ಬೈಕ್ ಢಿಕ್ಕಿ: ಪಾದಚಾರಿ ಮೃತ್ಯು
ಕೋಟ, ಜೂ.7: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಾಸ್ತಾನ ಜಂಕ್ಷನ್‌ನ ಡಿವೈಡರ್ ಬಳಿ ಜೂ.6ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಗುಂಡ್ಮಿ ಕೋಡಿ ರಸ್ತೆಯ ಪಿ.ಎಸ್.ಮೊದಿನಬ್ಬ(75) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬೈಕ್ ರಸ್ತೆ ಬದಿಯ ಮಣ್ಣು ರಸ್ತೆಯಲ್ಲಿ ನಿಂತಿದ್ದ ಮೊದಿನಬ್ಬರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಇವರು ಮಣಿಪಾಲ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story