Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರಾವಳಿಯಲ್ಲಿ ಭಾರೀ ಗಾಳಿ-ಮಳೆಯ...

ಕರಾವಳಿಯಲ್ಲಿ ಭಾರೀ ಗಾಳಿ-ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ

6 Jun 2023 7:16 PM IST
share
ಕರಾವಳಿಯಲ್ಲಿ ಭಾರೀ ಗಾಳಿ-ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ

ಉಡುಪಿ, ಜೂ.6: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ಸಂಭವಿಸಿದ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಿದ್ದು, ಇದರಿಂದ ರಾಜ್ಯದ ಪಶ್ಚಿಮದ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಮುದ್ರ ಪ್ರಕ್ಷುಬ್ಧವಾಗಿರಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾಮ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂಡಮಾರುತದ ಚಲನೆಯ ಕಾರಣದಿಂದ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಏಳುವ ಸಂಭವವಿದ್ದು, ಭಾರೀ ಮಳೆಯೂ ಸುರಿಯುವ  ಸಾಧ್ಯತೆ ಇದೆ. ಆದುದರಿಂದ ಈ ಅವಧಿಯಲ್ಲಿ ಮೀನುಗಾರರು ಮೀನುಗಾರಿಕೆ ಗಾಗಿ ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಜಿಲ್ಲಾಡಳಿತದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕ ರಿಗೆ ಕೆಲವು ಸೂಚನೆಗಳನ್ನು ನೀಡಿದ್ದು, ಅದನ್ನು ಪಾಲಿಸುವಂತೆ ತಿಳಿಸಲಾಗಿದೆ.

ಸಾರ್ವಜನಿಕರು, ಪ್ರವಾಸಿಗರು ಸಮುದ್ರ, ನದಿ ತೀರ ಪ್ರದೇಶಗಳಲ್ಲಿ ನೀರಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸು ವಂತೆ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ಕಂಬ, ಕಟ್ಟಡ, ಮರಗಳ ಬಳಿ, ಕೆಳಗೆ ನಿಲ್ಲದಂತೆ ಎಚ್ಚರಿಸಲಾಗಿದೆ. ನೆರೆ ಬರುವ ಸಾಧ್ಯತೆ ಇರುವ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳಲು ಸಿದ್ಧವಾಗಿರಬೇಕು ಎಂದು ಸೂಚಿಸಲಾಗಿದೆ.

ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ಎದುರಿಸಲು, ನಿಭಾಯಿಸಲು ತಯರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಗತ್ಯದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಕಂಟ್ರೋಲ್ ರೂಮ್‌ನ ದಿನದ 24 ಗಂಟೆಯೂ ಕಾರ್ಯಾ ಚರಿಸುವ  ದೂರವಾಣಿ ಸಂಖ್ಯೆ: 0820-2574802 ಅಥವಾ ಟೋಲ್‌ಫ್ರಿ ನಂ. 1077ನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

ವಾಯುಭಾರ ಕುಸಿತ: ಸೋಮವಾರ ಅರಬ್ಬಿ ಸಮುದ್ರದ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಕಂಡು ಬಂದಿದ್ದು, ಅದು ಚಂಡಮಾರುತವಾಗಿ ಪರಿವರ್ತನೆಗೊಂಡಿದೆ. ಇಂದು ಮುಂಜಾನೆಯ ವೇಳೆಗೆ ಅದು ಗೋವಾ ದಿಂದ 920ಕಿ.ಮೀ., ಮುಂಬೈಯಿಂದ 1120ಕಿ.ಮೀ. ಹಾಗೂ ಪೋರ್‌ ಬಂದರ್‌ನಿಂದ 1160 ಕಿ.ಮೀ. ದೂರದಲ್ಲಿತ್ತು.

ಇದು ಇನ್ನಷ್ಟು ತೀವ್ರಗೊಂಡು ಮುಂದಿನ 24 ಗಂಟೆಗಳಲ್ಲಿ ಅರಬ್ಬಿ ಸಮುದ್ರದಲ್ಲಿ ಉತ್ತರ ದಿಕ್ಕಿನತ್ತ ಚಲಿಸುವ ಸಾಧ್ಯತೆ ಇದೆ. ಇದರಿಂದ ರಾಜ್ಯದ ಕರಾವಳಿ ಭಾಗದಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆ ಬರುವ ಸಾಧ್ಯತೆ ಇದೆ. ರಾಜ್ಯದ ಕಾರವಾರ, ಮಂಗಳೂರು, ಪಣಂಬೂರು, ಹೊನ್ನಾವರ, ಭಟ್ಕಳ, ಗಂಗೊಳ್ಳಿ, ಮಲ್ಪೆ ಬಂದರುಗಳಲ್ಲಿ ಎಚ್ಚರಿಕೆಯ ಸೂಚನೆಯನ್ನು ನೀಡುವಂತೆ  ಹವಾಮಾನ ಇಲಾಖೆ ತಿಳಿಸಿದೆ.

share
Next Story
X