ಸಕಲೇಶಪುರ: ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು ಅಸ್ವಸ್ಥ

ಸಕಲೇಶಪುರ : ಜೂ,7: ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಚಾಲನ ತರಬೇತಿ ಸೈನಿಕರು ಅಸ್ವಸ್ಥಗೊಂಡ ಸಕಲೇಶಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ತಾಲೂಕಿನ ಕುಡುಗರಹಳ್ಳಿ ಬಳಿಯ ಕ್ಯಾಂಪ್‌ನಲ್ಲಿರುವ ಚಾಲನಾ ತರಬೇತಿಗೆ ಬಂದಿರುವ ಸೈನಿಕರು ಬುಧವಾರ ಮಧ್ಯಾಹ್ನ ಕ್ಯಾಂಪ್‌ನಲ್ಲೇ ತಯಾರಾದ ಆಹಾರ ಸೇವಿಸಿದ ನಂತರ ಅಸ್ವಸ್ಥಗೊಂಡಿದ್ದಾರೆನ್ನಲಾಗಿದೆ.
ಎಲ್ಲಾ ಸೈನಿಕರಿಗೆ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿನೀಡಿ ಅಸ್ವಸ್ಥಗೊಂಡಿರುವ ಸೈನಿಕ ಆರೋಗ್ಯ ವಿಚಾರಿಸಿದರು.
''ಸೈನಿಕರಿಗೆ ಯಾವುದೇ ಪ್ರಾಣ ಅಪಾಯವಿಲ್ಲ ಎಲ್ಲರೂ ಚೇತರಿಸಿಕೊಂಡಿದ್ದಾರೆ'' ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
Next Story