತ್ತಿದೆ. ಈ ಪ್ರಕರಣಗಳನ್ನು ಎನ್ಪಿಸಿಐನಲ್ಲಿ 2016ರ ಹಿಂದಿನ ಸೀಡಿಂಗ್ ಪ್ರಕರಣಗಳು, ಎನ್ಪಿಸಿಐ ಸೀಡಿಂಗ್ ಬಾಕಿ ಇರುವ ಪ್ರಕರಣಗಳು, ಡ್ಯೂಪ್ಲಿಕೇಟ್ ಆಧಾರ್ ಪ್ರಕರಣಗಳಾಗಿ  ವರ್ಗೀಕರಿಸಲಾಗಿದೆ ಎಂದು ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ಪತ್ರದಲ್ಲಿ ವಿವರಿಸಲಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X