Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ;...

ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ; ಕೊನೆಗೂ ಬಿಜೆಪಿ ಸೋಲಿಗೆ ಕಾರಣ ಕೊಟ್ಟ ಬೊಮ್ಮಾಯಿ

5 Jun 2023 12:28 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ; ಕೊನೆಗೂ ಬಿಜೆಪಿ ಸೋಲಿಗೆ ಕಾರಣ ಕೊಟ್ಟ ಬೊಮ್ಮಾಯಿ

ಬೆಳಗಾವಿ, ಜೂ. 5: ‘ವಿಧಾನಸಭೆ ಚುನಾವಣೆಯ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಇಂದಿನಿಂದಲೇ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ್ದೇವೆ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ನಡೆದ ಪಕ್ಷದ ಮುಖಂಡರ ಸಭೆ ಬಳಿಕ ಮಾತನಾಡಿದ ಅವರು, ‘ಜಿಲ್ಲೆಯ ಹಿರಿಯರು ಸಂಸತ್ ಸದಸ್ಯರು ಮತ್ತು ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಜತೆ ಸಭೆ ನಡೆಸಿದ್ದೇವೆ. ಎಲ್ಲರ ಜತೆಗೆ ಇಂದು ಸೋಲಿನ ಪರಾಮರ್ಶೆ ಮಾಡಿದ್ದೇವೆ. ಲೋಕಸಭೆ ಚುನಾವಣೆಗೆ ಮತ್ತೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಇಂದಿನಿಂದಲೇ ಲೋಕಸಭಾ ಚುನಾವಣೆಯ ತಯಾರಿ ಆರಂಭ ಮಾಡಲಾಗಿದೆ’ ಎಂದರು.

‘ಚುನಾವಣೆಯ ವೇಳೆ ನಾವು ತಡವಾಗಿ ಟಿಕೆಟ್ ಘೋಷಣೆ ಮಾಡಿದ್ದೇವು. ಹೊಸಬರಿಗೆ ಟಿಕೆಟ್ ಕೊಟ್ಟಿದ್ದು ಸಂಯೋಜನೆ ಆಗಲಿಲ್ಲ. ಸ್ಥಳೀಯವಾಗಿಯೂ ಕೆಲವು ತೊಂದರೆ ಆಗಿದೆ. ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಬೆಳಗಾವಿಯಲ್ಲೂ ಬಿಜೆಪಿ ಸೋಲಿಗೆ ನಾನೇ ಹೊಣೆ ಹೊರುತ್ತೇನೆ’ ಎಂದು ಬೊಮ್ಮಾಯಿ ತಿಳಿಸಿದರು.

ಕಾಂಗ್ರೆಸ್‍ಗೆ ಆಪತ್ತು: ‘ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಯಾವ ಮಾಹಿತಿ ಇಟ್ಟುಕೊಂಡು ಮಾತನಾಡಿದ್ದಾರೆ ಗೊತ್ತಿಲ್ಲ. ರಾಜ್ಯದಲ್ಲಿ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗುತ್ತಿದೆ. ನಾವು ತಂದ ಕಾನೂನಿನಲ್ಲಿ ಗೋಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆ ವಿಧಿಸುವುದು ಇದೆ. ಗೋಹತ್ಯೆ ನಿಷೇಧ ಕಾಯ್ದೆ ಕಾನೂನು ಮುಟ್ಟಿದರೆ ಕಾಂಗ್ರೆಸ್‍ಗೆ ಆಪತ್ತು ಕಾದಿದೆ’ ಎಂದು ಎಚ್ಚರಿಕೆ ನೀಡಿದರು.

ಜನರಿಗೆ ದೋಖಾ: ಹಿಂದಿನ ಕಾಂಗ್ರೆಸ್ ಸರಕಾರದ ಕಾಲದಲ್ಲಿ ದೊಡ್ಡ ಪ್ರಮಾಣದ ಹೊರೆಯನ್ನು ಹೆಸ್ಕಾಂ ಮೇಲೆ ಹಾಕಿದ್ದರು. ನಾನು ಸಿಎಂ ಆಗಿದ್ದಾಗ ಅನುದಾನ ನೀಡಿದ್ದೆ. 13ಸಾವಿರ ಕೋಟಿ ರೂ.ನೀಡಿ ಹೆಸ್ಕಾಂ, ಕೆಪಿಟಿಸಿಎಲ್ ಪುನಶ್ಚೇತನ ಮಾಡಿದ್ದೇವೆ. ಕಾಂಗ್ರೆಸ್ ಇದು ಗೊತ್ತಿಲ್ಲದ್ದೇನಲ್ಲ, ವಿದ್ಯುಚ್ಛಕ್ತಿ ಕ್ಷೇತ್ರ ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಒಟ್ಟು ಬಿಲ್‍ನಲ್ಲಿ ಐವತ್ತು ಪರ್ಸೆಂಟ್ ಬಿಲ್ ಸರಕಾರದಿಂದ ಬರುತ್ತದೆ.

ಹೆಸ್ಕಾಂ ಅಧಿಕಾರಿಗಳಿಗೆ ಬಿಲ್ ವಸೂಲಿಗೆ ಆರ್ಥಿಕ ಇಲಾಖೆಯಲ್ಲಿ ಕುರ್ಚಿ ಹಾಕಿ ಕೂಡಬೇಕಾಗುತ್ತದೆ. ಹಳೆ ಬಾಕಿ ಎಂದು ಪುಕ್ಕಟೆ ಹೊರೆಯನ್ನು ಜನರ ಮೇಲೆ ಹಾಕಿದ್ದಾರೆ. ಇದು ಜನರಿಗೆ ಮಾಡಿರುವ ಒಂದು ದೋಖಾ, ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವುದನ್ನ ಮಾಡುತ್ತಿದ್ದಾರೆ. ಜನರನ್ನ ಸಂಕಷ್ಟಕ್ಕೆ ಸಿಲುಕಿಸುವುದನ್ನು ಮಾಡುತ್ತಿದ್ದಾರೆ. ಎಷ್ಟು ವಿದ್ಯುತ್ ಬಳಕೆ ಮಾಡಬೇಕು ಎನ್ನುವ ಅಧಿಕಾರ ಪ್ರತಿ ಪ್ರಜೆಗೂ ಇದೆ. ಇವರು ಸರಾಸರಿ ಲೆಕ್ಕದಲ್ಲಿ ಅವರು ಬಳಸುವ ವಿದ್ಯುತ್ ಮೇಲೂ ಹಿಡಿದುಕೊಳ್ಳುತ್ತಿದ್ದಾರೆಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಅಧಿಕಾರದ ಅಮುಲು: ಗೋಹತ್ಯೆ ನಿಷೇಧ, ಪಠ್ಯ ಪುಸ್ತಕ ಪರಿಷ್ಕರಣೆ, ಸರಕಾರದ ವಿರುದ್ಧ ಮಾತನಾಡಿದರೆ ಜೈಲಿಗೆ ಹಾಕುತ್ತೇವೆಂಬ ಸಚಿವರ ಹೇಳಿಕೆ ನೋಡಿದರೆ ಈ ಸರಕಾರಕ್ಕೆ ಅಧಿಕಾರದ ಅಮುಲು ಬಂದಿದೆ. ಕೆಲ ಸಚಿವರ ಹೇಳಿಕೆ ನೋಡಿದರೆ ವಾಕ್ ಸ್ವಾತಂತ್ರ್ಯ ಮೊಟಕುಗೊಳಿಸುತ್ತಿದ್ದಾರೆ. ನಮ್ಮ ಅಭಿಪ್ರಾಯಕ್ಕೆ ಸಹಮತ ಇಲ್ಲದವರ ಧ್ವನಿಯನ್ನು ಹತ್ತಿಕ್ಕುವ ಪ್ರವೃತ್ತಿಯಲ್ಲಿ ಮಾತನಾಡುತ್ತಿದ್ದಾರೆ. ಅತಿ ಶೀಘ್ರದಲ್ಲಿ ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಬರುತ್ತದೆಯೇನೋ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಟೀಕಿಸಿದರು.

‘ಅಧಿಕಾರಿಗಳಿಗೆ ಒಬ್ಬರು ಮಂತ್ರಿ ಹೇಳಿದ್ದಾರೆ, ಕೆಲಸ ಮಾಡದಿದ್ದರೆ ಚಾಕುವಿನಿಂದ ಹೊಡೆಯುತ್ತೇವೆ ಎನ್ನುತ್ತಾರೆ. ಜನರು ನಿಮಗೆ ಅಧಿಕಾರ ಕೊಟ್ಟಿದ್ದು ಜನರ ಸೇವೆ ಮಾಡಲೆಂದು, ರಾಜ್ಯದ ಅಭಿವೃದ್ಧಿಗಾಗಿ, ಬಡವರಿಗೆ ಸಹಾಯ ಮಾಡಲು. ಈ ರೀತಿಯಲ್ಲಿ ಅಧಿಕಾರ ದುರುಪಯೋಗ ಮಾಡಿಕೊಳ್ಳಲು ನಿಮಗೆ ರಾಜ್ಯದ ಜನರು ಅಧಿಕಾರ ಕೊಟ್ಟಿಲ್ಲ. ನಾವು ವಿರೋಧ ಪಕ್ಷವಾಗಿ ಸುಮ್ಮನೇ ಕೂಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

‘ಯಾರ್ಯಾರನ್ನ ಜೈಲಿಗೆ ಹಾಕುತ್ತಿರೋ ಹಾಕಿ. ನಿಮ್ಮ ನೀತಿ, ವರ್ತನೆಗಳ ವಿರುದ್ಧ ಜನರು ತಿರುಗಿ ಬಿದ್ದರೆ ನಿಮಗೆ ಜೈಲುಗಳು ಸಾಕಾಗುವುದಿಲ್ಲ. ತಾಕತ್ತಿನಿಂದ ಮಣಿಸುತ್ತೇವೆಂದರೆ, ನಮ್ಮದೇನು ಇಸ್ಲಾಂ ರಾಷ್ಟ್ರವಲ್ಲ. ತುರ್ತು ಪರಿಸ್ಥಿತಿ ಹೇರಲು ಪ್ರಜಾಪ್ರಭುತ್ವದಲ್ಲಿ ಜನತೆ ಕೈಯಲ್ಲಿ ದೊಡ್ಡ ಶಕ್ತಿಯಿದೆ. ಖಂಡಿತವಾಗಿ ನಾವು ಇದಕ್ಕೆ ಅವಕಾಶ ಕೊಡುವುದಿಲ್ಲ’

-ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X