ಆನ್‌ಲೈನ್ ನಲ್ಲಿ ವಂಚನೆ: ಪ್ರಕರಣ ದಾಖಲು

ಮಂಗಳೂರು, ಜೂ.5: ಸಾಫ್ಟ್‌ವೇರ್ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿರುವ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ಪಾರ್ಟ್ ಟೈಂ ಜಾಬ್ ಬಗ್ಗೆ ಸಂದೇಶ ಮತ್ತು ಲಿಂಕ್ ಕಳುಹಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿ ರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂ.1ರಂದು ಅಪರಿಚಿತ ವ್ಯಕ್ತಿಯು ಮೊಬೈಲ್ ಮೂಲಕ ಲಿಂಕ್ ಕಳುಹಿಸಿ ಅದರಲ್ಲಿ ಬ್ಯಾಂಕ್ ಖಾತೆ ವಿವರ ನೀಡಿ ಹಣ ಜಮೆ ಮಾಡುವಂತೆ ತಿಳಿಸಿದ್ದ. ಅದರಂತೆ ತಾನು ಮೊಬೈಲ್ ಬ್ಯಾಂಕಿಂಗ್ ಮೂಲಕ ಹಣ ವರ್ಗಾಯಿಸಿದ್ದೆ. ಬಳಿಕ ಅಪರಿಚಿತ ವ್ಯಕ್ತಿಯು ಟಾಸ್ಕ್‌ನಲ್ಲಿ ಹಣ ತೊಡಗಿಸಿದರೆ ದ್ವಿಗುಣ ಮಾಡುವುದಾಗಿ ಹೇಳಿ 12 ಟಾಸ್ಕ್‌ಗಳನ್ನು ತಿಳಿಸಿ ವಿವಿಧ ಬ್ಯಾಂಕ್ ಖಾತೆಗಳಿಗೆ 6.13 ಲ.ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿ ನಲ್ಲಿ ತಿಳಿಸಲಾಗಿದೆ.
Next Story