ಮದ್ದೂರು: ರೈಲಿಗೆ ಸಿಲುಕಿ ವ್ಯಕ್ತಿ ಮೃತ್ಯು

ಮಂಡ್ಯ, ಜೂ.6: ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಮದ್ದೂರು ರೈಲ್ವೆ ನಿಲ್ದಾಣದ ವ್ಯಾಪ್ತಿಯ ನಂಜಪ್ಪ ಕಲ್ಯಾಣ ಮಂಟಪದ ಬಳಿ ಮಂಗಳವಾರ ನಡೆದಿದೆ.
ಘಟನೆಯಲ್ಲಿ ಸಾವನ್ನಪ್ಪಿರುವ ವ್ಯಕ್ತಿ ರಾಮನಗರ ಜಿಲ್ಲೆ ಕನಕಪುರದ ನಾಗೇಶ್(35) ಎಂದು ಗುರುತಿಸಲಾಗಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಸದರಿ ನಾಗೇಶ್ ಮದ್ದೂರು ಪಟ್ಟಣದ ಬಾರ್‍ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದ್ದು, ಈ ಸಂಬಂಧ ಮದ್ದೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story