ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕಾರ್ಮಿಕರಿಗೆ ನೆರವಾದವರಿಗೆ ಧನ್ಯವಾದ ಸಲ್ಲಿಸಿದ ಸಿಎಂ
ಒಡಿಶಾ ರೈಲು ದುರಂತ

ಬೆಂಗಳೂರು, ಜೂ.5: ಒಡಿಶಾದಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ ಸುಮಾರು 1,500 ಕಾರ್ಮಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ರಾಜ್ಯ ಸರಕಾರ ಒದಗಿಸಿದೆ. ಈ ಕಾರ್ಯದಲ್ಲಿ ಸರಕಾರದ ಜೊತೆ ಕೈ ಜೋಡಿಸಿದ ಖಾಸಗಿ ಸಂಸ್ಥೆಗಳಿಗೆ ಹಾಗೂ ಸ್ವಯಂಸೇವಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ಸಲ್ಲಿಸಿದ್ದಾರೆ.
ಕೆ2ಕೆ, ಡಿ ಮಾರ್ಟ್, ಐಡಿಸಿ, ಕೆಎಂಎಫ್ ಸೇರಿದಂತೆ ಹಲವು ಖಾಸಗಿ ಸಂಸ್ಥೆಗಳಿಗೆ ಹಾಗೂ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿರುವ ಮರ್ಸಿ ಫೌಂಡೇಷನ್, ತೌಸೀಫ್ ಮತ್ತು ತನ್ವೀರ್, ಕ್ಲಿಫ್ಟಿನ್ ಹಾಗೂ ಮೈತ್ರಿ ಮತ್ತು ತಂಡದವರಿಗೆ ಧನ್ಯವಾದ ಸಲ್ಲಿಸಿದ ಮುಖ್ಯಮಂತ್ರಿ, ಇಂಥ ಸಂಕಷ್ಟದ ಸಮಯದಲ್ಲಿ ತಾವು ತೋರಿದ ಮಾನವೀಯ ಕಾಳಜಿ ಶ್ಲಾಘನೀಯ ಎಂದು ಟ್ವೀಟ್ ಮಾಡಿದ್ದಾರೆ.
"ಒಡಿಶಾದಲ್ಲಿ ರೈಲು ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ ಸುಮಾರು 1,500 ಕಾರ್ಮಿಕರಿಗೆ ಆಹಾರ, ಕುಡಿಯುವ ನೀರು, ಸಂಚಾರಿ ಶೌಚಾಲಯ ಹಾಗೂ ವೈದ್ಯಕೀಯ ಸೌಲಭ್ಯವನ್ನು ಒದಗಿಸುವ ಮೂಲಕ ಸಂಕಷ್ಟದಲ್ಲಿರುವ ಜನರಿಗೆ ಪೂರ್ಣ ಪ್ರಮಾಣದಲ್ಲಿ ನೆರವಿಗೆ ನಿಂತಿದ್ದೇವೆ. ನಮ್ಮ ಈ ಕಾರ್ಯಕ್ಕೆ ಜೊತೆಯಾದ ಜೆಎಂಸಿ, ಕೆ2ಕೆ, ಡಿ ಮಾರ್ಟ್, ಐಡಿಸಿ, ಕೆಎಂಎಫ್ ಸೇರಿದಂತೆ ಹಲವು ಖಾಸಗಿ ಸಂಸ್ಥೆಗಳಿಗೆ ಹಾಗೂ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿರುವ ಮರ್ಸಿ ಫೌಂಡೇಷನ್, ತೌಸೀಫ್ ಮತ್ತು ತನ್ವೀರ್, ಕ್ಲಿಫ್ಟಿನ್ ಹಾಗೂ ಮೈತ್ರಿ ಮತ್ತು ತಂಡದವರಿಗೆ ಧನ್ಯವಾದಗಳು. ಇಂಥ ಸಂಕಷ್ಟದ ಸಮಯದಲ್ಲಿ ತಾವು ತೋರಿದ ಮಾನವೀಯ ಕಾಳಜಿ ಶ್ಲಾಘನೀಯವಾದುದ್ದು." ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.
ಒಡಿಶಾದಲ್ಲಿ ರೈಲು ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ ಸುಮಾರು 1500 ಕಾರ್ಮಿಕರಿಗೆ ಆಹಾರ, ಕುಡಿಯುವ ನೀರು, ಸಂಚಾರಿ ಶೌಚಾಲಯ ಹಾಗೂ ವೈದ್ಯಕೀಯ ಸೌಲಭ್ಯವನ್ನು ಒದಗಿಸುವ ಮೂಲಕ ಸಂಕಷ್ಟದಲ್ಲಿರುವ ಜನರಿಗೆ ಪೂರ್ಣ ಪ್ರಮಾಣದಲ್ಲಿ ನೆರವಿಗೆ ನಿಂತಿದ್ದೇವೆ.… pic.twitter.com/Y4rIMF1SU8
— CM of Karnataka (@CMofKarnataka) June 4, 2023