Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಾಯುಭಾರ ಕುಸಿತ: ಎಚ್ಚರಿಕೆ ವಹಿಸಲು ದ.ಕ....

ವಾಯುಭಾರ ಕುಸಿತ: ಎಚ್ಚರಿಕೆ ವಹಿಸಲು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಸೂಚನೆ

7 Jun 2023 8:37 PM IST
share
ವಾಯುಭಾರ ಕುಸಿತ: ಎಚ್ಚರಿಕೆ ವಹಿಸಲು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಸೂಚನೆ

ಮಂಗಳೂರು, ಜೂ.7: ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಅದರಂತೆ ಜೂ.11 ರವರೆಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಸೂಚನೆ ನೀಡಿದ್ದಾರೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರಿಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಲಾಗಿದೆ.

ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ಪ್ರವಾಸಿಗರು, ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸುವುದು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈಟೋಲ್ ಫ್ರೀ ಸಂಖ್ಯೆ 24/7 ಕಂಟ್ರೋಲ್‌ ರೂಮ್- 1077/0824-2442590 ಸಂಪರ್ಕಿಸಬಹುದಾಗಿದೆ.

ತುರ್ತು ಸೇವೆಗೆ ನಿಯಂತ್ರಣ ಕೊಠಡಿಗಳ ವಿವರ

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಂಟ್ರೋಲ್‌ ರೂಮ್‌ ದೂರವಾಣಿ ಸಂಖ್ಯೆ-1077 (0824- 2442590) 24/7 ಕಾರ್ಯಾಚರಣೆಯಲ್ಲಿರುತ್ತದೆ.

ವಿಪತ್ತು ನಿರ್ವಹಣೆ ಕುರಿತಾಗಿ ನಿರ್ದೇಶನಗಳನ್ನು ನೀಡಲು, ತುರ್ತಾಗಿ ಮಾಹಿತಿಯನ್ನು ಸಂಗ್ರಹಿಸಲು ಹಾಗೂ ಸಂಬಂಧಿಸಿದವರಿಗೆ ವಿನಿಮಯ ಮಾಡಿಕೊಳ್ಳಲು ಪ್ರತ್ಯೇಕವಾಗಿ ಜಿಲ್ಲಾ ಮಟ್ಟದ, ಉಪ ವಿಭಾಗ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನೊಳಗೊಂಡ ವಾಟ್ಸ್ಆ್ಯಪ್‌ ಗ್ರೂಪ್‌ ರಚಿಸಲಾಗಿದೆ.

ಜಿಲ್ಲೆಯ ಎಲ್ಲಾ ಉಪ-ವಿಭಾಗಾಧಿಕಾರಿಗಳ ಹಾಗೂ ಎಲ್ಲಾ ತಹಶೀಲ್ದಾರರ ಕಾರ್ಯಾಲಯದಲ್ಲಿ ಕಂಟ್ರೋಲ್‌ ರೂಮ್ ಗಳನ್ನು ತೆರೆದು 24/7 ಕಾಲ ಕಾಯನಿರ್ವಹಿಸುವ ಮೂಲಕ ಪ್ರತಿ ದಿನ ಮಳೆ ಮತ್ತು ಮಳೆಹಾನಿ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಕಡ್ಡಾಯವಾಗಿ ಸಲ್ಲಿಸುವಂತೆ ನಿರ್ದೇಶನ ನೀಡಲಾಗಿರುತ್ತದೆ.

ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿಯಂತ್ರಣ ಕೊಠಡಿ ಸಂಖ್ಯೆಗಳು: ಮಂಗಳೂರು- 0824-2220587/596, ಉಳ್ಳಾಲ-0824-2204424, ಬಂಟ್ವಾಳ-08255-232120/232500, ಪುತ್ತೂರು- 08251-230349/232799, ಬೆಳ್ತಂಗಡಿ-08256-232047/233123, ಸುಳ್ಯ- 08257-231231/230330/298330, ಮೂಡಬಿದ್ರೆ- 08258-238100/239900, ಕಡಬ-08251-260435, ಮುಲ್ಕಿ- 0824-2294496 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
Next Story
X