ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ: ನೋಂದಣಿಗೆ ಸೂಚನೆ

ಉಡುಪಿ, ಜೂ.7: ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿ ಗಳಿಗೆ ಅರ್ಬನ್ ಮ್ಯಾನೇಜ್‌ಮೆಂಟ್ ಅಂಡ್ ವಾಟರ್ ಕನ್ಸರ್‌ವೇಷನ್ ವಿಷಯದ ಕುರಿತು ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯು (ಲಿಖಿತ ಮತ್ತು ಮೌಖಿಕ) ಜೂನ್ 27ರಂದು ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯ ಜಿ.ಕೆ.ವಿ.ಕೆ ಆವರಣದ ಪ್ರೊ.ಯು.ಆರ್.ರಾವ್ ವಿಜ್ಞಾನ ಭವನದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಕಚೇರಿಯಲ್ಲಿ ನಡೆಯಲಿದೆ.
ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಜೂನ್ 23ರ ಒಳಗೆ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ಯ ವೆಬ್‌ಸೈಟ್ - www.kstacademy.in-ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story