ಮಂಗಳೂರು: ರೆಡ್ ಕ್ರಾಸ್‌ನಿಂದ ವಿಶ್ವ ಪರಿಸರ ದಿನಾಚರಣೆ

ಮಂಗಳೂರು: ದ.ಕ.ಜಿಲ್ಲಾ ಇಂಡಿಯನ್ ರೆಡ್‌ಕ್ರಾಸ್ ವತಿಯಿಂದ ರೆಡ್‌ಕ್ರಾಸ್ ಆಡಳಿತ ಕಚೇರಿಯಲ್ಲಿ ಮಂಗಳ ವಾರ ವಿಶ್ವ ಪರಿಸರ ದಿನ ಆಚರಿಸಲಾಯಿತು. ಈ ಸಂದರ್ಭ ಆಶಾ ಕಾರ್ಯಕರ್ತೆಯರಿಗೆ ಮತ್ತು ಕೃಷಿಕರಿಗೆ ಹಣ್ಣಿನ ಸಸಿಗಳನ್ನು ವಿತರಿಸಲಾಯಿತು.
ರೆಡ್ ಕ್ರಾಸ್ ಜಿಲ್ಲಾ ಸಮಿತಿ ಅಧ್ಯಕ್ಷ ಸಿಎ ಶಾಂತಾರಾಮ್ ಶೆಟ್ಟಿ ಮಾತನಾಡಿ ಪರಿಸರದ ಬಗ್ಗೆ ಪ್ರತಿಯೊಬ್ಬರಲ್ಲೂ ಕಾಳಜಿ ಮೂಡಿಸುವುದು ವಿಶ್ವ ಪರಿಸರ ದಿನಾಚರಣೆಯ ಉದ್ದೇಶವಾಗಿದೆ. ಸುಸ್ಥಿರ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ. ಪ್ಲಾಸ್ಟಿಕ್ ಮಾಲಿನ್ಯ ಪರಿಸರಕ್ಕೆ ಮಾರಕವಾಗಿದೆ. ಈ ಬಗ್ಗೆ ಜನ ಜಾಗೃತಿ ಮೂಡಿಸಲು ರೆಡ್‌ಕ್ರಾಸ್ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಎಂದರು.
ದ.ಕ.ಜಿಲ್ಲಾ ರೆಡ್ ಕ್ರಾಸ್‌ನ ಉಪಾಧ್ಯಕ್ಷ ಡಾ.ಸತೀಶ್ ರಾವ್, ಆಡಳಿತ ಸಮಿತಿಯ ನಿರ್ದೇಶಕರಾದ ಪುಷ್ಪರಾಜ್ ಜೈನ್, ಗುರುದತ್ ಎಂ.ನಾಯಕ್, ವಿಠಲ ಎ., ಪಿ.ಬಿ.ಹರೀಶ್ ರೈ, ಡಾ.ಸುಮನಾ ಬೋಳೂರು, ಸಚೇತ್ ಸುವರ್ಣ ಉಪಸ್ಥಿತರಿದ್ದರು. ಕಾರ್ಯದರ್ಶಿ ಸಂಜಯ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
Next Story