ಕಾಪು ಶಾಸಕ ಗುರ್ಮೆ ಮಹಾರಾಷ್ಟ್ರ ಸಿಎಂ ಭೇಟಿ
ಕಾಪು, ಜೂ.5: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿ ಮಾಡಿದರು.
ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಪು ಕ್ಷೇತ್ರಕ್ಕೆ ತನ್ನ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಮುಖ್ಯಮಂತ್ರಿ ಏಕನಾಥ ಶಿಂಧೆ, ಕಾಪು ಕ್ಷೇತ್ರ ಸರ್ವಾಂಗೀಣ ರೀತಿಯಲ್ಲಿ ಅಭಿವೃದ್ಧಿ ಹೊಂದುವಂತಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಉದ್ಯಮಿಗಳಾದ ರಿತೇಶ್ ಶೆಟ್ಟಿ, ಜೀವನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Next Story