ಹುಬ್ಬಳ್ಳಿ- ಧಾರವಾಡ ಮನಪಾ: ಜೂ.20ರಂದು ಮೇಯರ್-ಉಪಮೇಯರ್ ಆಯ್ಕೆ ಚುನಾವಣೆ
ಧಾರವಾಡ, ಜೂ.7: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಗೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಜೂ.20ರಂದು ಚುನಾವಣೆ ನಿಗದಿಪಡಿಸಲಾಗಿದೆ ಎಂದು ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಅಧ್ಯಕ್ಷಾಧಿಕಾರಿಯೂ ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟನೆ ಹೊರಡಿಸಿರುವ ಅವರು, ಜೂನ್ 20ರಂದು ಬೆಳಗ್ಗೆ 9 ರಿಂದ ಪೂ.11ರವರೆಗೆ ಧಾರವಾಡದ ಪಾಲಿಕೆಯ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಭಾಭವನದಲ್ಲಿ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು ಮತ್ತು ಮಧ್ಯಾಹ್ನ 1 ಗಂಟೆಗೆ ಸಭೆ ಪ್ರಾರಂಭಿಸಲಾಗುವುದು.
ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪ ಮೇಯರ್ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ನಿಗದಿಗೊಳಿಸಲಾಗಿದೆ.
Next Story