Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ...

ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವಾರ್ಷಿಕ ವೆಚ್ಚ: ಸಿಎಂ ಸಿದ್ದರಾಮಯ್ಯ

"ಜಾತಿವಾರು ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮೀಕ್ಷೆ ವರದಿ ಸ್ವೀಕಾರ"

7 Jun 2023 4:12 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವಾರ್ಷಿಕ ವೆಚ್ಚ: ಸಿಎಂ ಸಿದ್ದರಾಮಯ್ಯ
"ಜಾತಿವಾರು ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮೀಕ್ಷೆ ವರದಿ ಸ್ವೀಕಾರ"

ಬೆಂಗಳೂರು, ಜೂ.7: ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ  ಮುಖ್ಯ ಎಂದವರು ಹೇಳಿದ್ದಾರೆ.

ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ ಎಂದವರು ವಿವರಿಸಿದ್ದಾರೆ.
ಕರ್ನಾಟಕದಲ್ಲಿ ಜನ ಬದಲಾವಣೆ ಬಯಸಿ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ. ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ, ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇಂಥವರ ಕುರಿತು ನಾವು ಎಚ್ಚರದಿಂದಿರಬೇಕು ಎಂದು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು. ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್‌ ಆಗಿತ್ತು. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನು ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವ ಕಳುಹಿಸಿದ್ದರು ಎಂದು ತಿಳಿಸಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.

ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ.
ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ.
- ಮುಖ್ಯಮಂತ್ರಿ…

— CM of Karnataka (@CMofKarnataka) June 6, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X