ಜೂನ್ 8: ಮೀನುಗಾರಿಕಾ ಸಚಿವರು ಉಡುಪಿಗೆ ಭೇಟಿ

ಉಡುಪಿ, ಜೂ.7: ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಮಾಂಕಾಳು ವೈದ್ಯ ಅವರು ಜೂನ್ 8ರ ಗುರುವಾರ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಜೂನ್ 8ರ ಅಪರಾಹ್ನ 3:00 ಗಂಟೆಗೆ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರಾವಳಿ ಭಾಗದ ಪ್ರಮುಖ ಸಮಸ್ಯೆ ಯಾದ ಕಡಲ ಕೊರೆತದ ಬಗ್ಗೆ ಜಿಲ್ಲಾಧಿಕಾರಿ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story