ಟಿಪ್ಪರ್ - ಕಾರು ಮುಖಾಮುಖಿ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು

ಹಾವೇರಿ: ಟಿಪ್ಪರ್ ಹಾಗೂ ಕಾರು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಅಂಕಸಾಪುರ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ವರದಿಯಾಗಿದೆ.
ಸವಣೂರಿನ ಜಲ್ಲಾಪುರ ಗ್ರಾಮದವರಾದ ಮಾಲತೇಶ್ ಕುಂದ್ರಳ್ಳಿ 21, ಮಾಲತೇಶ ಗೌಡಗೇರಿ 24,ಮೃತರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ರಾಣೆಬೆನ್ನೂರಿನ ಲಲಿತಾ ಪಾಟೀಲ್, ನಾಗರಾಜ್ ಎಂಬುವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಶಿವಕುಮಾರ್ ಗುಣಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Story