Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಠ್ಯ ಪರಿಷ್ಕರಣೆ ಧಾವಂತ ನೋಡಿದರೆ ಶಿಕ್ಷಣ...

ಪಠ್ಯ ಪರಿಷ್ಕರಣೆ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು 3ನೇ ವ್ಯಕ್ತಿ ನಿಯಂತ್ರಿಸುತ್ತಿರುವ ಅನುಮಾನ: ಸುನೀಲ್ ಕುಮಾರ್

7 Jun 2023 10:17 AM IST
share
ಪಠ್ಯ ಪರಿಷ್ಕರಣೆ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು 3ನೇ ವ್ಯಕ್ತಿ ನಿಯಂತ್ರಿಸುತ್ತಿರುವ ಅನುಮಾನ: ಸುನೀಲ್ ಕುಮಾರ್

ಬೆಂಗಳೂರು, ಜೂ.7: ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರಕಾರಕ ಕ್ರಮವನ್ನು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಟೀಕಿಸಿದ್ದು, ಪಠ್ಯ ಪರಿಷ್ಕರಣೆ ಬಗ್ಗೆ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು ನಿಯಂತ್ರಿಸುತ್ತಿರುವ ಅನುಮಾನ ಬರುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಅಧಿಕಾರಕ್ಕೆ ಬಂದು ತಿಂಗಳು ಕಳೆಯುವಷ್ಟರಲ್ಲೇ ಸಿದ್ದ ರಾಮಯ್ಯ ಸರ್ಕಾರ ಪಠ್ಯ-ಪುಸ್ತಕ ಪರಿಷ್ಕರಣೆಗೆ ಕೈ ಹಾಕಿದೆ. ಪಠ್ಯದಲ್ಲಿ ಭಾರತೀಯತೆ, ಸಂಸ್ಕ್ರತಿ ಹಾಗೂ ಇತಿಹಾಸದ ನೈಜ್ಯ ಸತ್ಯಗಳೇನು ಎಂಬುದು ವಿದ್ಯಾರ್ಥಿಗಳಿಗೆ ತಿಳಿಯದಂತೆ ಮುಚ್ಚಿಡುವುದು ಸರಕಾರದ ಉದ್ದೇಶವೇ ? ಶಾಲೆಗಳಿಗೆ ಪಠ್ಯ- ಪುಸ್ತಕ ಪೂರೈಕೆಯಾದ ನಂತರ ಪರಿಷ್ಕರಣೆಯ ಹಟವೇಕೆ? ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯನವರೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಇಲಾಖೆಯ ಇತರ ವಿಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುವುದಕ್ಕಾದರೂ ಅವಕಾಶ ಕೊಡಿ. ಅದನ್ನು ಬಿಟ್ಟು ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಕಲಿಸುವ ಪಾಠ ಯಾವುದೆಂದು ನಿರ್ಧರಿಸಿ ಎಂದು ನೀವು ಪಾಠ ಮಾಡಬೇಡಿ ಎಂದು ಹೇಳಿದ್ದಾರೆ.

ನಾನು ಮೇಷ್ಟ್ರಾಗಿದ್ದೆ ಕಣ್ರಿ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡುವುದಕ್ಕೆ ಮುನ್ನ ವಿದ್ಯಾರ್ಥಿ ಹಾಗೂ ಶಿಕ್ಷಕರ ಸಮಸ್ಯೆ ಮೊದಲು ಅರ್ಥ ಮಾಡಿಕೊಳ್ಳಿ. ಪಠ್ಯ ಪರಿಷ್ಕರಣೆ ಬಗ್ಗೆ ನಿಮಗಿರುವ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು ನಿಯಂತ್ರಿಸುತ್ತಿರುವ ಅನುಮಾನ ಬರುತ್ತಿದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯನವರೇ ನಿಮಗೆ ಶ್ರೇಷ್ಠ ಭಾರತೀಯ ಚಿಂತನೆಗಳು, ನಿಜವಾದ ಆದರ್ಶ ಪುರುಷ ಯಾರಾಗಬೇಕು ? ತಾಯಿ ಭಾರತೀಯ ಅಮರಪುತ್ರರು ಎಂಬ ವಿಚಾರಗಳು ಹೇಗೆ ಇಷ್ಟವಾಗುತ್ತದೆ ಹೇಳಿ? ನಿಮ್ಮ ದೃಷ್ಟಿಯಲ್ಲಿ ಶಾಲಾ ಪಠ್ಯದಲ್ಲಿ ನಕಲಿ ಗಾಂಧಿ ಕುಟುಂಬದ ಚರಿತ್ರೆ, ವಿದೇಶಿ ದಾಳಿಯ ವಿಕೃತಿಗಳು ಮಾತ್ರ ತುಂಬಿರಬೇಕಲ್ಲವೇ ? ಎಂದು ಟೀಕಿಸಿದ್ದಾರೆ

ನಿಮ್ಮನ್ನು ಎರಡನೇ ಬಾರಿಗೆ ಮುಖ್ಯಮಂತ್ರಿ ಮಾಡಿದ್ದಾರೆಂಬ ಋಣ ತೀರಿಸಿಕೊಳ್ಳುವುದಕ್ಕಾಗಿ ಗುಲಾಮಿ ಚಿಂತನೆಯನ್ನು ಶಿಕ್ಷಣದಲ್ಲಿ ತುರುಕುತ್ತೀರಾ ? ಎಂದು ಪ್ರಶ್ನಿಸಿದ್ದಾರೆ.

ನಾನು ಮೇಷ್ಟ್ರಾಗಿದ್ದೆ ಕಣ್ರಿ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡುವುದಕ್ಕೆ ಮುನ್ನ ವಿದ್ಯಾರ್ಥಿ ಹಾಗೂ ಶಿಕ್ಷಕರ ಸಮಸ್ಯೆ ಮೊದಲು ಅರ್ಥ ಮಾಡಿಕೊಳ್ಳಿ. ಪಠ್ಯ ಪರಿಷ್ಕರಣೆ ಬಗ್ಗೆ ನಿಮಗಿರುವ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು ನಿಯಂತ್ರಿಸುತ್ತಿರುವ ಅನುಮಾನ ಬರುತ್ತಿದೆ. (3/5)

— Sunil Kumar Karkala (@karkalasunil) June 7, 2023
share
Next Story
X