Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ,...

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರಕಾರ: ಕೇಂದ್ರದ ವಿರುದ್ಧ ನಟ ಕಿಶೋರ್ ಕಿಡಿ

''ಅಪರಾಧಿ ಸರಕಾರವೇ ಅಪರಾಧಿ ಯಾರೆಂದು ಕಂಡು ಹಿಡಿಯುತ್ತದಂತೆ...''

6 Jun 2023 1:10 PM IST
share
ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರಕಾರ: ಕೇಂದ್ರದ ವಿರುದ್ಧ ನಟ ಕಿಶೋರ್ ಕಿಡಿ
''ಅಪರಾಧಿ ಸರಕಾರವೇ ಅಪರಾಧಿ ಯಾರೆಂದು ಕಂಡು ಹಿಡಿಯುತ್ತದಂತೆ...''

ಬೆಂಗಳೂರು: ಒಡಿಶಾದ ಬಾಲಸೋರ್‌ನಲ್ಲಿ 278 ಮಂದಿಯನ್ನು ಬಲಿ ಪಡೆದಿರುವ ಭೀಕರ ರೈಲು ಅಪಘಾತದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ವಹಿಸಿಕೊಂಡಿದ್ದು, ಕೇಂದ್ರದ ಈ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. 

ಅಲ್ಲದೇ,  ಇನ್ನೂರಕ್ಕೂ ಹೆಚ್ಚು ಜನರ ಸಾವಿಗೆ ನೇರವಾಗಿ ಕೇಂದ್ರ ಸರಕಾರವೇ ಹೊಣೆ ಎಂದು ವಿಪಕ್ಷಗಳು ಆರೋಪಿಸಿವೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಬಹುಭಾಷಾ ನಟ ಕಿಶೋರ್ ಕುಮಾರ್, ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. 

''ಅಪರಾಧಿ ಸರ್ಕಾರವೇ ಅಪರಾಧದ ತನಿಖೆ ಮಾಡಿ ಅಪರಾಧಿ ಯಾರೆಂದು ಕಂಡು ಹಿಡಿಯುತ್ತದಂತೆ… ಎಂಥ ವಿಪರ್ಯಾಸ'' ಎಂದು ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. 

ಕಿಶೋರ್ ಕುಮಾರ್ ಅವರ ಪೊಸ್ಟ್ ನಲ್ಲೇನಿದೆ?

''ಯಾರ ಮೇಲೆ ಕಠಿಣ ಕ್ರಮ ? ಯಾರು ಕಾರಣ ?, ಇಷ್ಟು ಭೀಕರ ಸಾವು ನೋವು ತಡೆಗಟ್ಟಬಹುದಿತ್ತೇ?, ಇಂದಿಗೂ ಖಾಲಿಯಿರುವ 3 ಲಕ್ಷಕ್ಕೂ ಹೆಚ್ಚು ರೈಲ್ವೆ ನೌಕರರನ್ನು 1500ಕ್ಕೂ ಹೆಚ್ಚು ಸುರಕ್ಷತೆಗೆ ಬೇಕಾದ ಖಾಲಿಯಾಗೇ ಉಳಿದಿರುವ ಹುದ್ದೆಗಳನ್ನು ಸರ್ಕಾರ ತುಂಬಿ ಹಳಿ ನಿರ್ವಹಣೆ ಸಮರ್ಪಕವಾಗಿಸಬಹುದಿತ್ತೇ ?'' ಎಂದು ಪ್ರಶ್ನೆ ಮಾಡಿದ್ದಾರೆ. 

ಇದನ್ನೂ ಓದಿ: ಬೀದರ್‌ | ಊರಿಗೆ ಬಸ್‌ ಇಲ್ಲವೆಂದು ಸರ್ಕಾರಿ ಬಸ್ಸನ್ನೇ ಚಲಾಯಿಸಿಕೊಂಡು ಹೋದ ವ್ಯಕ್ತಿ: ಮುಂದೇನಾಯ್ತು?

'ಕೋಟ್ಯಂತರ ರೂಪಾಯಿ ವ್ಯಯಿಸಿ ತಿಂಗಳಿಗೊಂದು ರೈಲಿಗೆ ಹಸಿರು ನಿಶಾನೆ ತೋರಿಸಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಬದಲು,
‘ಕವಚ’ ತಂತ್ರಜ್ಞಾನಕ್ಕೆ ಪ್ರಾಮುಖ್ಯತೆ ಕೊಟ್ಟು ಎಲ್ಲೆಡೆ ಅಳವಡಿಸಬಹುದಿತ್ತೇ ?  ಹಾಗೆ ನೋಡಿದರೆ ಕಳೆದ 6-7 ವರ್ಷಗಳಲ್ಲಿ 1000 ಕ್ಕೂ ಹೆಚ್ಚು ರೈಲು ಗಳು ಹಳಿತಪ್ಪಿ ಅಪಘಾತಕ್ಕೀಡಾಗಿದ್ದರೂ, ಸುರಕ್ಷತೆಗಿಂತ ದೇಶದ ಸ್ವತ್ತನ್ನು ಮಾರಿ ದುಡ್ಡು ಮಾಡುವುದರಲ್ಲೇ ನಿರತವಾದ ಸರ್ಕಾರವೇ ಈ ದುರಂತಕ್ಕೆ ಕಾರಣವಲ್ಲವೇ??? ಅಪರಾಧಿ ಸರ್ಕಾರವೇ ಅಪರಾಧದ ತನಿಖೆ ಮಾಡಿ ಅಪರಾಧಿ ಯಾರೆಂದು ಕಂಡು ಹಿಡಿಯುತ್ತದಂತೆ… ಎಂಥ ವಿಪರ್ಯಾಸ!!!' ಎಂದು ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. 

''ಇಲ್ಲಿ ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ.. ನಮ್ಮ ಸರ್ಕಾರ… ಮೂರ್ಖ ಸರ್ಕಾರದ,  ನಾಲಾಯಕ್ಕು ಮಂತ್ರಿಗಳ, ಪ್ರಜೆಗಳೆಲ್ಲ ಬರೀ ಮತಗಳಂತೆ ಕಾಣುವ ಪ್ರಚಾರಿ ಪ್ರಧಾನಿಯ  ಸಂಕುಚಿತ ದೃಷ್ಟಿಯನ್ನು ಮುಚ್ಚಿ ಹಾಕಲು ಹೋಗಿ, ಆಡಳಿತ ಪಕ್ಷ ಮತ್ತದರ ಬೂಟು ನೆಕ್ಕುವ ಮಾಧ್ಯಮಗಳು ತಪ್ಪನ್ನೂ ಸರಿಯೆಂದು ಸಾಧಿಸ ಹೊರಟರೆ ಕಳೆದು ಕೊಂಡ ಪ್ರಾಣಗಳಿಗೆ ನೊಂದು ಜರ್ಜರಿತವಾದ ಕುಟುಂಬಗಳ ಕಣ್ಣೀರಿಗೆ ಅರ್ಥವಿಲ್ಲದೇ ಹೋದೀತು….'' ಎಂದು ಕಿಡಿಕಾರಿದ್ದಾರೆ. 

''ಮಡಿದ ನೂರಾರು ಅಮಾಯಕರ ಜೀವಗಳಿಗೆ ಅಶ್ರುತರ್ಪಣ  ಇನ್ನಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ. ಚುನಾವಣೆಯಾಚೆಗಿನ ಕರ್ತವ್ಯವನ್ನು ಇನ್ನಾದರೂ ನಿಭಾಯಿಸಲಿ…'' ಎಂದಿ ನಟ ಕಿಶೋರ್ ಆಗ್ರಹಿಸಿದ್ದಾರೆ. 

share
Next Story
X