ಮಧ್ಯಪ್ರದೇಶ: ಹಳಿ ತಪ್ಪಿದ ಎಲ್‌ಪಿಜಿ ಸಾಗಿಸುತ್ತಿದ್ದ ಗೂಡ್ಸ್ ರೈಲು, ತಪ್ಪಿದ ಭಾರೀ ಅನಾಹುತ

ಭೋಪಾಲ್: ಮಧ್ಯಪ್ರದೇಶದ ಜಬಲ್‌ಪುರ್ ಜಿಲ್ಲೆಯ ಗ್ಯಾಸ್ ಫ್ಯಾಕ್ಟರಿಯೊಂದರಲ್ಲಿ ರೇಕ್‌ಗಳನ್ನು ಖಾಲಿ ಮಾಡಲು ಹೋಗುತ್ತಿದ್ದ ಗೂಡ್ಸ್ ರೈಲಿನ ಎಲ್‌ಪಿಜಿ ರೇಕ್‌ಗಳಿದ್ದ ಎರಡು ವ್ಯಾಗನ್‌ಗಳು ಹಳಿತಪ್ಪಿದ ನಂತರ ಅದೃಷ್ಟವಶಾತ್ ಭಾರೀ ಅಪಘಾತವೊಂದು ತಪ್ಪಿದೆ.
ಜಿಲ್ಲೆಯ ಶಹಪುರ ಭಿಟೋನಿ ನಿಲ್ದಾಣದ ಭಾರತ್ ಪೆಟ್ರೋಲಿಯಂ ಡಿಪೋ ಬಳಿ ಈ ಘಟನೆ ನಡೆದಿದೆ.
ಮಾಹಿತಿ ಪಡೆದ ಕೂಡಲೇ ರೈಲ್ವೆ ಅಧಿಕಾರಿಗಳು ಅಪಘಾತ ಪರಿಹಾರ ವಾಹನದೊಂದಿಗೆ ತಡರಾತ್ರಿ ಸ್ಥಳಕ್ಕೆ ತಲುಪಿದರು. ಪರಿಹಾರ ಕಾರ್ಯ ಭರದಿಂದ ಸಾಗುತ್ತಿದೆ.
Next Story