Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಮಾನ್ಯ ಜನರ ಅರಸರಾಗಿದ್ದ ದೇವರಾಜ ಅರಸು:...

ಸಾಮಾನ್ಯ ಜನರ ಅರಸರಾಗಿದ್ದ ದೇವರಾಜ ಅರಸು: ಎಚ್.ವಿಶ್ವನಾಥ್ ಬಣ್ಣನೆ

6 Jun 2023 3:54 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಾಮಾನ್ಯ ಜನರ ಅರಸರಾಗಿದ್ದ ದೇವರಾಜ ಅರಸು: ಎಚ್.ವಿಶ್ವನಾಥ್ ಬಣ್ಣನೆ

ಮೈಸೂರು,ಜೂ.6: ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ಮಂಗಳವಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು  ಪುಣ್ಯ ಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಅರಸುರ  ಅವರನ್ನು  ಸ್ಮರಿಸಿದರು. 

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮಾತನಾಡಿ, ಹಿಂದುಳಿದ ಹಾಗೂ ಶೋಷಿತರಿಗೆ ರಾಜಕೀಯ ಅಧಿಕಾರ ನೀಡುವ ಮೂಲಕ ಅವರನ್ನು ಸಾಮಾಜಿಕವಾಗಿ ಮುನ್ನೆಲೆಗೆ ತಂದ ದೇವರಾಜ ಅರಸು ಅವರು ನಿಜವಾಗಿಯೂ ಸಾಮಾನ್ಯ ಜನರ ಅರಸರಾಗಿದ್ದರು. ಯಾವುದೇ ಜನಾಂಗ ಸಾಮಾಜಿಕ ಹಾಗೂ ಆರ್ಥಿಕವಾಗಿ ಸಬಲವಾಗಬೇಕಾದರೆ ರಾಜಕೀಯ ಅಧಿಕಾರ ಬಹಳ ಮುಖ್ಯ. ಇದನ್ನು ಮನಗಂಡಿದ್ದ ದೇವರಾಜ ಅರಸು ಅವರು ಸಣ್ಣಪುಟ್ಟ ಜನಾಂಗದವರಿಗೂ ರಾಜಕೀಯ ಅಧಿಕಾರ ನೀಡಿದರು ಎಂದು ಸ್ಮರಿಸಿದರು.

ಉಳುವವನಿಗೇ ಭೂಮಿ ಎಂಬ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತಂದು ಸುಮಾರು 21 ಲಕ್ಷ ಹೆಕ್ಟೇರ್ ಪ್ರದೇಶವನ್ನು ಬಡವರಿಗೆ ನೀಡಿದ್ದು ಐತಿಹಾಸಿಕ ಚರಿತ್ರೆ. ಕಾಂಗ್ರೆಸ್ ಪಕ್ಷದ ಇಂತಹ ಚಾರಿತ್ರಿಕ ತೀರ್ಮಾನವನ್ನು ಜನರ ಬಳಿ ಕೊಂಡೊಯ್ಯಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ವಿಧಾನಪರಿಷತ್ ಸದಸ್ಯ ಡಿ.ತಿಮ್ಮಯ್ಯ ಮಾತನಾಡಿ, ಮಾನವೀಯತೆಗೆ ಮತ್ತೊಂದು ಹೆಸರೇ ದೇವರಾಜ ಅರಸು. ಬಡವರಿಗೆ, ದೀನದಲಿತರಿಗೆ ಸಹಾಯ ಮಾಡುವ ಸಂದರ್ಭ ಎದುರಾದಲ್ಲಿ ಹಿಂದೆ ಮುಂದೆ ಯೋಚಿಸದೆ ಸಹಾಯ ಹಸ್ತ ಚಾಚುತ್ತಿದ್ದರು. ಅವರ ಬಳಿ ಸಹಾಯ ಪಡೆದವರಲ್ಲಿ ನಾನೂ ಕೂಡ ಒಬ್ಬ ಎಂದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್,  ಮೈಲ್ಯಾಕ್ ಮಾಜಿ ಅಧ್ಯಕ್ಷ ಎಚ್.ಎ.ವೆಂಕಟೇಶ್, ಮಾಜಿ ಮೇಯರ್‍ಗಳಾದ ಮೋದಾಮಣಿ, ಪುಷ್ಪಲತಾ ಚಿಕ್ಕಣ್ಣ, ಎಂ.ಸಿ.ಚಿಕ್ಕಣ್ಣ, ನಗರಪಾಲಿಕೆ ಮಾಜಿ ಸದಸ್ಯರಾದ ಆರ್.ಸೋಮಸುಂದರ್, ಶಿವಣ್ಣ, ಪ್ರಧಾನ ಕಾರ್ಯದರ್ಶಿಗಳಾದ ಭಾಸ್ಕರ್ ಎಲ್.ಗೌಡ, ಈಶ್ವರ ಚಕ್ಕಡಿ, ಲತಾ ಸಿದ್ದಶೆಟ್ಟಿ, ಅಬು ಅಹಮದ್, ಪಾರ್ಥಸಾರಥಿ, ಯೋಗೇಶ್ ಉಪ್ಪಾರ್, ಪ್ರಕಾಶ್ ಕುಂಬಾರ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಂ, ಆರ್.ನಾಗೇಶ್, ಕೆ.ಮಾರುತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

''ದೇವರಾಜ ಅರಸರ ಬಗ್ಗೆ ಎಲ್ಲರಿಗೂ ತಿಳಿದಿದೆ. ಆದರೆ, ಯುವಕರಿಗೆ ಅವರ ಬಗ್ಗೆ ಹೆಚ್ಚಾಗಿ ತಿಳಿದಿಲ್ಲ. ಈ ಹಿನ್ನೆಲೆಯಲ್ಲಿ ಅವರ ಬಗ್ಗೆ ಸಾಕ್ಷ್ಯ ಚಿತ್ರ ಸಿದ್ಧಪಡಿಸಿ ಯುವ ಪೀಳಿಗೆಗೆ ಅವರ ಬಗ್ಗೆ ಜಾಗೃತಿ ಮೂಡಿಸಬೇಕು''

ದರ್ಶನ್ ಧ್ರುವನಾರಾಯಣ, ಶಾಸಕ, ನಂಜನಗೂಡು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X