ಬಾಡಿಗೆ ಮನೆಯಲ್ಲಿ ವಾಸಿಸುವವರಿಗೂ ಉಚಿತ ವಿದ್ಯುತ್: ಕಾಂಗ್ರೆಸ್ ಸ್ಪಷ್ಟನೆ
''ಬಿಜೆಪಿಯವರ ಅಪಪ್ರಚಾರಕ್ಕೆ ಬಲಿಯಾಗಬೇಡಿ''

ಬೆಂಗಳೂರು: ರಾಜ್ಯ ಸರಕಾರದ ಗೃಹಜ್ಯೋತಿ ಯೋಜನೆ ಜಾರಿ ವಿಚಾರವಾಗಿಜನರಲ್ಲಿ ಸಾಕಷ್ಟು ಗೊಂದಲ ಮೂಡಿದೆ. ಈ ಕುರಿತು ರಾಜ್ಯ ಕಾಂಗ್ರೆಸ್ @INCKarnataka ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದೆ.
'ನಮ್ಮ ಗ್ಯಾರಂಟಿ ಯೋಜನೆಗಳು ಸಮಾಜ ಕಲ್ಯಾಣದ ಕಾರ್ಯಕ್ರಮಗಳಾಗಿವೆ. ಗೃಹಜ್ಯೋತಿ ಯೋಜನೆಯು ಬಾಡಿಗೆ ಮನೆಯಲ್ಲಿ ವಾಸಿಸುವವರಿಗೂ ಅನ್ವಯವಾಗಲಿದೆ' ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.
''ಕೆಲವು ಮಾಧ್ಯಮಗಳು ಹಾಗೂ ಬಿಜೆಪಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದು, ಸಾರ್ವಜನಿಕರು ಅದಕ್ಕೆ ಬಲಿಯಾಗಬಾರದು. ಬಾಡಿಗೆ ಮನೆಯ ವಾಸಿಗಳು ಈ ಕೆಳಕಂಡ ಮಾರ್ಗಸೂಚಿಯನ್ನು ಅನುಸರಿಸಿ ಯೋಜನೆಯ ಪ್ರಯೋಜನ ಪಡೆಯಬಹುದು'' ಎಂದು ತಿಳಿಸಿದೆ.
ಕಾಂಗ್ರೆಸ್ ಟ್ವಿಟರ್ ನಲ್ಲಿ ಪ್ರಕಟಿಸಿರುವ ಮಾರ್ಗಸೂಚಿ ಹೀಗಿದೆ...
''ಇನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವವರು ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ''
- ಸಿದ್ದರಾಮಯ್ಯ, ಮುಖ್ಯಮಂತ್ರಿ
ನಮ್ಮ ಗ್ಯಾರಂಟಿ ಯೋಜನೆಗಳು ಸಮಾಜ ಕಲ್ಯಾಣದ ಕಾರ್ಯಕ್ರಮಗಳಾಗಿವೆ.
— Karnataka Congress (@INCKarnataka) June 6, 2023
ಗೃಹಜ್ಯೋತಿ ಯೋಜನೆಯು ಬಾಡಿಗೆ ಮನೆಯಲ್ಲಿ ವಾಸಿಸುವವರಿಗೂ ಅನ್ವಯವಾಗಲಿದೆ.
ಕೆಲವು ಮಾಧ್ಯಮಗಳು ಹಾಗೂ ಬಿಜೆಪಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದು, ಸಾರ್ವಜನಿಕರು ಅದಕ್ಕೆ ಬಲಿಯಾಗಬಾರದು.
ಬಾಡಿಗೆ ಮನೆಯ ವಾಸಿಗಳು ಈ ಕೆಳಕಂಡ ಮಾರ್ಗಸೂಚಿಯನ್ನು ಅನುಸರಿಸಿ ಯೋಜನೆಯ ಪ್ರಯೋಜನ… pic.twitter.com/Wa0btx2zIG