Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಾಖಂಡದ ಗಡಿಯಲ್ಲಿ ಚೀನಾದಿಂದ ಸೇನಾ...

ಉತ್ತರಾಖಂಡದ ಗಡಿಯಲ್ಲಿ ಚೀನಾದಿಂದ ಸೇನಾ ಗ್ರಾಮಗಳ ನಿರ್ಮಾಣ: ಉಪಗ್ರಹ ಚಿತ್ರಗಳಿಂದ ಬಹಿರಂಗ

7 Jun 2023 5:25 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉತ್ತರಾಖಂಡದ ಗಡಿಯಲ್ಲಿ ಚೀನಾದಿಂದ ಸೇನಾ ಗ್ರಾಮಗಳ ನಿರ್ಮಾಣ: ಉಪಗ್ರಹ ಚಿತ್ರಗಳಿಂದ ಬಹಿರಂಗ

ಹೊಸದಿಲ್ಲಿ: ಸಿಕ್ಕಿಂ, ಲಡಾಖ್ ಹಾಗೂ ಅರುಣಾಚಲ ಪ್ರದೇಶದ ಗಡಿ ಭಾಗದ ಪ್ರದೇಶಗಳಲ್ಲಿ ಅತಿಕ್ರಮಣ ಪ್ರಯತ್ನಗಳನ್ನು ನಡೆಸಿದ ಬಳಿಕ ಚೀನಿ ಸೇನೆಯು ಈಗ ಉತ್ತರಾಖಂಡದ ಗಡಿಭಾಗದುದ್ದಕ್ಕೂ ತನ್ನ ಮಿಲಿಟರಿ ಮೂಲಸೌಕರ್ಯವನ್ನು ಬಲಪಡಿಸುವ ಬಗ್ಗೆ ಗಮನಹರಿಸಿದೆ ಹಾಗೂ ಅಲ್ಲಿ ತನ್ನ ಸೇನಾ ವಸತಿ ಸಂಕೀರ್ಣಗಳನ್ನು ನಿರ್ಮಿಸಿರುವುದಾಗಿ ‘ ದಿ ಇಂಡಿಯಾಟುಡೇ’ ಸುದ್ದಿಜಾಲತಾಣ ವರದಿ ಮಾಡಿದೆ. 

ಉತ್ತರಾಖಂಡದ ಗಡಿಗೆ ನೇರವಾಗಿರುವ ತನ್ನ ಭೂಪ್ರದೇಶದಲ್ಲಿ ಚೀನಾವು ಸೇನಾ ಗ್ರಾಮಗಳನ್ನು ನಿರ್ಮಿಸಿರುವುದು ಉಪಗ್ರಹ ಚಿತ್ರಗಳಿಂದ ದೃಢಪಟ್ಟಿದೆ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ.

ಉತ್ತರಕಾಶಿಯಲ್ಲಿರುವ ಪುಲಾಂ ಸುಮ್ದಾದಿಂದ 40 ಕಿ.ಮೀ. ದೂರದಲ್ಲಿರುವ ಚೀನಾದ ಗಡಿಭಾಗದಲ್ಲಿ 2022ರ ಎಪ್ರಿಲ್ ಹಾಗೂ ಮೇ ತಿಂಗಳ ನಡುವೆ ಇಂತಹ ರಚನೆಗಳು ನಿರ್ಮಾಣವಾಗಿರುವುದು ಕಂಡುಬಂದಿದೆ. ಉತ್ತರಾಖಂಡದ ಬಾರಾಹೋಟಿ ಪಟ್ಟಣಕ್ಕೆ ಪೂರ್ವದಲ್ಲಿರುವ ಇನ್ನೊಂದು ಪ್ರಾಂತದಲ್ಲಿ ಚೀನಿಯರ ಚಟುವಟಿಕೆ ಹೆಚ್ಚಿರುವುದು ಕಂಡುಬಂದಿದೆ.ಎಂದು ವರದಿ ತಿಳಿಸಿದೆ.

ಉತ್ತರಖಂಡಕ್ಕೆ ತಾಗಿಕೊಂಡಿರುವ ಚೀನಾ ಗಡಿಯಲ್ಲಿ ಈವರೆಗೆ ಯಾವುದೇ ಸೇನಾ ಉದ್ವಿಗ್ನತೆ ವರದಿಯಾಗಿರಲಿಲ್ಲ. ಇದೀಗ ಆ ಪ್ರದೇಶದ ಗಡಿಭಾಗದಲ್ಲಿಯೂ ಚೀನಾ ತನ್ನ ಚಟುವಟಿಕೆಗಳನ್ನು ಹೆಚ್ಚಿಸಿರುವುದು ಗಮನಾರ್ಹವೆಂಬುದು ವರದಿ ತಿಳಿಸಿದೆ.

ಈ ಸೇನಾಗ್ರಾಮದಲ್ಲಿರುವ ಕಟ್ಟಡ, ನಿರ್ಮಾಣಗಳನ್ನು ಅತ್ಯಂತ ತ್ವರಿತ ಗತಿಯಲ್ಲಿ ನಿರ್ಮಿಸಲಾಗಿದೆಯೆಂಬುದು ಉಪಗ್ರಹಚಿತ್ರಗಳ ವಿಶ್ಲೇಷಣೆಯಿಂದ ತಿಳಿದುಬರುತ್ತದೆ. ಕೇವಲ ಒಂದೇ ತಿಂಗಳಲ್ಲಿ ಅಲ್ಲಿ 100ಕ್ಕೂ ಅಧಿಕ ರಚನೆಗಳನ್ನು ನಿರ್ಮಿಸಲಾಗಿದೆಯೆಂದು ವರದಿ ಹೇಳಿದೆ.

ಈ ಗಡಿ ಗ್ರಾಮಗಳಲ್ಲಿ ವಸತಿಸಂಕೀರ್ಣಗಳನ್ನು ಪ್ರಾಥಮಿಕವಾಗಿ ಸೇನಾ ಉದ್ದೇಶಕ್ಕಾಗಿಯೇ ನಿರ್ಮಿಸಲಾಗಿದೆಯೆಂಬುದು ಭಾರತೀಯ ಸೇನಾ ಮೂಲಗಳು ತಿಳಿಸಿವೆ. ಗಡಿಭಾಗದಲ್ಲಿ ಸೇನಾ ಪಡೆಗಳ ನಿಯೋಜನೆಯನ್ನು ಹೆಚ್ಚಿಸಿದಲ್ಲಿ ಅವುಗಳ ವಾಸ್ತವ್ಯಕ್ಕೆ ಅವಕಾಶ ನೀಡುವ ಸಾಮರ್ಥ್ಯವನ್ನು ಈ ವಸತಿ ಸಂಕೀರ್ಣಗಳು ಹೊಂದಿವೆ ಎಂದು ವರದಿ ತಿಳಿಸಿದೆ.

ತನ್ನ ಗಡಿಪ್ರದೇಶಗಳ ಸಮೀಪ ಮಾದರಿ ಸಂಯೋಜಿತ ಗ್ರಾಮಗಳನ್ನು ಸ್ಥಾಪಿಸುವ ಪರಿಪಾಠವನ್ನು ಚೀನಾದ ಪೀಪಲ್ಸ್ ಲೀಬರೇಶನ್ ಆರ್ಮಿ (ಪಿಎಲ್ಎ) ದೀರ್ಘಕಾಲದಿಂದ ಅನುಸರಿಸುತ್ತಾ ಬಂದಿದೆ.

ವಿಶೇಷವಾಗಿ ಪೂರ್ವ ಲಡಾಖ್ ಹಾಗೂ ಸಿಕ್ಕಿಂ ಹಾಗೂ ಅರುಣಾಚಲ ಪ್ರದೇಶಕ್ಕೆ ತಾಗಿಕೊಂಡಿರುವ ಗಡಿಭಾಗಗಳಲ್ಲಿಯೂ ಚೀನಾವು ಈ ಮೊದಲು ಸೇನಾ ಗ್ರಾಮಗಳನ್ನು ನಿರ್ಮಿಸಿದ್ದಾಗಿ ವರದಿಯು ಗಮನಸೆಳೆದಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X