Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗೃಹ ಮಂಡಳಿಯಿಂದ ಬೆಂಗಳೂರು ಹೊರವಲಯದ 5...

ಗೃಹ ಮಂಡಳಿಯಿಂದ ಬೆಂಗಳೂರು ಹೊರವಲಯದ 5 ಕಡೆ ಹೈಟೆಕ್ ಸಿಟಿ ನಿರ್ಮಾಣ: ಸಚಿವ ಝಮೀರ್ ಅಹ್ಮದ್‍ ಖಾನ್

7 Jun 2023 2:45 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಗೃಹ ಮಂಡಳಿಯಿಂದ ಬೆಂಗಳೂರು ಹೊರವಲಯದ 5 ಕಡೆ ಹೈಟೆಕ್ ಸಿಟಿ ನಿರ್ಮಾಣ: ಸಚಿವ ಝಮೀರ್ ಅಹ್ಮದ್‍ ಖಾನ್

ಬೆಂಗಳೂರು, ಜೂ.7: ರಾಜಧಾನಿ ಬೆಂಗಳೂರು ಹೊರವಲಯದ ಐದು ಕಡೆ ಗೃಹ ಮಂಡಳಿ ವತಿಯಿಂದ ಹೈಟೆಕ್ ಸಿಟಿ(ಉಪನಗರ)ನಿರ್ಮಾಣ ಹಾಗೂ ನಾಲ್ಕು ಕಡೆ  ಐಷಾರಾಮಿ ವಿಲ್ಲಾ  ಯೋಜನೆ ಬಗ್ಗೆ ರೂಪು ರೇಷೆ ಸಿದ್ಧಪಡಿಸಲು ವಸತಿ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಸೂಚನೆ ನೀಡಿದ್ದಾರೆ.

ಬುಧವಾರ ನಗರದ ಕಾವೇರಿ ಭವನದಲ್ಲಿ ಗೃಹ ಮಂಡಳಿಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಬೆಂಗಳೂರಿನಲ್ಲಿ ವಸತಿ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಲಾ ಎರಡು ಸಾವಿರ ಎಕರೆ ಪ್ರದೇಶದಲ್ಲಿ ವಿಶ್ವ ದರ್ಜೆ ಸೌಲಭ್ಯ ಹೊಂದಿರುವ ಟೌನ್ ಶಿಪ್ ಹಾಗೂ ಖಾಸಗಿ ವಲಯದ ಮಾದರಿ ಐಷಾರಾಮಿ ವಿಲ್ಲಾ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ದಪಡಿಸಲು ಹಾಗೂ ಅಗತ್ಯ ಜಮೀನು ಗುರುತಿಸಲು ನಿರ್ದೇಶನ ನೀಡಿದರು.

ಪ್ರತಿ ಉಪನಗರ ಯೋಜನೆಯಲ್ಲಿ 30 ಸಾವಿರ ನಿವೇಶನ ಹಾಗೂ ಐದು ಸಾವಿರ ಮನೆ ನಿರ್ಮಾಣ ಮಾಡಲು ಅವಕಾಶ ಇರುವಂತೆ ಯೋಜನೆ ರೂಪಿಸಬೇಕು. ವಿಲ್ಲಾ ಯೋಜನೆಗೆ ನಿಸರ್ಗದ ನಡುವಿನ 500 ಎಕರೆ ಪ್ರದೇಶ ಗುರುತಿಸಲುಸೂಚಿಸಿದರು. ಬಡವರಿಗಾಗಿ ರೂಪಿಸುವ ಯೋಜನೆಗಳಲ್ಲಿ ಲಾಭ ನೋಡಬೇಡಿ. ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಆಗಬೇಡಿ ಎಂದು ಅವರು ತಾಕೀತು ಮಾಡಿದರು.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಝಮೀರ್ ಅಹ್ಮದ್ ಖಾನ್, ನಗರದ ಒತ್ತಡ ಕಡಿಮೆ ಮಾಡಲು ಹೊರವಲಯದಲ್ಲಿ ಉಪನಗರ ನಿರ್ಮಾಣ ಅನಿವಾರ್ಯ. ಮೆಟ್ರೋ ಸೇರಿದಂತೆ ಸಮರ್ಪಕ ಸಾರಿಗೆ ವ್ಯವಸ್ಥೆ ಗಮನದಲ್ಲಿಟ್ಟುಕೊಂಡು ಉಪನಗರ ನಿರ್ಮಾಣ ಆಗಲಿದೆ ಎಂದು ತಿಳಿಸಿದರು.

ಪ್ರತಿ ಉಪನಗರ ಎರಡು ಸಾವಿರ ಎಕರೆ ಪ್ರದೇಶದಲ್ಲಿ ತಲೆ ಎತ್ತಲಿದ್ದು 30 ಸಾವಿರ ನಿವೇಶನ, ಐದು ಸಾವಿರ ಮನೆ ನಿರ್ಮಾಣ ಆಗಲಿದೆ. ಐದು ಉಪನಗರಗಳಲ್ಲಿ ಒಟ್ಟು 1.50 ಲಕ್ಷ ನಿವೇಶನ, 25 ಸಾವಿರ ಮನೆ ನಿರ್ಮಾಣ ಆಗಲಿದೆ ಎಂದು ಅವರು ವಿವರಿಸಿದರು.

ಅದೇ ರೀತಿ ಬೆಂಗಳೂರು ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದ್ದು, ವಿದೇಶಗಳಿಂದ ಇಲ್ಲಿ ಖಾಯಂ ವಾಸಿಸಲು ಸಾಕಷ್ಟು ಉದ್ಯಮಿಗಳು, ಗಣ್ಯರು ಬರುತ್ತಿದ್ದಾರೆ. ಹೊರವಲಯದಲ್ಲಿ ವಿಲ್ಲಾಗಳಿಗೆ ಬೇಡಿಕೆ ಇದೆ. ಹೀಗಾಗಿ ಗೃಹಮಂಡಳಿ ವತಿಯಿಂದ ಐಷಾರಾಮಿ ವಿಲ್ಲಾ ಯೋಜನೆ ರೂಪಿಸಲಾಗುವುದು. ಒಂದೊಂದು ವಿಲ್ಲಾ ಯೋಜನೆ 500 ಎಕರೆ ಪ್ರದೇಶದಲ್ಲಿ ಬರಲಿದ್ದು ಒಟ್ಟು 1000 ವಿಲ್ಲಾ ನಿರ್ಮಾಣ ಮಾಡಲಾಗುವುದು ಎಂದು ಅವರು ತಿಳಿಸಿದರು.

ಜಮೀನು ಮಾಲಕರೊಂದಿಗೆ 50:50 ಸಹಭಾಗಿತ್ವದಲ್ಲಿ ಯೋಜನೆ ಅನುಷ್ಠಾನವಾಗಲಿದ್ದು  ಗೃಹಮಂಡಳಿಗೆ ಭೂ ಸ್ವಾಧಿನ ವೆಚ್ಚದ ಹೊರೆಯಾಗುವುದಿಲ್ಲ ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದರು. ಈ ಸಂದರ್ಭದಲ್ಲಿ ವಸತಿ ಇಲಾಖೆ ಕಾರ್ಯದರ್ಶಿ ರವಿಕುಮಾರ್, ಗೃಹಮಂಡಳಿ ಆಯುಕ್ತರಾದ ಕವಿತಾ ಎಸ್.ಮನ್ನಿಕೇರಿ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X