Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಂಬಾಳು ಮಠದ ಸ್ವಾಮೀಜಿಗೆ 'ಫೇಸ್ ಬುಕ್...

ಕಂಬಾಳು ಮಠದ ಸ್ವಾಮೀಜಿಗೆ 'ಫೇಸ್ ಬುಕ್ ಗೆಳತಿ'ಯಿಂದ 37 ಲಕ್ಷ ರೂ. ವಂಚನೆ: ದೂರು

7 Jun 2023 6:16 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಂಬಾಳು ಮಠದ ಸ್ವಾಮೀಜಿಗೆ ಫೇಸ್ ಬುಕ್ ಗೆಳತಿಯಿಂದ 37 ಲಕ್ಷ ರೂ. ವಂಚನೆ: ದೂರು

ಬೆಂಗಳೂರು, ಜೂ.7: ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿಗೆ ಫೇಸ್ ಬುಕ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ದಾಬಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೇಸ್‌ಬುಕ್‌ನಲ್ಲಿ ಪರಿಚಯವಾಗಿ, ನಂತರ ವಿಡಿಯೊ ಕಾಲ್‌ಗಳ ಮೂಲಕ ಸಲುಗೆ ತೋರುತ್ತಿದ್ದ ಯುವತಿ ನಾನಾ ಕಾರಣಗಳನ್ನು ನೀಡಿ ತನ್ನಿಂದ 37 ಲಕ್ಷ ರೂಪಾಯಿ ಪಡೆದು ವಂಚಿಸಿರುವುದಾಗಿ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣದ ವಿವರ: ಶಿವಾಚಾರ್ಯ ಸ್ವಾಮೀಜಿಗೆ 2020ರಲ್ಲಿ ವರ್ಷಾ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್‌ ಬಂದಿತ್ತು. ಅವರನ್ನು ಸ್ವಾಮೀಜಿ ಫ್ರೆಂಡ್ ಮಾಡಿಕೊಂಡಿದ್ದರು. ಅಧ್ಯಾತ್ಮದಲ್ಲಿ ಆಸಕ್ತಿ ಇದೆ ಎನ್ನುತ್ತಾ ಯುವತಿಯು ಸ್ವಾಮೀಜಿಯೊಂದಿಗೆ ಚಾಟ್ ಮಾಡುತ್ತಿದ್ದಳು. ಸ್ವಾಮೀಜಿಯ ಮೊಬೈಲ್ ನಂಬರ್‌ ಪಡೆದಿದ್ದಲ್ಲದೆ, ತನ್ನ ನಂಬರ್‌ ಕೂಡ ಸ್ವಾಮೀಜಿಗೆ ನೀಡಿದ್ದಳು ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಮೊಬೈಲ್ ನಂಬರ್ ಪಡೆದ ಬಳಿಕ ವಾಟ್ಸ್‌ಆ್ಯಪ್‌ನಲ್ಲಿ ಚಾಟ್‌ ಮಾಡುತ್ತಿದ್ದ ಯುವತಿ ತಾನೊಬ್ಬ ಅನಾಥೆ ಎಂದು ಹೇಳಿದ್ದಳು. ವಿಡಿಯೊ ಕಾಲ್‌ ಮಾಡುತ್ತಿದ್ದ ಯುವತಿ ಯುವತಿ, ಎಂದಿಗೂ ಮುಖ ತೋರಿಸಿರಲಿಲ್ಲ. ಕೈ–ಕಾಲುಗಳನ್ನು ಮಾತ್ರ ತೋರಿಸಿ ಮಾತನಾಡುತ್ತಿದ್ದಳು” ಎಂದೂ ಸ್ವಾಮೀಜಿ ದೂರಿನಲ್ಲಿ ಹೇಳಿದ್ದಾರೆ.

“ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್ ಮಾಡುತ್ತಿರುವುದಾಗಿ ಹೇಳಿದ್ದ ಯುವತಿ ಮೊದಲಿಗೆ 2 ಲಕ್ಷ ರೂ. ನನ್ನಿಂದ ಪಡೆದುಕೊಂಡಿದ್ದಳು. ತನ್ನ ಹೆಸರಿನಲ್ಲಿರುವ ಜಮೀನನ್ನು ಮಠದ ಹೆಸರಿಗೆ ಬರೆದುಕೊಡುವುದಾಗಿ ಹೇಳಿ, ಹಂತಹಂತವಾಗಿ ಹೆಚ್ಚುವರಿಯಾಗಿ 35 ಲಕ್ಷ ರೂ. ವರ್ಗಾವಣೆ ಮಾಡಿಸಿಕೊಂಡಿದ್ದಳು” ಎಂದು ಸ್ವಾಮೀಜಿ ತಿಳಿಸಿದ್ದಾರೆ.

ಒಮ್ಮೆ “ಜಮೀನು ದಾಖಲೆ ತರುವ ವೇಳೆ ನನ್ನ ಮೇಲೆ ಹಲ್ಲೆಯಾಗಿದೆ, ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದೇನೆ" ಎಂದು ಹೇಳಿದ್ದ ವರ್ಷಾ, ಆಸ್ಪತ್ರೆಯ ಬಿಲ್ ಪಾವತಿಗಾಗಿ ಹಣ ಕಳುಹಿಸುವಂತೆ ಕೇಳಿದ್ದಳು. ಆದರೆ ಈ ಬಗ್ಗೆ ಅನುಮಾನಗೊಂಡು ತಾನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಪರಿಚಯಸ್ಥರೊಬ್ಬರನ್ನು ಕಳಿಸಿ ವಿಚಾರಿಸಿದಾಗ ವರ್ಷಾ ಎಂಬವರು ಯಾರೂ ದಾಖಲಾಗಿಲ್ಲ ಎಂದು ತಿಳಿಯಿತು ಎಂದಿದ್ದಾರೆ ಸ್ವಾಮೀಜಿ ದೂರಿನಲ್ಲಿ ವಿವರಿಸಿದ್ದಾರೆ.

 ಆ ಬಳಿಕ ವರ್ಷಾ ಸ್ನೇಹಿತೆ ಎನ್ನಲಾದ ಮಂಜುಳಾ ಎಂಬಾಕೆ ತನಗೆ ಕರೆ ಮಾಡಿ, 55 ಲಕ್ಷ ರೂ. ಸಾಲ ಮಾಡಿ ವರ್ಷಾರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದಾಗಿ ಹೇಳಿದ್ದು, ಆ ಸಾಲವನ್ನು ತೀರಿಸಬೇಕು. ನೀವು ಹಣ ನೀಡದಿದ್ದರೆ ವರ್ಷಾ ಜೊತೆಗಿನ ಸಲುಗೆಯ ವಿಷಯವನ್ನು ಎಲ್ಲರಿಗೂ ಹೇಳಿ ಮರ್ಯಾದೆ ತೆಗೆಯುತ್ತೇನೆ ಎಂದು ಬೆದರಿಸಿದ್ದಾಳೆ” ಎಂದು ಸ್ವಾಮೀಜಿ ಹೇಳಿರುವುದಾಗಿ ವರದಿಯಾಗಿದೆ.

ವರ್ಷಾ ಕಡೆಯವರು ಎನ್ನಲಾದ ಮಂಜುಳಾ ಹಾಗೂ ಇತರರು ಮೇ 23ರಂದು ಮಠಕ್ಕೆ ಹೋಗಿ  55 ಲಕ್ಷ ರೂ. ಕೊಡುವಂತೆ ಸ್ವಾಮೀಜಿಗೆ ಧಮ್ಕಿ ಹಾಕಿ ಗಲಾಟೆ ಮಾಡಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಪೊಲೀಸ್ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X