Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾರಿಗೆ ಬಸ್‍ ಗಳಲ್ಲಿ ಮಹಿಳೆಯರ ಉಚಿತ...

ಸಾರಿಗೆ ಬಸ್‍ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ‘ಸ್ಮಾರ್ಟ್‍ಕಾರ್ಡ್’

‘ಶಕ್ತಿ’ ಯೋಜನೆಗೆ ಮಾರ್ಗಸೂಚಿ ಪ್ರಕಟ

5 Jun 2023 11:18 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಾರಿಗೆ ಬಸ್‍ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ‘ಸ್ಮಾರ್ಟ್‍ಕಾರ್ಡ್’
‘ಶಕ್ತಿ’ ಯೋಜನೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು, ಜೂ. 5: ರಾಜ್ಯದ ಎಲ್ಲ ಮಹಿಳಾ ಪ್ರಯಾಣಿಕರಿಗೆ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿ ಯೋಜನೆ’ ಜಾರಿಗೊಳಿಸಲು ರಾಜ್ಯ ಸರಕಾರ ಸೋಮವಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ.

‘ಶಕ್ತಿ ಯೋಜನೆ’ಯಡಿ ವಿದ್ಯಾರ್ಥಿನಿಯರು ಸೇರಿದಂತೆ ರಾಜ್ಯ ಎಲ್ಲ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ(ಎಸಿ ಮತ್ತು ಐಷಾರಾಮಿ ಬಸ್‍ಗಳನ್ನು ಹೊರತುಪಡಿಸಿ) ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ಈ ಯೋಜನೆ ಅನ್ವಯಿಸತಕ್ಕದ್ದು.

ಸಾರಿಗೆ ಸಂಸ್ಥೆಯ ಐಷಾರಾಮಿ ಬಸ್‍ಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್ ಹಾಗೂ ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲೆಸ್(ಎಸಿ ಬಸುಗಳು) ಬಸ್‍ಗಳಲ್ಲಿ ಈ ಯೋಜನೆ ಅನ್ವಯಿಸುವುದಿಲ್ಲ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸುಗಳನ್ನು ಹೊರತುಪಡಿಸಿ, ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕೆಎಸ್ಸಾರ್ಟಿಸಿ, ವಾಯುವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಎಲ್ಲ ಬಸ್‍ಗಳಲ್ಲಿ(ಎಸಿ, ಐಷರಾಮಿ ಬಸ್ ಹೊರತುಪಡಿಸಿ) ಶೇ.50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸತಕ್ಕದ್ದು.

ಈ ಯೋಜನೆಯಡಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರಕಾರದಿಂದ ಶೂನ್ಯ ಟಿಕೆಟ್/ ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶವನ್ನು ಆಧರಿಸಿ ಭರಿಸಲಾಗುವುದು. ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು ಶಕ್ತಿ ಸ್ಮಾರ್ಟ್ ಕಾರ್ಡ್‍ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು.

ಶಕ್ತಿ ಸ್ಮಾರ್ಟ್ ಕಾರ್ಡ್‍ನ್ನು ವಿತರಿಸುವವರೆಗೆ ಕೇಂದ್ರ ಹಾಗೂ ರಾಜ್ಯ ಸರಕಾರದ ಇಲಾಖೆ, ಸರಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿದ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸತಕ್ಕದ್ದು ಎಂದು ಸಾರಿಗೆ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಪುಷ್ಪಾ ವಿ.ಎಸ್. ಆದೇಶ ಹೊರಡಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X