ಚಿತ್ರದುರ್ಗ: ನಿಂತಿದ್ದ ಲಾರಿಗೆ ಆಂಬ್ಯುಲೆನ್ಸ್ ಢಿಕ್ಕಿ; ಮೂವರು ಮೃತ್ಯು

ಚಿತ್ರದುರ್ಗ: ಮೃತ ದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಒಂದು ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಆಂಬ್ಯುಲೆನ್ಸ್ ನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ರಾ.ಹೆ 48ರಲ್ಲಿ ಗುರುವಾರ ಬೆಳಗ್ಗೆ ವರದಿಯಾಗಿದೆ.
ಆಂಬ್ಯುಲೆನ್ಸ್ ನಲ್ಲಿದ್ದ ತಮಿಳುನಾಡಿನ ತಿರುನಲ್ವೇಲಿಯ ಕನಕಮಣಿ(72), ಆಕಾಶ್ (17) ಮತ್ತು ಅಂಬುಲೆನ್ಸ್ ಚಾಲಕ ಮೃತಪಟ್ಟವರು ಎಂದು ತಿಳಿದು ಬಂದಿದೆ.
ಆಂಬ್ಯುಲೆನ್ಸ್ ಗುಜರಾತ್ ನಿಂದ ತಮಿಳುನಾಡಿನ ತಿರುನಲ್ವೇಲಿಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಆಂಬ್ಯುಲೆನ್ಸ್ ನಲ್ಲಿದ್ದ ಮತ್ತಿಬ್ಬರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Story